ಕೆಎಸ್‌ಸಿಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಕ್ಕೆ ಹೈಕೋರ್ಟ್‌ ತಡೆ

Date:

ಡಿಸೆಂಬರ್‌ 7ರಂದು ನಿಗದಿಯಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್‌, ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ, ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ.

- Advertisement -

ತಾಂತ್ರಿಕ ಅಂಶ ಮುಂದಿಟ್ಟುಕೊಂಡು ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿರುವ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೆ ಎನ್‌ ಶಾಂತಕುಮಾರ್‌ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾ. ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕೆಲ ಕಾಲ ವಾದ – ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, “ಚುನಾವಣೆಯ ಅಧ್ಯಕ್ಷ ಸ್ಥಾನದ ಕುರಿತು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸದಂತೆ ನಿರ್ಬಂಧ ವಿಧಿಸಲಾಗುವುದು ಮತ್ತು ನಾಮಪತ್ರ ತಿರಸ್ಕೃತಗೊಂಡಿರುವ ಸಂಬಂಧ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸಬೇಕು,” ಎಂದು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಇದರ ಜತೆಗೆ, ಪ್ರತಿವಾದಿಗಳಾದ ಬಿ.ಕೆ. ವೆಂಕಟೇಶ್‌ ಪ್ರಸಾದ್‌, ಕಲ್ಪನಾ ವೆಂಕಟಾಚಾರ್‌, ಕೆಎಸ್‌ಸಿಎ ಚುನಾವಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಲಯ, “ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ ಇಲ್ಲವೇ ಎಂಬ ಬಗ್ಗೆ ಚುನಾವಣಾಧಿಕಾರಿಗಳಿಗೆ ಮೊದಲೇ ಮಾಹಿತಿ ಇತ್ತೇ,” ಎಂದು ಪ್ರಶ್ನಿಸಿತು.

ಇದನ್ನು ಓದಿದ್ದೀರಾ? ದೀಪಿಕಾ ಟಿ ಸಿ | ಅಂಧತ್ವದ ಗೆರೆಗಳನ್ನು ಮೀರಿ ಕ್ರಿಕೆಟ್‌ನಲ್ಲಿ ಬೆಳಗುತ್ತಿರುವ ನಕ್ಷತ್ರ

ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಚುನಾವಣೆಗೆ ಮಾಜಿ ಅಧ್ಯಕ್ಷ ಬ್ರಿಜೇಶ್‌ ಪಟೇಲ್‌ ಬಣದಿಂದ ಕೆ ಎನ್‌ ಶಾಂತಕುಮಾರ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಮತ್ತೊಂದು ಬಣದಿಂದ ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್‌ ಪ್ರಸಾದ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಧಿಸಿದ್ದರು.

ನ್ಯಾಯಾಲಯದ ನಿರ್ದೇಶನದಂತೆ ನಾಮಪತ್ರ ಪರಿಶೀಲನೆ ನಡೆಸಿದಾಗ, ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎನ್‌. ಶಾಂತಕುಮಾರ್‌ ಕೇವಲ 200 ರೂ. ವಂತಿಗೆ ಹಣ ಬಾಕಿ ಉಳಿಸಿಕೊಂಡಿದ್ದರೆಂಬ ಕಾರಣ ನೀಡಿ ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಹೀಗಾಗಿ, ವೆಂಕಟೇಶ್‌ ಪ್ರಸಾದ್‌ ಮತ್ತು ಕಲ್ಪನಾ ವೆಂಕಟಾಚಾರ್‌ ನಾಮಪತ್ರ ಸಿಂಧು ಎಂದು ಪ್ರಕಟಿಸಲಾಗಿತ್ತು. ಇಬ್ಬರೂ ಒಂದೇ ಬಣಕ್ಕೆ ಸೇರಿರುವುದರಿಂದ ವೆಂಕಟೇಶ್‌ ಪ್ರಸಾದ್‌ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿತ್ತು. ಹಾಗೆಯೇ ವೆಂಕಟಢಶ್ ಪ್ರಸಾದ್ ಬಣದಿಂದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್‌ ಮೃತ್ಯುಂಜಯ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....