ಟಿ20 ವಿಶ್ವಕಪ್ | ರೋಹಿತ್ ಶರ್ಮಾ ಭರ್ಜರಿ ಬ್ಯಾಟಿಂಗ್ : ಆಸೀಸ್‌ಗೆ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

Date:

ಇಂದು (ಜೂನ್ 24) ಸೇಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 206 ರನ್‌ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ 92 ರನ್‌ಗಳ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆ ಹಾಕುವಲ್ಲಿ ಯಶಸ್ವಿಯಾಯಿತು. ಈ ಮೊತ್ತವು ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ದಾಖಲಿಸಿದ ಬೃಹತ್ ಮೊತ್ತವಾಗಿದೆ.

41 ಎಸೆತಗಳನ್ನು ಎದುರಿಸಿದ ನಾಯಕ ರೋಹಿತ್ ಶರ್ಮಾ ಅವರು, ಭರ್ಜರಿ 8 ಸಿಕ್ಸರ್ ಹಾಗೂ 7 ಬೌಂಡರಿಯ ನೆರವಿನಿಂದ 92 ರನ್ ಗಳಿಸಿದ್ದಾಗ, ಮಿಚೆಲ್ ಸ್ಟಾರ್ಕ್‌ ಓವರ್‌ನಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಮೂಲಕ 8 ರನ್‌ಗಳಿಂದ ಶತಕ ವಂಚಿತರಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಾಯಕನ ಜೊತೆಗೆ ಇನ್ನಿಂಗ್ಸ್‌ ಆರಂಭಿಸಿದ್ದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಮತ್ತೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿಯವರ ಬ್ಯಾಟ್‌ನಿಂದ ರನ್‌ಗಳೇ ಹರಿದು ಬರುತ್ತಿಲ್ಲ.

ರೋಹಿತ್ ಶರ್ಮಾ ಬಿಟ್ಟರೆ ಉಳಿದಂತೆ ಸೂರ್ಯ ಕುಮಾರ್ ಯಾದವ್  31 ರನ್ (16 ಎಸೆತ), ಶಿವಂ ದುಬೆ 28 ರನ್ (22 ಎಸೆತ), ಕೊನೆಯಲ್ಲಿ ಹಾರ್ದಿಕ್ ಪಾಂಡ್ಯಾ 17 ಎಸೆತಗಳಲ್ಲಿ 27 ರನ್ ಗಳಿಸಿ ತಮ್ಮಿಂದಾದ ಕೊಡುಗೆ ನೀಡಿದರೆ, ರಿಷಭ್ ಪಂತ್ 15 ರನ್ ಗಳಿಸಿದರು.

ಇದನ್ನು ಓದಿದ್ದೀರಾ? ಟಿ20 ಕ್ರಿಕೆಟ್‌ : 200 ಸಿಕ್ಸರ್‌ಗಳ ಸರದಾರನಾಗಿ ದಾಖಲೆ ಬರೆದ ‘ಹಿಟ್‌ಮ್ಯಾನ್’ ರೋಹಿತ್ ಶರ್ಮಾ

ಬೌಲಿಂಗ್‌ನಲ್ಲಿ ಆಸೀಸ್ ಪರ ಮಿಚೆಲ್ ಸ್ಟಾರ್ಕ್ ಹಾಗೂ ಸ್ಟೋಯ್ನಿಸ್ 2 ವಿಕೆಟ್ ಗಳಿಸಿದರಾದರೂ, ಭರ್ಜರಿ ರನ್ ನೀಡಿ ದುಬಾರಿಯಾದರು. ಸ್ಟಾರ್ಕ್‌ ಅವರು 45 ರನ್ ನೀಡಿದರೆ, ಸ್ಟೋಯ್ನಿಸ್ 56 ರನ್ ನೀಡಿದರು.

ಉಳಿದ ಬೌಲರ್‌ಗಳು ರನ್ ನೀಡಿದರೂ ಕೂಡ ಉತ್ತಮ ಬೌಲಿಂಗ್ ನಡೆಸಿದ ಜೋಶ್ ಹ್ಯಾಝಲ್‌ವುಡ್ ತನ್ನ ಪಾಲಿನ 4 ಓವರ್ ಎಸೆದು ಕೇವಲ 14 ರನ್ ನೀಡಿ, 1 ವಿಕೆಟ್ ಗಳಿಸುವಲ್ಲಿ ಸಫಲರಾದರು. ಆ್ಯಡಮ್ ಝಾಂಪ 40 ಹಾಗೂ ಪ್ಯಾಟ್ ಕಮ್ಮಿನ್ಸ್‌ 48 ರನ್ ಚಚ್ಚಿಸಿಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ...

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ....

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ...