ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

Date:

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೇತೃತ್ವದ ಮೊದಲ ಬ್ಯಾಚ್ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ.

2024ರ ಐಪಿಎಲ್‌ನಿಂದ ಹೊರಬಿದ್ದ ಆರು ಫ್ರಾಂಚೈಸಿಯ ಆಟಗಾರರು ಮುಂಬೈ ವಿಮಾನ ನಿಲ್ದಾಣದಿಂದ ಶನಿವಾರ ರಾತ್ರಿ ಹೊರಟಿದ್ದಾರೆ. ಇನ್ನುಳಿದ ಆಟಗಾರರು ಮೇ 27ರಂದು 2ನೇ ಬ್ಯಾಚ್‌ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಯುಎಸ್‌ಗೆ ತೆರಳುತ್ತಿರುವ ಮೊದಲ ಬ್ಯಾಚ್‌ನಲ್ಲಿ ಕಪ್ತಾನ ರೋಹಿತ್ ಶರ್ಮಾ, ರಿಷಭ್‌ ಪಂತ್, ಸೂರ್ಯ ಕುಮಾರ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಕುಲ್‌ದೀಪ್‌ ಯಾದವ್‌, ಅಕ್ಷರ್ ಪಟೇಲ್, ಶಿವಂ ದುಬೆ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ, ಶುಭಮನ್‌ ಗಿಲ್‌ ಹೊರಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲ ಬ್ಯಾಚ್‌ನಲ್ಲಿ ವಿರಾಟ್ ಕೊಹ್ಲಿ ಕೂಡ ಹೊರಡಲಿದ್ದಾರೆ ಎಂದು ಸುದ್ದಿ ಹರಿದಿತ್ತಾದರೂ, ವಿಮಾನ ನಿಲ್ದಾಣಕ್ಕೆ ಬಂದಿಳಿದ ಬ್ಯಾಚ್‌ನಲ್ಲಿ ವಿರಾಟ್‌ ಕೊಹ್ಲಿ ಕಾಣಿಸಿಕೊಳ್ಳಲಿಲ್ಲ.

ಉಳಿದ ಆಟಗಾರರಾದ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್ ಮತ್ತು ಮೀಸಲು ಆಟಗಾರರಾದ ಅವೇಶ್ ಖಾನ್, ಖಲೀಲ್ ಅಹ್ಮದ್ ಮತ್ತು ರಿಂಕು ಸಿಂಗ್ ಮೇ 27 ರಂದು 2ನೇ ಬ್ಯಾಚ್‌ನೊಂದಿಗೆ ಹೊರಡಲಿದ್ದಾರೆ.

ತಂಡದ ಉಪನಾಯಕ ಹಾರ್ದಿಕ್‌ ಪಾಂಡ್ಯ ಸದ್ಯ ಲಂಡನ್‌ನಲ್ಲಿರುವುದಾಗಿ ತಿಳಿದುಬಂದಿದ್ದು, ಅಲ್ಲಿಂದಲೇ ಬಂದು ತಂಡದೊಂದಿಗೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಮೇ 27-28 ರಂದು 2ನೇ ಬ್ಯಾಚ್ ಪ್ರಯಾಣ

ಐಪಿಎಲ್ 2024ರ ಅಂತಿಮ ಪಂದ್ಯ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಈ ಎರಡೂ ತಂಡಗಳಿಂದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ರಿಂಕು ಸಿಂಗ್. ಆದರೆ, ಅವರನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಗಿಲ್ಲ. ಬದಲಿಗೆ ಮೀಸಲು ಆಟಗಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಐಪಿಎಲ್ 2024 ರ ಫೈನಲ್ ನಂತರ, ಅವರು ವಿಶ್ವಕಪ್‌ಗಾಗಿ ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

‘ಗೆದ್ದು ಬನ್ನಿ’ ಎಂದು ಹಾರೈಸಿದ ಅಭಿಮಾನಿಗಳು

ಟಿ20 ವಿಶ್ವಕಪ್‌ ಟೂರ್ನಿಗಾಗಿ ಹೊರಟಿದ್ದ ಭಾರತ ತಂಡಕ್ಕೆ ಸಾವಿರಾರು ಅಭಿಮಾನಿಗಳು ಮುಂಬೈ ವಿಮಾನ ನಿಲ್ದಾಣದ ಮುಂಭಾಗ, ಕೆಲ ಅಭಿಮಾನಿಗಳು ಏರ್ಪೋರ್ಟ್‌ ಆವರಣದಲ್ಲಿ ನಿಂತು ಶುಭಕೋರಿದ್ದಾರೆ. ಈ ವೇಳೆ ರಿಷಭ್ ಪಂತ್ ಸೇರಿದಂತೆ ಕೆಲವು ಆಟಗಾರರು ಅಭಿಮಾನಿಗಳಿಗೆ ಆಟೋಗ್ರಾಫ್ ನೀಡಿದರು.

ಅಮೆರಿಕ-ವೆಸ್ಟ್‌ಇಂಡೀಸ್ ಆತಿಥ್ಯ

ಜೂನ್‌ 1 ರಿಂದ(ಭಾರತದಲ್ಲಿ ಜೂನ್ 2) ಜೂನ್‌ 29ರ ವರೆಗೆ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ ಅಮೆರಿಕ ಹಾಗೂ ವೆಸ್ಟ್‌ಇಂಡೀಸ್ ಆತಿಥ್ಯ ವಹಿಸಿಕೊಂಡಿದೆ.

ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ, ಸೂಪರ್‌-12 ಹಂತವನ್ನು ಸೂಪರ್‌-8ಕ್ಕೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

ಜೂನ್‌ 1 ರಿಂದ 18ರವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19ರಿಂದ 24ರವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡೆಯಲಿದೆ. ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿರುವ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಆವೇಶ್ ಖಾನ್.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ...

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ...