ಬಾರ್ಬಡೋಸ್‌ನಲ್ಲಿ ಚಂಡ ಮಾರುತ: ವೆಸ್ಟ್ ಇಂಡೀಸ್‌ನಲ್ಲಿ ಉಳಿದ ಟೀಂ ಇಂಡಿಯಾ

Date:

ಟಿ20 ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿದಿರುವ ಟೀಂ ಇಂಡಿಯಾ ತಂಡಕ್ಕೆ ಸ್ವದೇಶಕ್ಕೆ ಆಗಮಿಸುವುದಕ್ಕೆ ಬೆರಿಲ್ ಚಂಡಮಾರುತ ಅಡ್ಡಿಯಾಗಿದೆ. ಜೂನ್‌ 20ರಿಂದ ಆರಂಭಗೊಂಡಿರುವ ಬೆರಿಲ್ ಚಂಡಮಾರುತ ಕಳೆದ 2 ದಿನಗಳಿಂದ ತೀವ್ರಗೊಂಡಿದೆ.

- Advertisement -

ಚಂಡ ಮಾರುತದಿಂದ ಬರ್‌ಬಡೋಸ್‌ ವಿಮಾನ ನಿಲ್ದಾಣವನ್ನು ಸ್ಥಗಿತಗೊಳಿಸಲಾಗಿದೆ. ಕರ್ಫ್ಯು ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಟೀಂ ಇಂಡಿಯಾದ ಯಾರೊಬ್ಬರನ್ನು ಹೊಟೆಲ್ ಕೊಠಡಿಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ. ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಆಟಗಾರರಿಗೆ ಹೊರಗೆ ಕಾಲಿಡದಂತೆ ಸೂಚನೆ ನಿಡಲಾಗಿದೆ. ಚಂಡಮಾರುತದ ಅಬ್ಬರ ಕಡಿಮೆಯಾದ ನಂತರವಷ್ಟೆ ರೋಹಿತ್ ಶರ್ಮಾ ನೇತೃತ್ವದ ತಂಡ ತವರಿಗೆ ಮರಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ ಫೈನಲ್ | ರೋಚಕ ಹಣಾಹಣಿಯಲ್ಲಿ ಟೀಮ್ ಇಂಡಿಯಾ ‘ಚಾಂಪಿಯನ್’

ಮಾಧ್ಯಮಗಳ ವರದಿಯ ಪ್ರಕಾರ ಬೆರಿಲ್ ಚಂಡಮಾರುತವು ಗಂಟೆಗೆ 130 ಕಿ.ಮೀ ವೇಗದಲ್ಲಿ ಬೀಸುವ ಸಂಭವವಿದೆ. ಮಳೆ ತೀವ್ರ ಹೆಚ್ಚಾಗಿದ್ದು ಸ್ಥಳೀಯ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಬರ್‌ಬಡೋಸ್‌ ಪ್ರದೇಶವಲ್ಲದೆ ಸೆಂಟ್‌ ಲೂಸಿಯಾ, ಸೇಂಟ್ ವಿನ್‌ಸೆಂಟ್‌ ಹಾಗೂ ಗ್ರೆನಡೈನ್‌ ಪ್ರದೇಶಗಳಲ್ಲಿ ವಿಪರೀತ ಮಳೆಯಾಗುತ್ತಿದೆ.

ಬೆರಿಲ್ ಚಂಡಮಾರುತ ಪೋರ್ಟೊ ರಿಕೊದ ಆಗ್ನೇಯ ಮತ್ತು ವೆನೆಜುವೆಲಾದ ಉತ್ತರ ದ್ವೀಪಗಳ ಮೇಲೆ ಮಾರಣಾಂತಿಕ ಗಾಳಿ ಮತ್ತು ಚಂಡಮಾರುತ ಅಪ್ಪಳಿಸಲಿದೆ. ಬೆರಿಲ್ ಚಂಡಮಾರುತ ಬಾರ್ಬಡೋಸ್‌ನ ಪೂರ್ವ-ಆಗ್ನೇಯದ 355 ಮೈಲುಗಳಷ್ಟು ದೂರದಲ್ಲಿದ್ದು ಮುಂಬರುವ ಗಂಟೆಗಳಲ್ಲಿ ಪರಿಸ್ಥಿತಿಯು ತೀವ್ರವಾಗಬಹುದು.

ಬೆರಿಲ್ ಚಂಡಮಾರುತ ಮೆಕ್ಸಿಕೊ ಅಥವಾ ಅಮೆರಿಕದ ಕೆಲವು ಸ್ಥಳಗಳಿಗೆ ತಲುಪುವ ಮುನ್ನ ಕೆರೆಬಿಯನ್‌ ದ್ವೀಪದ ಜಮೈಕಾ, ಹೈಟಿ ಹಾಗೂ ಡೊಮಿನಿಕನ್ ಪ್ರದೇಶಗಳಲ್ಲಿ ಹಾನಿ ಉಂಟುಮಾಡಲಿದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...