ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

Date:

ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ  ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್ 12 ದಿನಗಳ ನಂತರ ಮೌನ ಮುರಿದಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ 32 ವರ್ಷದ ಮಿಚೆಲ್ ಮಾರ್ಷ್ ಅವರು “ನಾನು ಕಾಲಿಟ್ಟಿರುವ ಟ್ರೋಫಿಯ ಭಾವಚಿತ್ರದಲ್ಲಿ ನಿಸ್ಸಂಶಯವಾಗಿ ಯಾವುದೇ ಅಗೌರವ ಇರಲಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಲೂ ಇಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಈ ಫೋಟೋ ವೈರಲ್‌ ಆಗಿರುವ ಬಗ್ಗೆ ನನ್ನ ಸ್ನೇಹಿತರು ಹೇಳಿದ್ದರು. ನಾನು ಯಾವ ಸಂದೇಶವನ್ನು ಕೂಡ ನೋಡಿಲ್ಲ. ಭಾವಚಿತ್ರದಲ್ಲಿ ಯಾವುದೇ ಅಗೌರವ ಇಲ್ಲ” ಎಂದು ತಿಳಿಸಿದ್ದಾರೆ.

ಆಸೀಸ್‌ನ ಎರಡನೇ ಕ್ರಮಾಂಕದ ಆಟಗಾರ ಮಿಚೆಲ್ 2 ಶತಕ ಹಾಗೂ 1 ಅರ್ಧ ಶತಕದೊಂದಿಗೆ ಟೂರ್ನಿಯಲ್ಲಿ 441 ರನ್‌ ಕಲೆ ಹಾಕಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇವರ ತಂದೆ ಜೆಫ್‌ ಮಾರ್ಷ್ ಕೂಡ 80ರ ದಶಕದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಆಟಗಾರರಾಗಿದ್ದು, 1987ರಲ್ಲಿ ಆಸೀಸ್‌ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಬಳಗದ ಸದಸ್ಯರಾಗಿದ್ದರು. ಇವರ ಸೋದರ ಶೇನ್‌ ಮಾರ್ಷ್ ಕೂಡ ಕ್ರಿಕೆಟ್ ಆಟಗಾರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞತೆ ಸಲ್ಲಿಸಿದ ಕ್ರಿಕೆಟಿಗ ಜಾಂಟಿ ರೋಡ್ಸ್

ವಿಶ್ವಕಪ್ ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ತನ್ನ ತಂಡದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ನೀಡಿದ್ದರು. ಮಿಚೆಲ್ ಮಾರ್ಷ್ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್‌ ಆಗಿತ್ತು.

ನ.19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ತಂಡವನ್ನು ಪ್ಯಾಟ್‌ ಕಮಿನ್ಸ್ ಸಾರಥ್ಯದ ಆಸ್ಟ್ರೇಲಿಯಾ ಬಳಗ 6 ವಿಕೆಟ್‌ನಿಂದ ಮಣಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ಟೂರ್ನಿಯುದ್ದಕ್ಕೂ ಒಂದೂ ಪಂದ್ಯವನ್ನು ಸೋಲದ ಭಾರತ ಫೈನಲ್‌ ಪಂದ್ಯದಲ್ಲಿ ಎಡವಿತ್ತು. ಕೇವಲ 240 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ರನ್‌ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತ್ತು.

ಸದ್ಯ ಟೀಂ ಇಂಡಿಯಾ – ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ 5 ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಈಗಾಗಲೇ 2-1ರಲ್ಲಿ ಭಾರತ ಮುಂದಿದ್ದು, ಉಳಿದ ಎರಡು ಪಂದ್ಯಗಳು ರಾಯ್‌ಪುರ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4ನೇ ಟೆಸ್ಟ್‌ | ಇಂಗ್ಲೆಂಡ್‌ ಸ್ಪಿನ್‌ ದಾಳಿಗೆ ನಲುಗಿದ ಟೀಮ್ ಇಂಡಿಯಾ; ಯಶಸ್ವಿ ಜೈಸ್ವಾಲ್ ಹೊಸ ದಾಖಲೆ

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟದಲ್ಲಿ...

ನಾಲ್ಕನೇ ಟೆಸ್ಟ್ | ರೂಟ್ ಶತಕ, ಇಂಗ್ಲೆಂಡ್ 302/7; ಸ್ಪಿನ್ನರ್ ಅಶ್ವಿನ್ ಮತ್ತೊಂದು ಮೈಲಿಗಲ್ಲು

ರಾಂಚಿಯ ಜೆಎಸ್‌ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ನಲ್ಲಿ ಪ್ರವಾಸಿ ಇಂಗ್ಲೆಂಡ್...

ನಾಲ್ಕನೇ ಟೆಸ್ಟ್ | ಚೊಚ್ಚಲ ಪಂದ್ಯದಲ್ಲೇ ಆಕಾಶ್‌ ದೀಪ್‌ಗೆ 3 ವಿಕೆಟ್: ಇಂಗ್ಲೆಂಡ್‌ನ 5 ವಿಕೆಟ್ ಪತನ

ಭಾರತ - ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ ಪಂದ್ಯ ರಾಂಚಿಯ ಜೆಎಸ್‌ಸಿಎ...