T20 ವಿಶ್ವಕಪ್ | ರೋಹಿತ್ ಶರ್ಮಾ ನಾಯಕತ್ವ ‘ವಂಡರ್ ಫುಲ್’ ಎಂದ ಕಪಿಲ್ ದೇವ್

Date:

10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು ಟೀಂ ಇಂಡಿಯಾ ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಹೊಗಳಿದ್ದಾರೆ.

- Advertisement -

2007ರಲ್ಲಿ ಭಾರತ ತಂಡ ವಿಶ್ವಕಪ್ ವಿಜೇತವಾಗಿತ್ತು. ಇದೀಗ, ಎರಡನೇ ಬಾರಿಗೆ ಟ್ರೋಫಿ ಗೆಲ್ಲುವ ಗುರಿ ಹೊಂದಿದೆ. ಒಟ್ಟಾರೆಯಾಗಿ ಮೂರನೇ ಸಲ ಫೈನಲ್‌ಗೇರಿದ ಸಾಧನೆ ಮಾಡಿದೆ. 2014ರಲ್ಲಿ ಭಾರತ ರನ್ನರ್ ಅಪ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಜೂನ್ 27ರಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು 68 ರನ್‌ಗಳಿಂದ ಭಾರತ ಸೋಲಿಸಿದೆ. ಟಾಸ್ ಸೋತರೂ ಭಾರತವು ಇಂಗ್ಲೆಂಡ್ ಅನ್ನು ಸಂಪೂರ್ಣವಾಗಿ ಆಲೌಟ್ ಮಾಡಿತು. 10 ವರ್ಷಗಳ ಬಳಿಕ ಇಂಡಿಯಾ ತಂಡ ಟಿ-20 ಫೈನಲ್‌ ತಲುಪಿದೆ.

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ 1983ರಲ್ಲಿ ಭಾರತದ ಚೊಚ್ಚಲ ಏಕದಿನ ವಿಶ್ವಕಪ್ ವಿಜೇತ, ಮಾಜಿ ನಾಯಕ ಕಪಿಲ್ ದೇವ್ ‘ಅದ್ಭುತ‘ ಎಂದು ಕರೆದಿದ್ದಾರೆ. ಇದುವರೆಗಿನ ಪ್ರಯಾಣಕ್ಕಾಗಿ ಎಲ್ಲ ಆಟಗಾರರಿಗೆ ಶುಭಾಶಯಗಳು, ರೋಹಿತ್ ನಾಯಕತ್ವದಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? T20 ವಿಶ್ವಕಪ್ | ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’; 10 ವರ್ಷಗಳ ಬಳಿಕ ಫೈನಲ್‌ಗೆ ಟೀಮ್ ಇಂಡಿಯಾ

“ಸ್ಪರ್ಧೆಯಲ್ಲಿ ಭಾರತವು ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ಇದು ಅದ್ಭುತವಾಗಿದೆ. ಯಾರಾದರೂ ಫೈನಲ್‌ಗೆ ಬಂದರೆ ಅವರು ಎಷ್ಟು ಅದ್ಭುತವಾಗಿ ಆಡಿದ್ದಾರೆ ಎಂದು ನೀವು ಹೇಳುತ್ತೀರಿ. ಆಗ ಒಬ್ಬರ ಹೆಸರಲ್ಲ ಇಡೀ ತಂಡ ತೆಗೆದುಕೊಳ್ಳುತ್ತೇವೆ. ನಾನು ಯಾವಾಗಲೂ ತಂಡವನ್ನು ನಂಬುತ್ತೇನೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಅದ್ಭುತವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ” ಎಂದು ಕಪಿಲ್ ದೇವ್ ತಿಳಿಸಿದ್ದಾರೆ.

“ರೋಹಿತ್‌ ಶರ್ಮಾ ಅವರು ಮೈದಾನದಲ್ಲಿ ಎಂತಹ ಸನ್ನಿವೇಶದಲ್ಲೂ ವಿರಾಟ್‌ ಕೊಹ್ಲಿ ರೀತಿ ಹುಚ್ಚೆದ್ದು ಕುಣಿಯುವುದಿಲ್ಲ. ಅವರು ತಮ್ಮ ಸ್ಥಿಮಿತವನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಅದಕ್ಕೆ ತಕ್ಕಂತೆಯೇ ಮೈದಾನದಲ್ಲಿ ವರ್ತಿಸುತ್ತಾರೆ. ಆತನಿಗಿಂತ ಉತ್ತಮ ಆಟಗಾರ ತಂಡದಲ್ಲಿ ಮತ್ತೊಬ್ಬರಿಲ್ಲ” ಎಂದಿದ್ದಾರೆ.

“ಅನೇಕ ದೊಡ್ಡ ಆಟಗಾರರು ಟೀಮ್ ಇಂಡಿಯಾಕ್ಕೆ ಬಂದಿದ್ದಾರೆ, ಅವರು ತಮ್ಮ ವೃತ್ತಿಜೀವನದ ಬಗ್ಗೆ ಕಾಳಜಿ ವಹಿಸಿದ್ದಾರೆ. ಅವರು ಅದೇ ದೃಷ್ಟಿಕೋನದಿಂದ ನಾಯಕತ್ವವನ್ನೂ ಮಾಡಿದ್ದಾರೆ. ಆದರೆ ರೋಹಿತ್‌ ಈ ವಿಷಯದಲ್ಲಿ ಎಲ್ಲರಿಗಿಂತಲೂ ಭಿನ್ನರಾಗಿದ್ದಾರೆ. ಏಕೆಂದರೆ ಅವರು ಇಡೀ ತಂಡವನ್ನು ಸಂತೋಷವಾಗಿರಿಸುತ್ತಾರೆ” ಎಂದಿದ್ದಾರೆ.

ಜೂನ್ 29ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್‌ನ ಫೈನಲ್‌ಗೆ ಅರ್ಹತೆ ಪಡೆದಿದ್ದರೆ, ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಅರ್ಹತೆ ಪಡೆದಿದೆ. ಈ ಬಾರಿ ಭಾರತ ತಂಡಕ್ಕೆ ಫೈನಲ್‌ನಲ್ಲಿ ದಾಖಲೆ ಸೃಷ್ಟಿಸುವ ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...