ಟಿ20 ವಿಶ್ವಕಪ್ | ನೆದರ್ಲೆಂಡ್ಸ್ ವಿರುದ್ಧ ಭಾರತ 194 ರನ್‌ಗಳ ಗುರಿ; ಶಿವಂ ದುಬೆ ಸ್ಫೋಟಕ ಆಟ

Date:

ಅಹಮದಬಾದ್‌ನ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ‘ಗ್ರೂಪ್ ಎ’ ವಿಭಾಗದ 36ನೇ ಪಂದ್ಯದಲ್ಲಿ, ಶಿವಂ ದುಬೆ (66) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಭಾರತ ತಂಡವು ನೆದರ್ಲೆಂಡ್ಸ್ ವಿರುದ್ಧ 193 ರನ್‌ಗಳ ಭರ್ಜರಿ ಮೊತ್ತ ಕಲೆಹಾಕಿದೆ. ಈ ಮೂಲಕ ಎದುರಾಳಿ ತಂಡಕ್ಕೆ 194 ರನ್‌ಗಳ ಕಠಿಣ ಗುರಿ ನೀಡಿದೆ.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ನಿರ್ಧಾರವನ್ನು ಬ್ಯಾಟರ್‌ಗಳು ಸಮರ್ಥಿಸಿಕೊಂಡರು. ಆರಂಭದಲ್ಲಿ ರನ್ ಗತಿಗೆ ತುಸು ಲಗಾಮು ಬಿದ್ದಿತ್ತು. 10 ಓವರ್‌ಗಳ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು ಕೊಂಚ ಸಂಕಟದಲ್ಲಿದ್ದ ತಂಡಕ್ಕೆ, ದುಬೆ ಮತ್ತು ಹಾರ್ದಿಕ್ ಪಾಂಡ್ಯ ಆಸರೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗೆ ಇಳಿದ ಶಿವಂ ದುಬೆ, ನೆದರ್ಲೆಂಡ್ಸ್ ಬೌಲರ್‌ಗಳ ವಿರುದ್ಧ ಅಕ್ಷರಶಃ ದಂಡಯಾತ್ರೆ ನಡೆಸಿದರು. ಕೇವಲ 31 ಎಸೆತಗಳನ್ನು ಎದುರಿಸಿದ ಅವರು 212.90ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ 66 ರನ್ ಸಿಡಿಸಿದರು. ಲೋಗನ್ ವ್ಯಾನ್ ಬೀಕ್ ಸೇರಿದಂತೆ ಪ್ರಮುಖ ಬೌಲರ್‌ಗಳ ಓವರ್‌ಗಳಲ್ಲಿ ದುಬೆ ಅವರ ಬ್ಯಾಟಿಂಗ್ ವೈಭವವನ್ನು ಪ್ರೇಕ್ಷಕರು ಕಣ್ತುಂಬಿಕೊಂಡರು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಶತಕ ಬಾರಿಸಿದ ಕೆನಡಾದ ಆಟಗಾರ

ಇನ್ನೊಂದೆಡೆ, ದುಬೆ ಅವರಿಗೆ ಉತ್ತಮ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಕೂಡ ಅಂತಿಮ ಓವರ್‌ಗಳಲ್ಲಿ ಮಿಂಚಿ ಮಹತ್ವದ ಕಾಣಿಕೆ ನೀಡಿದರು. ನಾಯಕ ಸೂರ್ಯಕುಮಾರ್ ಯಾದವ್ (34 ರನ್) ತಮ್ಮದೇ ಆದ ಶೈಲಿಯಲ್ಲಿ ಬೌಂಡರಿ ಬಾರಿಸಿ ಗಮನ ಸೆಳೆದರು.

ಇನ್ನಿಂಗ್ಸ್‌ನ 20ನೇ ಓವರ್‌ನಲ್ಲಿ ದುಬೆ (186/5) ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ರಿಂಕು ಸಿಂಗ್, ಎದುರಿಸಿದ ಮೊದಲ ಎಸೆತದಲ್ಲಿಯೇ ಭಾರೀ ಸಿಕ್ಸರ್ ಬಾರಿಸುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 193 ರನ್ ಗಳಿಸಿತು.

ನೆದರ್ಲೆಂಡ್ಸ್ ಪರ ಬೌಲರ್‌ಗಳು ಆರಂಭಿಕ ಯಶಸ್ಸು ಸಾಧಿಸಿದರೂ, ಅಂತಿಮ ಓವರ್‌ಗಳಲ್ಲಿ ಭಾರತೀಯ ಬ್ಯಾಟರ್‌ಗಳ ಬಿರುಗಾಳಿಗೆ ಸಿಲುಕಿದರು. ಇದೀಗ ಈ ಬೃಹತ್ ಮೊತ್ತವನ್ನು ಬೆನ್ನಟ್ಟುವ ನೆದರ್ಲೆಂಡ್ಸ್ ತಂಡ ಕಠಿಣ ಸವಾಲನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...