ಟೆಸ್ಟ್ ಕ್ರಿಕೆಟ್ | ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರಿಷಬ್ ಪಂತ್!

Date:

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ರಿಷಬ್‌ ಪಂತ್‌ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಮುಗಿದಿದೆ. ಬೆಂಗಳೂರಿನಲ್ಲಿ ನಡೆದ ಆ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಪಂತ್ 99 ರನ್‌ ಗಳಿಸಿದ್ದಾರೆ. ಆ ರನ್‌ಗಳೊಂದಿಗೆ 6ನೇ ಸ್ಥಾನಕ್ಕೆ ಏರಿದ್ದಾರೆ. ಅದೇ ಟೆಸ್ಟ್‌ನಲ್ಲಿ 70 ರನ್ ಕಲೆಹಾಕಿದ ಕೋಹ್ಲಿ ಅವರು 8ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅಲ್ಲದೆ, ಟೀಮ್‌ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ನಾಲ್ಕನೇ ಸ್ಥಾನದಲ್ಲಿಯೇ ಉಳಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು 15ನೇ ಸ್ಥಾನದಲ್ಲಿದ್ದಾರೆ.

ಇನ್ನು, ಬೌಲರ್‌ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ವೇಗಿ ಬೌಲರ್ ಆರ್ ಅಶ್ವಿನ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಏಳನೇ ಸ್ಥಾನವನ್ನು ಉಳಿಸಿಕೊಂಡಿರುವ ರವೀಂದ್ರ ಜಡೇಜಾ ಅಗ್ರ-10ರೊಳಗೆ ಮತ್ತೊಬ್ಬ ಭಾರತೀಯ ಬೌಲರ್ ಆಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ – ನ್ಯೂಜಿಲೆಂಡ್ ಟೆಸ್ಟ್‌ | ಮೊದಲ ದಿನದಾಟ ರದ್ದು: 5 ದಿನವೂ ಬೆಂಗಳೂರಿನಲ್ಲಿ ಮಳೆ ಭೀತಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ...

ರಾಯಚೂರು | ನ.23-24: ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

ಯುವಕರಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಸೋಲಿಡಾರಿಟಿ ಯೂತ್ ಮೂಮೆಂಟ್...

ಮೈಸೂರು | ಇಂಟರ್ ನ್ಯಾಷನಲ್ ಟೆನಿಸ್ ಫೆಡರೇಷನ್ ವತಿಯಿಂದ ನಡೆದ ‘ಐಟಿಎಫ್ ಹಬ್ಬ’ ಸಮಾರೋಪ

ಮೈಸೂರಿನಲ್ಲಿ ಅಕ್ಟೋಬರ್ 7ರಿಂದ 13ನೇ ತಾರೀಖಿನವರೆಗೆ ಮೈಸೂರು ಟೆನಿಸ್ ಕ್ಲಬ್ ಕ್ರೀಡಾಂಗಣದಲ್ಲಿ,...

ಟಿ20 ಮಹಿಳಾ ವಿಶ್ವಕಪ್ | ಆಸೀಸ್ ವಿರುದ್ಧ ಸೋತ ಭಾರತ; ಸೆಮಿ ಹಾದಿ ಕಠಿಣ

ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ವೀರೋಚಿತ ಹೋರಾಟದ ಹೊರತಾಗಿಯುೂ...