ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

Date:

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್‌ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಆತಿಥೇಯ ಅಮೆರಿಕ ತಂಡವು 111 ರನ್‌ಗಳ ಸಾಧಾರಣ ಗುರಿ ನೀಡಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಹಂಗಾಮಿ ನಾಯಕ ಆ್ಯರನ್ ಜೋನ್ಸ್‌ ನೇತೃತ್ವದ ಯುಎಸ್‌ಎ ತಂಡ ಟೀಮ್ ಇಂಡಿಯಾ ಬೌಲರ್ ಅರ್ಷ್‌ದೀಪ್ ಸಿಂಗ್ ಅವರ ದಾಳಿಗೆ ಸಿಲುಕಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಲಷ್ಟೇ ಶಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಟೀಮ್ ಇಂಡಿಯಾ ಪರ ಮೊದಲ ಓವರ್ ಎಸೆದ ಅರ್ಷ್‌ದೀಪ್ ಸಿಂಗ್, ಮೊದಲ ಓವರ್‌ನ ಮೊದಲ ಎಸೆತದಲ್ಲಿ ಶಯಾನ್ ಜಹಾಂಗೀರ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸಿದರೆ, ಕೊನೆಯ ಎಸೆತದಲ್ಲಿ ಆ್ಯಂಡ್ರಿಸ್ ಗೌಸ್ ಅವರ ವಿಕೆಟ್ ಪಡೆಯುವಲ್ಲಿ ಸಫಲರಾದರು.

ಕಳೆದ ಎರಡು ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಜೋನ್ಸ್‌ ಇಂದಿನ ಪಂದ್ಯದಲ್ಲಿ ವಿಫಲರಾದರು. 22 ಎಸೆತಗಳಲ್ಲಿ 11 ರನ್ ಗಳಿಸಿ ಹಾರ್ದಿಕ್ ಪಾಂಡ್ಯಾ ಎಸೆತದಲ್ಲಿ ಸಿರಾಜ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಬಳಿಕ ಮೆಲ್ಲಗೆ ತಂಡದ ಮೊತ್ತವನ್ನು ಸೇರಿಸುವಲ್ಲಿ ಸಫಲರಾದ ಅಮೆರಿಕ ಬ್ಯಾಟರ್‌ ಸ್ಟೀವನ್ ಟೇಲರ್ 24 ರನ್ ಗಳಿಸಿದ್ದಾಗ ಅಕ್ಸರ್ ಪಟೇಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಬಳಿಕ ಅಮೆರಿಕ ಪರ ಆಟವಾಡುತ್ತಿರುವ ಭಾರತೀಯ ಮೂಲದ ನಿತೀಶ್ ಕುಮಾರ್ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸ್‌ನ ನೆರವಿನಿಂದ 27 ರನ್ ಗಳಿಸಿ, ಅರ್ಷ್‌ದೀಪ್‌ಗೆ ವಿಕೆಟ್ ಒಪ್ಪಿಸಿದರು. ಬೌಂಡರಿ ಲೈನ್‌ನಲ್ಲಿ ಫೀಲ್ದಿಂಗ್ ಮಾಡುತ್ತಿದ್ದ ಮೊಹಮ್ಮದ್ ಸಿರಾಜ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಉಳಿದಂತೆ ಅಮೆರಿಕ ಪರ ಕೋರಿ ಆ್ಯಂಡರ್‌ಸನ್ 15 ರನ್, ಶ್ಯಾಡ್ಲಿ 11, ಹರ್ಮೀತ್ ಸಿಂಗ್ 10 ರನ್‌ಗಳ ಕೊಡುಗೆ ನೀಡಿದರು. ಕೊನೆಯಲ್ಲಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ರೋಹಿತ್ ಶರ್ಮಾ ಪಡೆಗೆ ಗೆಲ್ಲಲು 111 ರನ್‌ಗಳ ಸಾಧಾರಣ ಗುರಿ ನೀಡಿದೆ.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 4 ಓವರ್‌ಗಳನ್ನು ಎಸೆದು ಕೇವಲ 9 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದರು. ಉಳಿದಂತೆ ಹಾರ್ದಿಕ್ ಪಾಂಡ್ಯಾ 2 ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...