ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರಿದ ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್

Date:

ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದ್ದು, ಟೆನಿಸ್ ಮಾಜಿ ಆಟಗಾರ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -

​ಕೇಂದ್ರ ಸಚಿವ ಕಿರಣ್ ರಿಜಿಜು ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಾಧ್ಯಕ್ಷ ಮತ್ತು ಸಂಸದ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

​ಪೇಸ್ ಅವರನ್ನು ಸ್ವಾಗತಿಸಿ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, 1996ರ ಅಟ್ಲಾಂಟಾ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಟೆನಿಸ್ ತಾರೆಯ ಸಾಧನೆಯನ್ನು ಸ್ಮರಿಸಿದರು. ಗಾಯದ ನಡುವೆಯೂ ಹೋರಾಡಿದ್ದ ಪೇಸ್ ಅವರು ಆಂಡ್ರೆ ಅಗಾಸ್ಸಿ ವಿರುದ್ಧ ಸೋತಾಗ ತಮಗೆ ತೀವ್ರ ‘ಬೇಸರ’ವಾಗಿತ್ತು, ಬಳಿಕ ಅದೇ ಅಗಾಸ್ಸಿ ಟೂರ್ನಿಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದರು ಎಂಬುದನ್ನು ರಿಜಿಜು ನೆನಪಿಸಿಕೊಂಡರು.

ಇದನ್ನು ಓದಿದ್ದೀರಾ? IPL ಅಂಗಳದಲ್ಲಿ ‘ಆರ್‌ಸಿಬಿ’ ಅತಿದೊಡ್ಡ ಬ್ರ್ಯಾಂಡ್ ಆಗಿ ಬೆಳೆದದ್ದೇ ಒಂದು ವಿಸ್ಮಯ

​”ಆ ದಿನಗಳಲ್ಲಿ ಒಲಿಂಪಿಕ್ಸ್‌ನ ಪದಕ ಪಟ್ಟಿಯಲ್ಲಿ ಭಾರತದ ಹೆಸರು ಕಾಣಿಸಿಕೊಳ್ಳುವುದು ಬಹಳ ಅಪರೂಪವಾಗಿತ್ತು. ಮೊದಲ ಬಾರಿಗೆ ಭಾರತವನ್ನು ಒಲಿಂಪಿಕ್ಸ್ ಭೂಪಟದಲ್ಲಿ ದಿಟ್ಟವಾಗಿ ಗುರುತಿಸುವಂತೆ ಮಾಡಿದ್ದು ಇದೇ ಲಿಯಾಂಡರ್ ಪೇಸ್. ಇದೀಗ ಅವರು ಬಿಜೆಪಿ ವೇದಿಕೆಯ ಮೂಲಕ ದೇಶಸೇವೆ ಮಾಡಲಿದ್ದಾರೆ” ಎಂದು ರಿಜಿಜು ಪ್ರಶಂಸಿಸಿದರು. ಅಲ್ಲದೆ, ಪೇಸ್ ಅವರ ಪಕ್ಷ ಸೇರ್ಪಡೆಯನ್ನು ‘ಐತಿಹಾಸಿಕ ಕ್ಷಣ’ ಎಂದು ತಿಳಿಸಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳದ ಬಾಲೂರ್‌ಘಾಟ್ ಕ್ಷೇತ್ರದ ಸಂಸದ ಸುಕಾಂತ ಮಜುಂದಾರ್, “ಲಿಯಾಂಡರ್ ಪೇಸ್ ಅವರ ಸೇರ್ಪಡೆಯಿಂದ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಬಲವರ್ಧನೆಗೊಂಡು ಬೆಳೆಯಲು ಸಹಾಯವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...