ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ತಿಲಕ್ ವರ್ಮಾ

Date:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 165 ರನ್ ಬಾರಿಸಿದರೆ, ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 166 ರನ್​ ಗಳಿಸಿ ಗೆಲುವಿನ ನಗೆ ಬೀರಿತು. ಈ ಗೆಲುವಿನೊಂದಿಗೆ ತಿಲಕ್ ವರ್ಮಾ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

- Advertisement -

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡು ಔಟ್​ಗಳ ನಡುವೆ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ತಿಲಕ್ ವರ್ಮಾ ಪಾಲಾಗಿದೆ. ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ತಿಲಕ್ ವರ್ಮಾ 55 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 4 ಬೌಂಡರಿಗಳೊಂದಿಗೆ ಅಜೇಯ 72 ರನ್ ಬಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ 72 ರನ್​​ಗಳೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಎರಡು ಔಟ್​​ಗಳ ನಡುವೆ ಅಜೇಯರಾಗಿ ಉಳಿದು ಅತೀ ಹೆಚ್ಚು ರನ್ ಬಾರಿಸಿದ ವಿಶ್ವ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ಅಪರೂಪದ ವಿಶ್ವದಾಖಲೆ​ ನ್ಯೂಜಿಲೆಂಡ್​ನ ಮಾರ್ಕ್​ ಚಾಪ್ಮನ್ ಹೆಸರಿನಲ್ಲಿತ್ತು.

ಈ ಸುದ್ದಿ ಓದಿದ್ದೀರಾ? ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿ | ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಟೀಂ ಇಂಡಿಯಾ

2023 ರಲ್ಲಿ ಮಾರ್ಕ್​ ಚಾಪ್ಮನ್ ಎರಡು ಔಟ್​ಗಳ ನಡುವೆ 271 (65, 16, 71, 104, 15) ರನ್ ಕಲೆಹಾಕಿದ್ದರು. ಅಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಮ್ಮೆ ಔಟಾದ ಬಳಿಕ ಮತ್ತೊಮ್ಮೆ ಔಟಾಗುವುದರೊಂದಿಗೆ ಅತೀ ಹೆಚ್ಚು ರನ್ ಪೇರಿಸಿದ ದಾಖಲೆಯನ್ನು ಮಾರ್ಕ್​ ಚಾಪ್ಮನ್ ಬರೆದಿದ್ದರು.

ಇದೀಗ ಈ ಅಜೇಯ ರನ್​ ಸರದಾರನ ದಾಖಲೆಯನ್ನು ತಿಲಕ್ ವರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಎರಡು ಅಜೇಯ ಶತಕಗಳನ್ನು (120, 107) ಬಾರಿಸಿದ್ದ ತಿಲಕ್ ವರ್ಮಾ, ಇಂಗ್ಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿ ಅಜೇಯ 19 ಮತ್ತು ಎರಡನೇ ಮ್ಯಾಚ್​ನಲ್ಲಿ ಅಜೇಯ 72 ರನ್ ಕಲೆಹಾಕಿದ್ದಾರೆ. ಕಳೆದ 4 ಇನಿಂಗ್ಸ್​ಗಳಲ್ಲಿ ತಿಲಕ್ ಔಟ್ ಆಗಿಲ್ಲ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...