ಟಿ20 ವಿಶ್ವಕಪ್ | ಭಾರತದ ವಿರುದ್ಧ ಸೋತರೂ ವಿಶಿಷ್ಟ ದಾಖಲೆ ನಿರ್ಮಿಸಿದ ಪಾಕ್‌ ತಂಡ

Date:

ಟೀಂ ಇಂಡಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಮತ್ತೊಂದು ಸೋಲು ಅನುಭವಿಸಿದರೂ, ಈ ಪಂದ್ಯದಲ್ಲಿ 18 ಓವರ್ ಗಳನ್ನು ಸ್ಪಿನ್ನರ್‌ಗಳಿಂದ ಬೌಲಿಂಗ್ ಮಾಡಿಸುವ ಮೂಲಕ ವಿಶ್ವಕಪ್ ಟಿ20 ಇತಿಹಾಸದಲ್ಲಿ ದಾಖಲೆ ನಿರ್ಮಿಸಿದೆ. 20 ಓವರ್ ಗಳ ಪೈಕಿ 18 ಓವರ್ ಗಳನ್ನು ಸ್ಪಿನ್ನರ್ ಗಳಿಂದ ಬೌಲಿಂಗ್ ಮಾಡಿಸುವ ಮೂಲಕ ಗರಿಷ್ಠ ಸ್ಪಿನ್ ಬೌಲಿಂಗ್ ದಾಖಲೆಯನ್ನು ಸರಿಗಟ್ಟಿದೆ.

- Advertisement -

ಸಲ್ಮಾನ್ ಅಲಿ ಅಘಾ ನೇತೃತ್ವದ ಪಾಕಿಸ್ತಾನ ತಂಡವು 2012ರ ಟಿ20 ವಿಶ್ವಕಪ್ ಲ್ಲಿ ಆಸ್ಟ್ರೇಲಿಯಾ ವಿರುದ್ಧ ಅನುಸರಿಸಿದ್ದ ತಂತ್ರವನ್ನು ಮತ್ತೆ ಅನುಸರಿಸಿತು. ಕೊಲಂಬೋದಲ್ಲಿ ಭಾನುವಾರ ಪಾಕಿಸ್ತಾನವು ಭಾರತ ವಿರುದ್ಧ ಮತ್ತೆ 18 ಸ್ಪಿನ್ ಓವರ್ ಗಳನ್ನು ಬೌಲಿಂಗ್ ಮಾಡಿಸಿದೆ. ಹೀಗೆ ಎರಡು ಬಾರಿ 18 ಸ್ಪಿನ್ ಓವರ್ ಗಳನ್ನು ಮಾಡಿಸಿದ ಹೆಗ್ಗಳಿಕೆ ಪಾಕಿಸ್ತಾನ ತಂಡಕ್ಕೆ ಸೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸೋತರೂ ಕ್ರೀಡಾಭಿಮಾನಿಗಳ ಮನಗೆದ್ದ ಗುರ್ಬಾಜ್: ಆಫ್ರಿಕಾ ಪಡೆಗೆ ನಡುಕ ಹುಟ್ಟಿಸಿದ ಅಫ್ಘಾನ್ ಆಟಗಾರ

ಟಿ20 ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ಕೂಡಾ 2016ರಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ 16 ಓವರ್ ಗಳನ್ನು ಸ್ಪಿನ್ನರ್ ಗಳಿಂದ ಬೌಲಿಂಗ್ ಮಾಡಿಸಿತ್ತು. ಪಾಕಿಸ್ತಾನ 2026ರ ಟೂರ್ನಿಯಲ್ಲಿ ಯುಎಇ ವಿರುದ್ಧ 16 ಓವರ್ ಗಳನ್ನು ಸ್ಪಿನ್ನರ್ ಗಳಿಂದ ಬೌಲಿಂಗ್ ಮಾಡಿಸಿತ್ತು. ಅಂತೆಯೇ ಜಿಂಬಾಬ್ವೆ ತಂಡ 2010ರಲ್ಲಿ ಪೋರ್ಟ್ ಆಪ್‌ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 18 ಓವರ್ ಗಳನ್ನು ಸ್ಪಿನ್ನರ್ ಗಳಿಂದ ಮಾಡಿಸಿತ್ತು. 2023ರಲ್ಲಿ ನ್ಯೂಜಿಲೆಂಡ್ ತಂಡ ಭಾರತ ವಿರುದ್ಧ 17 ಸ್ಪಿನ್ ಓವರ್ ಮಾಡಿಸಿತ್ತು.

ಕೊಲಂಬೊ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಭಾರತ ತಂಡ, ಬೌಲರ್ ಗಳಿಗೆ ನೆರವು ನೀಡುವ ಪಿಚ್ ನಲ್ಲಿ ಇಶಾನ್ ಕಿಶನ್ 40 ಎಸೆತಗಳಲ್ಲಿ 77, ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 32 ಮತ್ತು ಶಿವಂ ದುಬೆ 17 ಎಸೆತಗಳಲ್ಲಿ 27 ರನ್‌ಗಳ ಮೂಲಕ ಮೂಲಕ 7 ವಿಕೆಟ್ಗೆ 175 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಗಳಿಸಿತು. ಎದುರಾಳಿ ತಂಡವನ್ನು 18 ಓವರ್‌ಗಳಲ್ಲಿ 114 ರನ್‌ಗಳಿಗೆ ಕಟ್ಟಿಹಾಕಿದ ಭಾರತ 61 ರನ್‌ಗಳ ಅಂರದಿಂದ ಗೆಲುವು ಸಾಧಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...