ಟಿ20 ವಿಶ್ವಕಪ್ | ಶ್ರೀಲಂಕಾ ಸೋಲಿನ ಬೆನ್ನಲ್ಲೇ ಮುಖ್ಯ ಕೋಚ್‌ ಹುದ್ದೆ ತೊರೆದ ಸನತ್‌ ಜಯಸೂರ್ಯ

Date:

ಶ್ರೀಲಂಕಾ ತಂಡ ಟಿ20 ವಿಶ್ವಕಪ್‌ನ ಸೂಪರ್‌ 8 ಪಂದ್ಯಗಳಲ್ಲಿ ಒಂದೂ ಪಂದ್ಯವನ್ನು ಗೆಲ್ಲದೆ ಸರಣಿಯಿಂದ ಹೊರಬಿದ್ದ ನಂತರ ಮುಖ್ಯ ಕೋಚ್‌ ಹುದ್ದೆಗೆ ಸನತ್‌ ಜಯಸೂರ್ಯ ರಾಜೀನಾಮೆ ನೀಡಿದ್ದಾರೆ.

- Advertisement -

“ಈಗ ಇನ್ನೊಬ್ಬರಿಗೆ ಅವಕಾಶ ನೀಡುವ ಸಮಯ ಬಂದಿದೆ. ಎರಡು ತಿಂಗಳ ಹಿಂದೆಯೇ ಇಂಗ್ಲೆಂಡ್ ಸರಣಿಯ ವೇಳೆ ನಾನು ಈ ನಿರ್ಧಾರ ತೆಗೆದುಕೊಂಡಿದ್ದೆ. ವಿಶ್ವಕಪ್‌ನಲ್ಲಿ ಚೆನ್ನಾಗಿ ಆಡಿ ಹೊರಡಬೇಕು ಎಂದು ಬಯಸಿದ್ದೆ. ಆದರೆ ಸಾಧ್ಯವಾಗಲಿಲ್ಲ. ಇದಕ್ಕೆ ನನಗೆ ತುಂಬಾ ದುಃಖವಾಗಿದೆ” ಎಂದು ಜಯಸೂರ್ಯ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅವರ ಒಪ್ಪಂದ ಜೂನ್‌ವರೆಗೆ ಇದ್ದರೂ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಇನ್ನೂ ಅಧಿಕೃತ ರಾಜೀನಾಮೆ ಪತ್ರ ಸಲ್ಲಿಸಿಲ್ಲ ಎಂದು ತಿಳಿದುಬಂದಿದೆ. ಕೋಚ್ ಆಗಿ ನೇಮಕಗೊಂಡ ನಂತರ ಜಯಸೂರ್ಯ ಅವರು ತಂಡವನ್ನು ಗಮನಾರ್ಹವಾಗಿ ಸುಧಾರಣೆ ತಂದಿದ್ದಾರೆ. ಭಾರತ ವಿರುದ್ಧ 27 ವರ್ಷಗಳ ನಂತರ ODI ಸರಣಿ ಗೆಲುವು, ಇಂಗ್ಲೆಂಡ್‌ನಲ್ಲಿ ಟೆಸ್ಟ್ ಜಯ, ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2-0 ಟೆಸ್ಟ್ ಸರಣಿ ಗೆಲುವು – ಇವು ಅವರ ಜಯಸೂರ್ಯ ಅವರ ಪ್ರಮುಖ ಸಾಧನೆಗಳು.

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

ಈ ಅವಧಿಯಲ್ಲಿ ಏಕದಿನ ರ್ಯಾಂಕಿಂಗ್‌ನಲ್ಲಿ ತಂಡ 4ನೇ ಸ್ಥಾನಕ್ಕೆ, ಟೆಸ್ಟ್‌ನಲ್ಲಿ 6ನೇ ಸ್ಥಾನಕ್ಕೆ ಏರಿದೆ. ಆದರೆ T20 ಮಾದರಿಯಲ್ಲಿ ತಂಡ ನಿರಾಸೆಯ ಪ್ರದರ್ಶನ ನೀಡಿದೆ. ತವರಿನಲ್ಲಿ ನಡೆದ ವಿಶ್ವಕಪ್‌ನಲ್ಲಿ 4 ಸತತ ಸೋಲುಗಳು, ಏಷ್ಯಾ ಕಪ್ ಹಾಗೂ ಪಾಕಿಸ್ತಾನದಲ್ಲಿ ನಡೆದ ತ್ರಿಕೋನ ಸರಣಿಯಲ್ಲೂ ಸೋಲುಗಳು ತಂಡ ಕಳಪೆಯಾಗಿರುವುದನ್ನು ತೋರಿಸಿದೆ. ಈ ಹಿನ್ನೆಲೆಯಲ್ಲಿ ಜಯಸೂರ್ಯ ಅವರು ಹುದ್ದೆ ಬಿಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದಕ್ಕೂ ಮುಂಚೆ ಎರಡು ಬಾರಿ ರಾಷ್ಟ್ರೀಯ ತಂಡದ ಮುಖ್ಯ ಆಯ್ಕೆಗಾರರಾಗಿಯೂ ಕೆಲಸ ನಿರ್ವಹಿಸಿದ್ದ ಜಯಸೂರ್ಯ ಅವರು, ಇದೇ ಸಂದರ್ಭದಲ್ಲಿ ತಮ್ಮ ಸಹಾಯಕ ಸಿಬ್ಬಂದಿಗೆ ಕೂಡ ಧನ್ಯವಾದ ಅರ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...