ಮೂರನೇ ಟೆಸ್ಟ್‌ | ಟೀಮ್ ಇಂಡಿಯಾದ ಬಿಗು ಬೌಲಿಂಗ್‌ಗೆ ತತ್ತರಿಸಿದ ಇಂಗ್ಲೆಂಡ್: 126 ರನ್‌ಗಳ ಬೃಹತ್ ಮುನ್ನಡೆ

Date:

ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಉತ್ತಮ ಸ್ಥಿತಿಯಲ್ಲಿದ್ದ ಇಂಗ್ಲೆಂಡ್, ಮೂರನ ದಿನ 319 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

- Advertisement -

ನಿನ್ನೆ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಅಮೋಘ ಆಟವಾಡಿ, ಭರ್ಜರಿ ಶತಕ ಸಿಡಿಸಿದ್ದರು. ಇಂದು ಟೀಮ್ ಇಂಡಿಯಾದ ಬಿಗು ಬೌಲಿಂಗ್‌ಗೆ ತತ್ತರಿಸಿದ ಪ್ರವಾಸಿಗರು, ನಿನ್ನೆಯ ರನ್‌ಗೆ 112 ರನ್ ಸೇರಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ ಟೀಮ್ ಇಂಡಿಯಾ 126 ರನ್‌ಗಳ ಮುನ್ನಡೆ ಪಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಂಗ್ಲೆಂಡ್ ಪರ ಭರ್ಜರಿ ಶತಕ ಸಿಡಿಸಿ ಮುಂದುವರಿಯುತ್ತಿದ್ದ ಬೆನ್ ಡಕೆಟ್ ಅವರು ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಪೆವಿಲಿಯನ್‌ಗೆ ಹಿಂದಿರುವುದಕ್ಕೂ ಮುನ್ನ 151 ಎಸೆತಗಳನ್ನು ಎದುರಿಸಿದ್ದ ಡಕೆಟ್, 153 ರನ್ ಗಳಿಸಿ ಔಟಾದರು. ಇದರಲ್ಲಿ 23 ಬೌಂಡರಿ ಹಾಗೂ 2 ಸಿಕ್ಸ್ ಒಳಗೊಂಡಿತ್ತು. ಉಳಿದಂತೆ ನಾಯಕ ಬೆನ್ ಸ್ಟೋಕ್ಸ್ 41 ರನ್, ಓಲಿ ಪೋಪ್ 39 ರನ್ ಗಳಿಸಿದರೆ, ಜೋ ರೂಟ್, ಬೆನ್ ಫೋಕ್ಸ್ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲು ಟೀಮ್ ಇಂಡಿಯಾ ಬೌಲರ್‌ಗಳು ಬಿಡಲಿಲ್ಲ. ಜಾನಿ ಬೈರ್‌ ಸ್ಟೋ ಶೂನ್ಯ ಸುತ್ತಿದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶಿಸಿದ ಮೊಹಮ್ಮದ್ ಸಿರಾಜ್‌ 84ಕ್ಕೆ 4 ವಿಕೆಟ್, ಕುಲ್‌ದೀಪ್ ಯಾದವ್‌ 77ಕ್ಕೆ 2 ಹಾಗೂ ರವೀಂದ್ರ ಜಡೇಜಾ 51ಕ್ಕೆ 2 ವಿಕೆಟ್‌ ಪಡೆದರು. ಉಳಿದಂತೆ ಅಶ್ವಿನ್ ಹಾಗೂ ಜಸ್‌ಪ್ರೀತ್ ಬುಮ್ರಾ ತಲಾ ಒಂದೊಂದು ವಿಕೆಟ್ ಗಳಿಸಿದರು.

ಎರಡನೇ ಇನ್ನಿಂಗ್ಸ್‌: ಟೀಮ್ ಇಂಡಿಯಾ 44ಕ್ಕೆ 1

126 ರನ್‌ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಟೀಮ್ ಇಂಡಿಯಾ, ಒಂದು ಚಹಾ ವಿರಾಮದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು 44 ರನ್‌ ದಾಖಲಿಸಿದೆ.

ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಅವರು ಇನ್ನಿಂಗ್ಸ್ ಆರಂಭಿಸಿದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಆಸರೆಯಾಗಿದ್ದ ನಾಯಕ ರೋಹಿತ್ ಶರ್ಮಾ, ಜೋ ರೂಟ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು, 28 ಎಸೆತಗಳಲ್ಲಿ 19 ರನ್ ಗಳಿಸಿ ಔಟಾದರು.

ಚಹಾ ವಿರಾಮದ ವೇಳೆಗೆ ಟೀಮ್ ಇಂಡಿಯಾ 44 ರನ್‌ ದಾಖಲಿಸಿದ್ದು, 19 ರನ್ ಗಳಿಸಿರುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಾಗೂ ಶುಭ್‌ಮನ್ ಗಿಲ್ 5 ರನ್ ಗಳಿಸಿ, ಸದ್ಯ ಕ್ರೀಸ್‌ನಲ್ಲಿದ್ದಾರೆ. ಈವರೆಗೆ ಟೀಮ್ ಇಂಡಿಯಾ 170 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...