ಏಪ್ಯಾ ಕಪ್ | ಶತಕದ ಮೂಲಕ ‘ಗಂಭೀರ’ವಾಗಿ ಉತ್ತರಿಸಿದ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್

Date:

  • ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿದ ಕೊಹ್ಲಿ-ರಾಹುಲ್ ಜೋಡಿ
  • ಪಾಕಿಸ್ತಾನಕ್ಕೆ ಗೆಲ್ಲಲು 357 ರನ್‌ಗಳ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ

ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಟೀಕಾಕಾರರಿಂದ ಟೀಕೆಗೆ ಒಳಗಾಗಿದ್ದ ಕನ್ನಡಿಗ ಕೆ ಎಲ್ ರಾಹುಲ್ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ‘ಕಮ್ ಬ್ಯಾಕ್’ ಮಾಡಿದ್ದಾರೆ.

ಕೆ ಎಲ್ ರಾಹುಲ್ ಜೊತೆಗೆ ವಿರಾಟ್ ಕೊಹ್ಲಿ ಕೂಡ ಶತಕ ಬಾರಿಸಿದ್ದು, ತನ್ನ ಬ್ಯಾಟಿಂಗ್ ಬಗ್ಗೆ ಟೀಕಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ.

ನಿನ್ನೆ (ಸೆಪ್ಟೆಂಬರ್‌ 10) ಕೊಲೊಂಬೋದ ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನದ ಏಷ್ಯಾ ಕಪ್ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಸೂಪರ್-4 ಹಂತದ ನಿನ್ನೆಯ ಪಂದ್ಯವನ್ನು ಸೆಪ್ಟೆಂಬರ್​ 11ಕ್ಕೆ ಮುಂದೂಡಲಾಗಿತ್ತು. ಪಂದ್ಯ ನಿಲ್ಲುವ ಹೊತ್ತಿಗೆ ಭಾರತ 147/2 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ (ಅಜೇಯ 8) ಮತ್ತು ಕೆ.ಎಲ್. ರಾಹುಲ್ (ಅಜೇಯ 17) ರನ್ ಗಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂದು ಬ್ಯಾಟಿಂಗ್ ಆರಂಭಿಸಿದ ಈ ಜೋಡಿ ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿತು.

ಕೆ ಎಲ್ ರಾಹುಲ್ 106 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್‌ನ ನೆರವಿನಿಂದ 111 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ ಮೂರು ಸಿಕ್ಸ್, 9 ಬೌಂಡರಿಗಳ ನೆರವಿನಿಂದ 122 ರನ್ ಬಾರಿಸಿ, ಔಟಾಗದೆ ಉಳಿದರು. ಆ ಮೂಲಕ ಪಂದ್ಯವನ್ನು ಗೆಲ್ಲಲು ಪಾಕಿಸ್ತಾನಕ್ಕೆ 357 ರನ್‌ಗಳ ಬೃಹತ್ ಗುರಿ ನೀಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್...

ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್...

ಎಲಿಮಿನೇಟರ್ ಪಂದ್ಯ | ರಾಜಸ್ಥಾನ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಆರ್‌ಸಿಬಿ

ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ...