ಟಿ20 ವಿಶ್ವಕಪ್ | ‘ಕ್ರಿಕೆಟ್ ಶಿಶು’ ನೆದರ್‌ಲ್ಯಾಂಡ್ಸ್‌ ವಿರುದ್ಧ ಪರದಾಡಿ ಗೆದ್ದ ದಕ್ಷಿಣ ಆಫ್ರಿಕಾ!

Date:

ಟಿ20 ವಿಶ್ವಕಪ್‌ನ ಲೀಗ್‌ ಡಿ ಗ್ರೂಪ್‌ ಹಾಗೂ ಲೀಗ್ ಹಂತದ 16ನೇ ಪಂದ್ಯದಲ್ಲಿ ಕ್ರಿಕೆಟ್ ಶಿಶು ನೆದರ್‌ಲ್ಯಾಂಡ್ಸ್‌ ವಿರುದ್ಧ ಬಲಿಷ್ಠ ದಕ್ಷಿಣ ಆಫ್ರಿಕಾವು ಪರದಾಟ ನಡೆಸಿ, ಕೊನೆಗೂ ಗೆಲುವು ದಾಖಲಿಸಿಕೊಳ್ಳುವ ಮೂಲಕ ಮಾನ ಉಳಿಸಿಕೊಂಡಿದೆ.

- Advertisement -

ಶನಿವಾರ ಅಮೆರಿಕಾದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ ಲೀಗ್‌ ಹಂತದ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ನೀಡಿದ್ದ 104 ರನ್‌ಗಳ ಸುಲಭ ಗುರಿಯನ್ನು ತಲುಪಲು 6 ವಿಕೆಟ್‌ಗಳನ್ನು ಕಳೆದುಕೊಂಡು, ಕೊನೆಗೆ 18.5ನೇ ಓವರ್‌ನಲ್ಲಿ ಗುರಿ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡೇವಿಡ್‌ ಮಿಲ್ಲರ್ ಅರ್ಧಶತಕದ ನೆರವಿನಿಂದ ಯಶಸ್ವಿಯಾಗಿ ಚೇಸಿಂಗ್‌ ಮಾಡಿದ್ದರಿಂದ ದಕ್ಷಿಣ ಆಫ್ರಿಕಾ ಮಾನ ಉಳಿಸಿಕೊಂಡಿದೆ.

ಪಾರ್ಟ್‌ ಟೈಮ್ ವೃತ್ತಿಪರ ಆಟಗಾರರನ್ನೊಳಗೊಂಡಿರುವ ನೆದರ್‌ಲ್ಯಾಂಡ್ಸ್‌ ನೀಡಿದ 104 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಬಲಿಷ್ಠ ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್ ಮತ್ತು ರೀಜಾ ಹೆಂಡ್ರಿಕ್ಸ್ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಖಾತೆ ತೆರೆಯದ ಕ್ವಿಂಟನ್ ಡಿ ಕಾಕ್ ರನೌಟ್‌ ಆಗುವ ಮೂಲಕ ನಿರಾಸೆ ಮೂಡಿಸಿದರು.

ಇದರ ಹಿಂದೆಯೇ ರೀಜಾ ಹೆಂಡ್ರಿಕ್ಸ್ ಕೂಡ ಕೇವಲ 3 ರನ್‌ಗಳಿಸ ಔಟ್‌ ಆದರೆ, ನಾಯಕ ಐಡೆನ್ ಮಾರ್ಕ್ರಾಮ್ ಮತ್ತೊಮ್ಮೆ ಬಂದ ದಾರಿಗೆ ಸುಂಕವಿಲ್ಲದಂತೆ ಶೂನ್ಯಕ್ಕೆ ವಿಕೆಟ್‌ ಕಳೆದುಕೊಂಡರು. ಬಳಿಕ ಸ್ಪೋಟಕ ಬ್ಯಾಟರ್‌ ಹೆನ್ರಿಚ್ ಕ್ಲಾಸೆನ್ ಸಹಾ 4 ರನ್‌ಗೆ ತಮ್ಮ ಆಟವನ್ನು ಮುಗಿಸಿ ಪೆವಿಲಿಯನ್‌ ಕಡೆ ಹೆಜ್ಜೆ ಹಾಕಿದರು.

ಈ ಹಂತದಲ್ಲಿ ಹರಿಣಗಳ ಪಡೆ ಕೇವಲ 12 ರನ್‌ಗಳಿಗೆ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟ ಎದುರಿಸಬೇಕಾಯಿತು. ಇಂತಹ ಪರಿಸ್ಥಿತಿಯಲ್ಲಿ ಕ್ರೀಸ್‌ಗೆ ಬಂದ ಯುವ ಬ್ಯಾಟರ್‌ ಟ್ರಿಸ್ಟಾನ್ ಸ್ಟಬ್ಸ್ ಮತ್ತು ಅನುಭವಿ ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟವಾಡಿದರು. ಈ ಮೂಲಕ ಕುಸಿದ ದಕ್ಷಿಣ ಆಫ್ರಿಕಾಕ್ಕೆ ಗೆಲುವಿನ ಚಿಗುರೊಡೆಸಿದರು.

ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ 33 ರನ್‌ಗಳನ್ನು ಹೊಡೆದು ಔಟ್‌ ಆದರೆ, ನಂತರ ಬಂದ ಮಾರ್ಕೊ ಜಾನ್ಸೆನ್ 3 ರನ್‌ಗರೆ ವಿಕೆಟ್‌ ಕಳೆದುಕೊಂಡರು. ಇದಾದ ಬಳಿಕ ಸೋಲಿನ ಸುಳಿಯಲ್ಲಿದ ದಕ್ಷಿಣ ಆಫ್ರಿಕಾ ತಂಡವನ್ನು ಡೇವಿಡ್ ಮಿಲ್ಲರ್ ಅರ್ಧಶತಕ ಬಾರಿಸುವ ಮೂಲಕ ಗೆಲುವಿನ ದಡ ಸೇರಿಸಿದರು.

ಡೇವಿಡ್ ಮಿಲ್ಲರ್ ಎದುರುಸಿದ 51 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್‌ ನೆರವಿನಿಂದ ಅಜೇಯ 59 ರನ್‌ ಗಳಿಸಿದರು. ನೆದರ್‌ಲ್ಯಾಂಡ್ಸ್‌ ಪರ ಲೋಗನ್ ವ್ಯಾನ್ ಬೀಕ್ ಮತ್ತು ವಿವಿಯನ್ ಕಿಂಗ್ಮಾ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರೆ, ಬಾಸ್ ಡಿ ಲೀಡೆ ಒಂದು ವಿಕೆಟ್‌ ಪಡೆದರು.

104 ರನ್‌ಗಳ ಸಾಧಾರಣ ಗುರಿ ನೀಡಿದ್ದರೂ, ಸಂಘಟಿತ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಒಂದು ಹಂತದಲ್ಲಿ ಭಯ ಮೂಡಿಸುವಂತೆ ಮಾಡಿದ ನೆದರ್‌ಲ್ಯಾಂಡ್ಸ್‌ ತಂಡಕ್ಕೆ ಹಲವು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ನೆದರ್‌ಲ್ಯಾಂಡ್ಸ್‌ ದಕ್ಷಿಣ ಆಫ್ರಿಕಾವನ್ನು 13 ರನ್‌ಗಳಿಂದ ಸೋಲಿಸಿತ್ತು. ಆ ಬಳಿಕ 2023ರ ವಿಶ್ವಕಪ್‌ನಲ್ಲೂ ಕೂಡ ನೆದರ್‌ಲ್ಯಾಂಡ್ಸ್ ದಕ್ಷಿಣ ಆಫ್ರಿಕಾವನ್ನು 38 ರನ್‌ಗಳಿಂದ ಸೋಲಿಸಿತ್ತು. ನ್ಯೂಯಾರ್ಕ್‌ನಲ್ಲಿ ಇಂದು ಅದೇ ಬಹುತೇಕ ಪುನರಾವರ್ತನೆಯಾಗಿತ್ತು. ಆದರೆ ಅದನ್ನು ಡೇವಿಡ್ ಮಿಲ್ಲರ್ ತಪ್ಪಿಸುವ ಮೂಲಕ, ಮೂರನೇ ಅವಮಾನವನ್ನು ತಪ್ಪಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...