ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

Date:

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿದೆ.

- Advertisement -

ಇಂದು ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ, ಪಾಕಿಸ್ತಾನದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ 119 ರನ್‌ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಆದರೆ ಟೀಮ್ ಇಂಡಿಯಾ ನೀಡಿದ್ದ 120 ರನ್‌ಗಳ ಅಲ್ಪಮೊತ್ತದ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿದ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ, 6 ರನ್‌ಗಳಿಂದ ಸೋತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಉತ್ತಮ ಆರಂಭ ಪಡೆದಿದ್ದ ಪಾಕಿಸ್ತಾನವು ಕೊನೆಯ ಐದು ಓವರ್‌ಗಳಲ್ಲಿ ಎಡವಿದ ಪರಿಣಾಮ, 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 113 ರನ್‌ಗಳನ್ನಷ್ಟೇ ಗಳಿಸಿ, ಈ ಸೋಲು ಅನುಭವಿಸಿದೆ.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ನಡೆಸಿದ ಜಸ್‌ಪ್ರೀತ್ ಬುಮ್ರಾ ಕೇವಲ 14 ರನ್ ನೀಡಿ ಮೂರು ವಿಕೆಟ್ ಗಳಿಸಿದರು. ಹಾರ್ದಿಕ್ ಪಾಂಡ್ಯಾ 2 ವಿಕೆಟ್ ಗಳಿಸಿದರೆ, ಅಕ್ಷರ್ ಪಟೇಲ್ ಹಾಗೂ ಅರ್ಷ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಪಾಕಿಸ್ತಾನವು ಒಂದು ಹಂತದಲ್ಲಿ 80 ರನ್ ಗಳಿಸಿದ್ದ ವೇಳೆ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆದರೆ ಕೈಯ್ಯಲ್ಲಿ ವಿಕೆಟ್ ಇದ್ದರೂ ಕೂಡ ಕೊನೆಯ ಘಳಿಗೆಯಲ್ಲಿ ಅದೃಷ್ಟ ಪಾಕಿಸ್ತಾನದ ಕೈ ಹಿಡಿಯದೆ, ಟೀಮ್ ಇಂಡಿಯಾ ಪಾಲಾಯಿತು.

ಬ್ಯಾಟಿಂಗ್‌ನಲ್ಲಿ ಪಾಕಿಸ್ತಾನದ ಪರ ಮೊಹಮ್ಮದ್ ರಿಝ್ವಾನ್ 31 ರನ್, ಇಮಾದ್ ವಾಸೀಮ್ 15, ಬಾಬರ್ ಆಝಂ 13, ಉಸ್ಮಾನ್ 13, ಫಖರ್ ಝಮಾನ್ 13 ರನ್ ಗಳಿಸಿದರು.

ಪಾಕಿಸ್ತಾನವು ಈ ಸೋಲಿನೊಂದಿಗೆ ಸೂಪರ್ 8ರ ಘಟ್ಟ ಪ್ರವೇಶಿಸುವುದು ಕಷ್ಟವೆನಿಸಿದೆ. ಅಮೆರಿಕ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಪಾಕಿಸ್ತಾನವು ತಂಡವು, ಸೂಪರ್ ಓವರ್‌ನಲ್ಲಿ ಸೋತಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...