ಮೂರನೇ ಟೆಸ್ಟ್ | ಬೆನ್ ಡಕೆಟ್ ಭರ್ಜರಿ ಶತಕ: ಸುಭದ್ರ ಸ್ಥಿತಿಯಲ್ಲಿ ಇಂಗ್ಲೆಂಡ್

Date:

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಆರಂಭಿಕ ಆಟಗಾರ ಬೆನ್ ಡಕೆಟ್ ಅಮೋಘ ಆಟವಾಡಿ, ಭರ್ಜರಿ ಶತಕ ಸಿಡಿಸಿದ್ದಾರೆ.

- Advertisement -

ಸದ್ಯ 133 ರನ್ ಗಳಿಸಿರುವ ಬೆನ್ ಡಕೆಟ್ ಅವರು, ಆಕರ್ಷಕ 21 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಕೂಡ ಸೇರಿದ್ದವು. 9 ರನ್ ಗಳಿಸಿರುವ ಜೋ ರೋಟ್ ಜೊತೆಗೆ ಮೂರನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಝಾಕ್ ಕ್ರಾಲಿ 15, ಓಲಿ ಪೋಪ್ 39 ರನ್ ಗಳಿಸಿ ಔಟಾದರು. ಟೀಮ್ ಇಂಡಿಯಾ ಪರ ಸಿರಾಜ್‌ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟಾಗಿತ್ತು. ಜಡೇಜ 112ಕ್ಕೆ ಔಟಾದರೆ, ಕುಲದೀಪ್ ಯಾದವ್ 4 ರನ್ ಗಳಿಸುವಷ್ಟರಲ್ಲಿ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಆ ಬಳಿಕ ಧ್ರುವ್ ಜುರೆಲ್ 46, ಅಶ್ವಿನ್ 37, ಬುಮ್ರಾ 26 ರನ್ ಗಳಿಸಿ ಔಟಾದರು. ಸಿರಾಜ್ 3 ರನ್ ಗಳಿಸಿ ಔಟಾಗದೆ ಉಳಿದರು.

ಇಂಗ್ಲೆಂಡ್ ಪರ ಮಾರ್ಕ್ ವುಡ್ 4 ವಿಕೆಟ್ ಪಡೆದರು. ರೆಹಾನ್ ಅಹ್ಮದ್ 2 ವಿಕೆಟ್, ಜೇಮ್ಸ್ ಆಂಡರ್ಸನ್, ಟಾಮ್ ಹಾರ್ಟ್ಲಿ, ರೂಟ್ ತಲಾ ಒಂದು ವಿಕೆಟ್ ಪಡೆದರು.

500 ವಿಕೆಟ್‌ಗಳ ಸರದಾರನಾದ ರವಿಚಂದ್ರನ್ ಅಶ್ವಿನ್

ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮೊದಲ ವಿಕೆಟ್ ಪಡೆಯುವ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳ ಸರದಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಟೆಸ್ಟ್‌ ಕ್ರಿಕೆಟ್‌ನಲ್ಲಿ ‘500 ವಿಕೆಟ್‌ಗಳ ಸರದಾರ’ನಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್

ಎರಡನೇ ದಿನದಾಟದ ಪಂದ್ಯದಲ್ಲಿ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಝಾಕ್ ಕ್ರಾಲಿ ಅವರನ್ನು ತನ್ನ ಸ್ಪಿನ್ ಮಾಂತ್ರಿಕತೆಗೆ ಬೀಳಿಸಿದ ತಮಿಳುನಾಡಿನ ರವಿಚಂದ್ರನ್ ಅಶ್ವಿನ್, ಈ ಸಾಧನೆಯನ್ನು ಮಾಡಿದ್ದಾರೆ.

ಅಶ್ವಿನ್ ಎಸೆದ ಎಸೆತವನ್ನು ಎದುರಿಸಿದ ಕ್ರಾಲಿ, ಸ್ವೀಪ್ ಮಾಡುವ ಮೂಲಕ ಬೌಂಡರಿಗೆ ಯತ್ನಿಸಿದರು. ಆದರೆ ವಿಫಲವಾಗಿ ಅದು ಟಾಪ್ ಎಡ್ಜ್ ಆದ್ದರಿಂದ ರಜತ್ ಪಾಟೀದಾರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ರವಿಚಂದ್ರನ್ ಅಶ್ವಿನ್ 500ನೇ ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...