ಐಪಿಎಲ್ 2024 | ಪಂದ್ಯಗಳ ವೇಳಾಪಟ್ಟಿ ಪ್ರಕಟ: ಚೆನ್ನೈ-ಆರ್‌ಸಿಬಿ ನಡುವೆ ಉದ್ಘಾಟನಾ ಪಂದ್ಯ

Date:

ಹಲವು ವಿವಾದಗಳ ನಡುವೆಯೂ ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬ ಎಂದೇ ಪರಿಗಣಿತವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌)ನ 2024ರ ಪ್ರಾರಂಭದ ದಿನಾಂಕವನ್ನು ಘೋಷಿಸಿದ ಬೆನ್ನಲ್ಲೇ, ಪಂದ್ಯಗಳ ವೇಳಾಪಟ್ಟಿಯನ್ನೂ ಕೂಡ ಇಂದು ಪ್ರಕಟಗೊಂಡಿದೆ.

ಮಾರ್ಚ್‌ 22ರಿಂದ ಐಪಿಎಲ್ ಪಂದ್ಯಗಳು ಆರಂಭವಾಗಲಿದ್ದು, ಲೋಕಸಭಾ ಚುನಾವಣೆಯ ಹೊರತಾಗಿಯೂ ಈ ವರ್ಷದ ಸಂಪೂರ್ಣ ಪಂದ್ಯಗಳು ಭಾರತದಲ್ಲಿಯೇ ನಡೆಯಲಿವೆ ಎಂದು ಐಪಿಎಲ್‌ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದರು.

ಇಂದು ಸಂಜೆ ಐಪಿಎಲ್‌ನ 17ನೇ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ನಡುವೆ ಉದ್ಘಾಟನಾ ಪಂದ್ಯವು ಮಾ.22ರ ಶುಕ್ರವಾರ ಸಂಜೆ 6.30ಕ್ಕೆ ಚೆನ್ನೈನ ಚಪಾಕ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊದಲ ಹಂತದ ಎಲ್ಲ 21 ಪಂದ್ಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಪ್ರತಿಯೊಂದು ತಂಡವು ಒಟ್ಟು ಐದು ಪಂದ್ಯಗಳನ್ನು ಆಡಲಿದೆ. ಏಪ್ರಿಲ್ 7ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್‌ ತಂಡದ ನಡುವೆ 21ನೇ ಪಂದ್ಯವು ಲಕ್ನೋದಲ್ಲಿ ನಡೆಯಲಿದೆ.

ಆರ್‌ಸಿಬಿಯ ಪಂದ್ಯಗಳು ಹೀಗಿದೆ:

ಆರ್‌ಸಿಬಿಯು ಮಾ.22ರಂದು ಚೆನ್ನೈ, ಮಾ.25ರಂದು ಪಂಜಾಬ್, ಮಾ.29ರಂದು ಕೊಲ್ಕತ್ತಾ, ಏಪ್ರಿಲ್ 2ರಂದು ಲಕ್ನೋ ಹಾಗೂ ಏಪ್ರಿಲ್ 6ರಂದು ರಾಜಸ್ಥಾನದ ವಿರುದ್ಧ ಆಡಲಿದೆ. ಈ ಐದು ಪಂದ್ಯಗಳ ಪೈಕಿ ಮೂರು ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ಪಂಜಾಬ್, ಕೊಲ್ಕತ್ತಾ, ಲಕ್ನೋ ವಿರುದ್ಧದ ಪಂದ್ಯಗಳು ಚಿನ್ನಸ್ವಾಮಿಯಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ಹಿಮ್ಮಡಿ ಶಸ್ತ್ರಚಿಕಿತ್ಸೆ: ಐಪಿಎಲ್ ಟೂರ್ನಿಯಿಂದ ಶಮಿ ಹೊರಗೆ

ಲೋಕಸಭಾ ಚುನಾವಣೆಯ ಪ್ರಯುಕ್ತ 2009ರಲ್ಲಿ ಮಾತ್ರ ಪೂರ್ಣ ಐಪಿಎಲ್ ಟೂರ್ನಿ ದಕ್ಷಿಣ ಆಫ್ರಿಕಾದಲ್ಲಿ ನಡೆದಿತ್ತು. 2014ರ ಟೂರ್ನಿಯ ಭಾಗಶಃ ಪಂದ್ಯಗಳು ಯುಎಇನಲ್ಲಿ ನಡೆದಿದ್ದವು. 2019ರಲ್ಲಿ ಚುನಾವಣೆಯ ಹೊರತಾಗಿಯೂ ಐಪಿಎಲ್ ಟೂರ್ನಿ ಭಾರತದಲ್ಲಿ ನಡೆದಿದ್ದವು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ...

ಅವಕಾಶ ಕೈಚೆಲ್ಲಿದ ರಾಜಸ್ಥಾನ ಸ್ಪಿನ್ ಮೋಡಿಗೆ ‘ಬಲಿ’ : ಫೈನಲ್‌ಗೆ ಲಗ್ಗೆ ಇಟ್ಟ ಸನ್‌ರೈಸರ್ಸ್‌ ಹೈದರಾಬಾದ್

ಈ ಬಾರಿಯ ಐಪಿಎಲ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ...

ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ....