ಮೊದಲ ಟೆಸ್ಟ್‌ನಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌: ಮೂವರು ಕನ್ನಡಿಗರಿಗೆ ಸ್ಥಾನ

Date:

ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಟೆಸ್ಟ್‌ ಸರಣಿ ಆರಂಭವಾಗಿದ್ದು, ಟಾಸ್‌ ಗೆದ್ದಿರುವ ಇಂಗ್ಲೆಂಡ್‌ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

- Advertisement -

ಐದು ಪಂದ್ಯಗಳ ತೆಂಡೂಲ್ಕರ್‌ – ಆಂಡರ್‌ಸನ್‌ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಲೀಡ್ಸ್‌ ಮೈದಾನದಲ್ಲಿ ನಡೆಯುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಆರ್‌ ಅಶ್ವಿನ್‌ ಅವರಂತಹ ಅನುಭವಿಗಳು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದರಿಂದ, ಈಗ ತಂಡದ ನಾಯಕತ್ವವನ್ನು ಅನುಭವಿ ಶುಭ್​ಮನ್ ಗಿಲ್ ಹೊತ್ತುಕೊಂಡು ಯುವ ಬ್ರಿಗೇಡ್‌ನ್ನು ಇಂಗ್ಲೆಂಡ್‌ನಲ್ಲಿ ಮುನ್ನಡೆಸಲಿದ್ದಾರೆ. ಸಾಲು ಸಾಲು ಸವಾಲುಗಳನ್ನು ಟೀಮ್ ಇಂಡಿಯಾ ಹೇಗೆ ಮೆಟ್ಟಿ ನಿಲ್ಲುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಗುಜರಾತ್‌ ಟೈಟಾನ್ಸ್‌ ತಂಡದ ಸಾಯಿ ಸುದರ್ಶನ್‌ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಸಾಯಿ ಸುದರ್ಶನ್‌ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ದೇಶೀಯ ಟೂರ್ನಿಯಲ್ಲಿ ರನ್‌ಗಳನ್ನು ಪೇರಿಸಿದ್ದರು. ಇವರು ಐಪಿಎಲ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 54ರ ಸರಾಸರಿಯಲ್ಲಿ 759 ರನ್‌ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿದ್ದವು. ಈ ಪ್ರದರ್ಶನದ ಮೂಲಕ ಸಾಯಿ ಸುದರ್ಶನ್‌ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆ ಆಗಿದ್ದಾರೆ.

ಇದನ್ನು ಓದಿದ್ದೀರಾ? ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ

ಶುಭಮನ್‌ ಗಿಲ್‌ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್‌ ಬ್ಯಾಟ್‌ ಮಾಡಲಿದ್ದಾರೆ. 11ರ ಬಳಗದಲ್ಲಿ ಇಬ್ಬರು ಆಲ್‌ರೌಂಡರ್‌ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್‌ ಕೀಪರ್‌ ಆಗಿ ರಿಷಭ್‌ ಪಂಥ್‌ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಮೂವರು ಕನ್ನಡಿಗರಿಗೆ ಅವಕಾಶ

ಲೀಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಲಭಿಸಿದೆ. ಆರಂಭಿಕರಾಗಿ ಕೆಎಲ್ ರಾಹುಲ್‌ ಸ್ಥಾನ ಪಡೆದಿದ್ದರೆ, ಕರುಣ್ ನಾಯರ್‌ ಮಧ್ಯಮ ಕ್ರಮಾಂಕದಲ್ಲಿ ಹಾಗೂ ವೇಗದ ಬೌಲರ್‌ ಆಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಸಿದ್ದಾರೆ.

ಭಾರತ ಉತ್ತಮ ಆರಂಭ

ಮೊದಲು ಬ್ಯಾಟ್‌ ಮಾಡುತ್ತಿರುವ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು 11 ಓವರ್‌ಗಳಲ್ಲಿ ವಿಕೇಟ್‌ ನಷ್ಟವಿಲ್ಲದೆ 36 ರನ್‌ ಗಳಿಸಿದೆ. ಯಶಸ್ವಿ ಜೈಸ್ವಾಲ್‌ 23 ರನ್‌ಗಳೊಂದಿಗೆ ಬ್ಯಾಟ್‌ ಮಾಡುತ್ತಿದ್ದರೆ, ಕನ್ನಡಿಗ ಕೆ ಎಲ್‌ ರಾಹುಲ್‌ 12 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.

ಪಂದ್ಯವಾಡುವ ಉಭಯ ತಂಡಗಳ 11ರ ಬಳಗ:

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌ ಸಿರಾಜ್

ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್‌ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...