ಟಿ20 ವಿಶ್ವಕಪ್ ಗೆದ್ದ ಭಾರತ ತಂಡದಿಂದ ಮುಂಬೈನಲ್ಲಿ ಅದ್ಧೂರಿ ಮೆರವಣಿಗೆ: ಟೀಂ ಇಂಡಿಯಾವನ್ನು ಕಣ್ತುಂಬಿಕೊಳ್ಳಲಿರುವ ಸಾವಿರಾರು ಅಭಿಮಾನಿಗಳು

Date:

ಎರಡನೇ ಬಾರಿ ಟಿ20 ವಿಶ್ವಕಪ್‌ ಟ್ರೋಫಿ ಮುಡಿಗೇರಿಸಿಕೊಂಡ ಟೀಂ ಇಂಡಿಯಾ ವೆಸ್ಟ್‌ ಇಂಡೀಸ್‌ ದ್ವೀಪ ರಾಷ್ಟ್ರದಿಂದ ಇಂದು ಬೆಳಿಗ್ಗೆ 6.20ಕ್ಕೆ ಭಾರತಕ್ಕೆ ಆಗಮಿಸಿದ್ದು, ವಿಮಾನ ನಿಲ್ದಾಣದಲ್ಲೇ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆತಿದೆ.

- Advertisement -

ಜೂ.29ರಂದು ಬಾರ್ಬೊಡೋಸ್‌ನ ಕೆನ್ಸಿಂಗ್ಟನ್‌ ಓವಲ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚಾಂಪಿಯನ್‌ ಆಗಿತ್ತು. ದ್ವೀಪ ರಾಷ್ಟ್ರದಲ್ಲಿ ಬೇರಿಲ್‌ ಚಂಡ ಮಾರುತದಿಂದಾಗಿ ತವರಿಗೆ ಮರಳದೆ 4 ದಿನ ವೆಸ್ಟ್‌ ಇಂಡೀಸ್‌ನಲ್ಲೆ ಉಳಿದುಕೊಳ್ಳಬೇಕಾಗಿತ್ತು. ಇಂದು ಏರ್‌ ಇಂಡಿಯಾ ಚಾರ್ಟರ್ಡ್‌ ವಿಮಾನದಲ್ಲಿ 18 ಗಂಟೆಗಳ ಪ್ರಯಾಣದ ನಂತರ ಆಟಗಾರರು ನವದೆಹಲಿಗೆ ಮರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮ್ಮ ನೆಚ್ಚಿನ ವಿಶ್ವ ಚಾಂಪಿಯನ್‌ ತಂಡದ ಆಟಗಾರರನ್ನು ನೋಡಲು ಅಭಿಮಾನಿಗಳು ರಾತ್ರಿಯಿಂದಲೇ ಕಾತರದಿಂದ ಕಾಯುತ್ತಿದ್ದರು. ವಿಮಾನ ನಿಲ್ದಾಣ ಸಿಬ್ಬಂದಿ ಕೂಡ ತಂಡದ ಆಟಗಾರರಿಗೆ ವಿಶೇಷ ಸ್ವಾಗತ ಸಮಾರಂಭವನ್ನು ಏರ್ಪಡಿಸಿದ್ದರು. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾ ತಂಡ ಕೇಕ್‌ ಕತ್ತರಿಸಿ ಸಂಭ್ರಮಿಸಿತು.

ಈ ನಡುವೆ ತಮಟೆ ಬಾರಿಸುತ್ತಾ ಹಾಗೂ ಬಾಂಗ್ರಾ ನೃತ್ಯ ಪ್ರದರ್ಶಿಸಿ ಸ್ವಾಗತ ಕೋರುತ್ತಿದ್ದವರೊಂದಿಗೆ ನಾಯಕ ರೋಹಿತ್​ ಶರ್ಮಾ, ರಿಷಭ್ ಪಂತ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಹೆಜ್ಜೆ ಹಾಕಿದ್ದಾರೆ. ರೋಹಿತ್​, ವಿಶೇಷ ಡ್ಯಾನ್ಸ್ ಮಾಡುವ​ ಮೂಲಕ ಸಂಭ್ರಮಿಸಿದ್ದಾರೆ. ರಿಷಭ್ ಪಂತ್ ಟ್ರೋಫಿ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ.

ತಮಟೆ ಸದ್ದಿಗೆ ಭಾರತೀಯ ಕ್ರಿಕೆಟಿಗರು ಸಖತ್ ಹೆಜ್ಜೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೆಲ್ಲದ್ದಕ್ಕೂ ಮುನ್ನ ವಿಮಾನದಲ್ಲೇ ಭಾರತ ಆಟಗಾರರು ಭರ್ಜರಿಯಾಗಿ ಸಂಭ್ರಮಿಸಿದ್ದಾರೆ. ಟ್ರೋಫಿ ಹಿಡಿದು ಫೋಸ್ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಕಪ್ ಹಿಡಿದು ಭಾವುಕರಾಗಿದ್ದಾರೆ. ಪಂತ್ ಕುಣಿದಿದ್ದಾರೆ. ಇದರ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿದೆ.

ಟೀಂ ಇಂಡಿಯಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಬೆಳಿಗ್ಗೆ 9.30ಕ್ಕೆ ಉಪಾಹಾರವನ್ನು ಏರ್ಪಡಿಸಿದ್ದರು. ಪ್ರಧಾನಿ ಭೇಟಿಯ ನಂತರ ಭಾರತ ತಂಡದ ಆಟಗಾರರು ಮುಂಬೈಗೆ ತೆರಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಒಂದು ಅವಲೋಕನ | ದಕ್ಷಿಣ ಆಫ್ರಿಕಾ ಕ್ರಿಕೆಟ್ ನೆಪದಲ್ಲಿ ಕರಾಳ ಇತಿಹಾಸ ಮತ್ತು ಮಂಡೇಲಾ ಉದಾತ್ತತೆ

ಸಂಜೆ 5 ಗಂಟೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ನಂತರ ತೆರದ ವಾಹನದಲ್ಲಿ ಒಂದು ಕಿಮೀ ಮೆರವಣಿಗೆ ಮೂಲಕ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣಕ್ಕೆ ತಲುಪಲಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಸಾವಿರಾರು ಕ್ರಿಕೆಟ್‌ ಅಭಿಮಾನಿಗಳು ಪಾಲ್ಗೊಂಡು ಟೀಂ ಇಂಡಿಯಾ ಜೊತೆ ಸಂಭ್ರಮಿಸಲಿದ್ದಾರೆ. ಅನಂತರದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ಹಸ್ತಾಂತರಿಸಲಿದ್ದಾರೆ. ಸಮಾರಂಭ ಪೂರ್ಣಗೊಂಡ ನಂತರ ಆಟಗಾರರು ತಮ್ಮ ತಮ್ಮ ನಿವಾಸಗಳಿಗೆ ತೆರಳಲಿದ್ದಾರೆ.

ಜೂ.29ರಂದು ಬಾರ್ಬೊಡೋಸ್‌ನ ಕೆನ್ಸಿಂಗ್ಟನ್‌ ಓವಲ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿ ಎರಡನೇ ಬಾರಿ ಟಿ20 ಚಾಂಪಿಯನ್‌ ಪಟ್ಟಕೇರಿ 17 ವರ್ಷಗಳ ನಂತರ ಟ್ರೋಫಿಯ ಬರವನ್ನು ನೀಗಿಸಿಕೊಂಡಿತ್ತು. ಭಾರತ ನೀಡಿದ 176 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹರಿಣಗಳ ತಂಡ 169 ರನ್‌ಗಳನಷ್ಟೆ ಗಳಿಸಲು ಶಕ್ತವಾಗಿತ್ತು.

2011ರ ಏಕದಿನ ವಿಶ್ವಕಪ್‌ ಗೆದ್ದ ನಂತರ ಭಾರತ ಯಾವುದೇ ಐಸಿಸಿ ಟ್ರೋಫಿಯನ್ನು ಜಯಿಸಿರಲಿಲ್ಲ. ಟಿ20 ವಿಶ್ವಕಪ್‌ ಟ್ರೋಫಿ ಜಯಿಸಿದ ನಂತರ ಸ್ಟಾರ್‌ ಆಟಗಾರರಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಹಾಗೂ ರವೀಂದ್ರ ಜಡೇಜಾ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕೋಚ್‌ ರಾಹುಲ್‌ ದ್ರಾವಿಡ್‌ ಅವಧಿ ಕೂಡ ಅಂತ್ಯವಾಗಲಿದೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...