ತಮಿಳರಿಲ್ಲದ ಚೆನ್ನೈ ತಂಡವನ್ನು ಬ್ಯಾನ್‌ ಮಾಡಿ; ಪಿಎಂಕೆ ಶಾಸಕನ ಒತ್ತಾಯ

Date:

  • ತಮಿಳುನಾಡಿನ ಆಟಗಾರರಿಗೆ ಸಿಎಸ್‌ಕೆ ತಂಡದಲ್ಲಿ ಅವಕಾಶವಿಲ್ಲ
  • ಸ್ಥಳೀಯರಿಗೆ ಅವಕಾಶ ಸಿಗದ ಬಗ್ಗೆ ವಿಧಾನಸಭೆಯಲ್ಲಿ ಆಕ್ರೋಶ

ಸ್ಥಳೀಯ ಆಟಗಾರರಿಗೆ ಅವಕಾಶ ನೀಡದ ಐಪಿಎಲ್‌ ಫ್ರಾಂಚೈಸಿ ಸಿಎಸ್‌ಕೆ (ಚೆನ್ನೈ ಸೂಪರ್ ಕಿಂಗ್ಸ್) ತಂಡವನ್ನು ನಿಷೇಧಿಸುವಂತೆ ತಮಿಳುನಾಡು ವಿಧಾನಸಭೆಯಲ್ಲಿ ಒತ್ತಾಯಿಸಲಾಗಿದೆ.

- Advertisement -

ಧರ್ಮಪುರಿ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದ ಶಾಸಕ ಎಸ್‌ಪಿ ವೆಂಕಟೇಶ್ವರನ್ ಅವರು ವಿಧಾನಸಭಾ ಅಧಿವೇಶನದ ವೇಳೆ ವಿಷಯ ಪ್ರಸ್ತಾಪಿಸಿದ್ದು, ಸಿಎಸ್‌ಕೆ ತಂಡವು ಇಲ್ಲಿನ ಆಟಗಾರರಿಗೆ ಅವಕಾಶ ನೀಡದೇ ಇರುವುದನ್ನು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಚೆನ್ನೈ ತಂಡವನ್ನು ನಿಷೇಧಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಕ್ರೀಡಾ ಮತ್ತು ಯುವಜನ ಕಲ್ಯಾಣ ಇಲಾಖೆಯ ಅನುದಾನದ ಬೇಡಿಕೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವೇಳೆ ಶಾಸಕ ಎಸ್‌ಪಿ ವೆಂಕಟೇಶ್ವರನ್, “ತಮಿಳರ ಭಾವನೆಗಳಿಗೆ ಫ್ರಾಂಚೈಸಿ ಬೆಲೆ ಕೊಟ್ಟಿಲ್ಲ. ನಮ್ಮ ರಾಜ್ಯದ ರಾಜಧಾನಿಯ ತಂಡವೇ ನಮ್ಮವರನ್ನು ನಿರ್ಲಕ್ಷ್ಯಿಸಿದೆ. ಈ ಕುರಿತು ಜನಸಾಮಾನ್ಯರಲ್ಲಿ ಆಕ್ರೋಶವಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಪೂರನ್, ಸ್ಟೊಯಿನಿಸ್‌ ಸ್ಫೋಟಕ ಆಟಕ್ಕೆ ಶರಣಾದ ಆರ್‌ಸಿಬಿ; ಲಖನೌಗೆ ಮೂರನೇ ಗೆಲುವು

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ವೆಂಕಟೇಶ್ವರನ್, “ವಿಧಾನಸಭೆಯಲ್ಲಿ ನಾನು  ತಮಿಳುನಾಡಿನ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ. ಫ್ರಾಂಚೈಸಿಯು ಚೆನ್ನೈ ಅನ್ನು ಅದರ ತಂಡದ ಹೆಸರಿನ ಭಾಗವಾಗಿ ಇಟ್ಟುಕೊಂಡು, ತಮಿಳುನಾಡನ್ನು ಪ್ರತಿನಿಧಿಸುತ್ತೇವೆ ಎಂಬಂತೆ ಬಿಂಬಿಸಿ ಲಾಭ ಗಳಿಸುತ್ತಿದ್ದಾರೆ. ಆದರೆ ಆ ತಂಡವು ನಮ್ಮ ರಾಜ್ಯದ ಪ್ರತಿಭಾವಂತ ಸ್ಥಳೀಯ ಆಟಗಾರರಿಗೆ ಅವಕಾಶಗಳನ್ನು ನೀಡುವುದಿಲ್ಲ. ನಮ್ಮ ರಾಜ್ಯದ ಹೆಚ್ಚಿನ ಯುವಕರು ಸಿಎಸ್‌ಕೆ ತಂಡದ ಭಾಗವಾಗಬೇಕೆಂದು ನಾನು ಬಯಸುತ್ತೇನೆ” ಎಂದು ಶಾಸಕರು ಹೇಳಿದ್ದಾರೆ.

ಬುಧವಾರ ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್‌ 16ನೇ ಆವೃತ್ತಿಯ 17ನೇ ಪಂದ್ಯದಲ್ಲಿ ಆತಿಥೇಯ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್‌ ಸವಾಲನ್ನು ಎದುರಿಸಲಿದೆ.

ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿ ಚೆನ್ನೈ

ಐಪಿಎಲ್‌ 16ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡಕ್ಕೆ ಶರಣಾಗಿದ್ದ ಸಿಎಸ್‌ಕೆ, ನಂತರದ ಎರಡು ಪಂದ್ಯಗಳಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ವಿರುದ್ಧ ಗೆಲುವಿನ ನಗೆ ಬೀರಿದೆ.

ಚೆನ್ನ ಮತ್ತೊಂದೆಡೆ ರಾಯಲ್ಸ್‌, ಸನ್‌ರೈಸರ್ಸ್ ಹೈದರಾಬಾದ್‌, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದ್ದು, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಕಟ ಪೈಪೋಟಿ ನೀಡಿ ಸೋಲು ಕಂಡಿತ್ತು.

ಸಂಭಾವ್ಯ ತಂಡ

ಚೆನ್ನೈ ಸೂಪರ್​ ಕಿಂಗ್ಸ್​: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ವಿಕೆಟ್​ ಕೀಪರ್​), ಮಿಷೆಲ್ ಸ್ಯಾಂಟ್ನರ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ

ರಾಜಸ್ಥಾನ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್​​ ಕೀಪರ್​), ಧ್ರುವ್ ಜುರೆಲ್ / ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ಆರ್ ಅಶ್ವಿನ್, ಎಂ ಅಶ್ವಿನ್, ಟ್ರೆಂಟ್ ಬೌಲ್ಟ್, ಯಜ್ವೇಂದ್ರ ಚಹಾಲ್

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊನೆ ಉಸಿರಿರೊವರೆಗೂ ದೇಶಸೇವೆ ನಿಲ್ಲಲ್ಲ: ʼಬಾಪ್‌ ಭೀ ಜಾಯೇಗಾʼ ಟ್ರೋಲ್‌ ಬಳಿಕ ಮೋದಿ ಮಾತು

ದೇಶದ ಜನರ ಸೇವೆ ಮಾಡುವುದೇ ನನ್ನ ಜೀವನದ ಗುರಿ. ಕೊನೆಯ ಉಸಿರಿರುವವರೆಗೂ...

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...

ವಿಮಲ್ ಜಾಹೀರಾತು ವಿವಾದ: ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ ನಟ ಅಜಯ್ ದೇವಗನ್! 

'ವಿಮಲ್ ಏಲಕ್ಕಿ' ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಇಲಾಖೆ...