ಟಿ20 ವಿಶ್ವಕಪ್ | ಟೀಂ ಇಂಡಿಯಾ ಅಭ್ಯಾಸಕ್ಕೆ ಅಡ್ಡಿಯಾದ ‘ಚಂದ್ರಗ್ರಹಣ’

Date:

ಮಂಗಳವಾರ ಸಂಭವಿಸಿದ ಚಂದ್ರಗ್ರಹಣದ ಪರಿಣಾಮವಾಗಿ ಭಾರತ ಕ್ರಿಕೆಟ್ ತಂಡದ ಅಭ್ಯಾಸ ಆರಂಭವು ಸುಮಾರು 90 ನಿಮಿಷಗಳಷ್ಟು ವಿಳಂಬಗೊಂಡಿತು ಎಂದು ಮಾಧ್ಯಮಗಳು ವರದಿ ಮಾಡಿದೆ.

- Advertisement -

ಮೂಲಗಳ ಪ್ರಕಾರ, ತಂಡದ ಅಭ್ಯಾಸವನ್ನು ಮೂಲತಃ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಿಗದಿಪಡಿಸಲಾಗಿತ್ತು. ಆದರೆ ಚಂದ್ರಗ್ರಹಣ ಮಧ್ಯಾಹ್ನ 3.20ಕ್ಕೆ ಪ್ರಾರಂಭವಾಗಿ ಸಂಜೆ 6.47ರವರೆಗೆ ಮುಂದುವರಿದಿದ್ದ ಕಾರಣ ಅಭ್ಯಾಸದ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕಾಯಿತು. ಇದರ ಪರಿಣಾಮವಾಗಿ ನಿಗದಿತ ಸಮಯಕ್ಕೆ ಅಭ್ಯಾಸ ಆರಂಭಿಸಲು ಸಾಧ್ಯವಾಗಲಿಲ್ಲ ಎಂದು ಮೂಲವೊಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ‘ನಾವು ಸಿಲುಕಿದ್ದ ಸ್ಥಳದ ಬಳಿಯೇ ಸ್ಫೋಟ’: ದುಬೈನಲ್ಲಿ ಸಿಲುಕಿರುವ ಪಿ.ವಿ ಸಿಂಧು

ಭಾರತ ತಂಡ ಅಭ್ಯಾಸ ಪ್ರಾರಂಭಿಸುವ ಹೊತ್ತಿಗೆ ಸಮರ್ಪಕ ಬೆಳಕು ದೊರಕುವಂತೆ ಮಾಡುವ ಉದ್ದೇಶದಿಂದ ಸ್ಟೇಡಿಯಂನಲ್ಲಿ ಫ್ಲಡ್ ಲೈಟ್‌ ಗಳನ್ನು ಸಂಜೆ ಸುಮಾರು 5.30ರ ವೇಳೆಗೆ ಸ್ವಿಚ್ಡ್ ಆನ್ ಮಾಡಲಾಗಿತ್ತು. ಆದರೆ ಅಭ್ಯಾಸದ ಅವಧಿಯನ್ನು ಬದಲಾಯಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದರಿಂದ, ಫ್ಲಡ್ ಲೈಟ್‌ಗಳನ್ನು ಸ್ವಲ್ಪ ಸಮಯದ ನಂತರ ಮತ್ತೆ ಸ್ವಿಚ್ಡ್ ಆಫ್ ಮಾಡಲಾಯಿತು.

ನಂತರ ಪರಿಷ್ಕೃತ ವೇಳಾಪಟ್ಟಿಯಂತೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಫ್ಲಡ್ ಲೈಟ್‌ಗಳನ್ನು ಮತ್ತೆ ಸ್ವಿಚ್ಡ್ ಆನ್ ಮಾಡಲಾಯಿತು. ಇದಾದ ಬಳಿಕ ಸಂಜೆ ಸುಮಾರು 7.30ರ ವೇಳೆಗೆ ಭಾರತ ತಂಡ ತನ್ನ ಅಭ್ಯಾಸವನ್ನು ಆರಂಭಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...