ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

Date:

ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. 

ಆದರೆ ಈ ಬಗ್ಗೆ ಕುಸ್ತಿಪಟುಗಳು ಪ್ರತಿಭಟನೆಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಕುಸ್ತಿಪಟು ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ನಿರಾಕರಿಸಿದ್ದು, ಧರಣಿಯ ಜೊತೆಗೆ ಭಾರತೀಯ ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ಇದು ನ್ಯಾಯಕ್ಕಾಗಿ ನಾವು ನಡೆಸುತ್ತಿರುವ ಹೋರಾಟ. ನಾವು ಹಿಂದೆ ಸರಿಯುವುದಿಲ್ಲ. ಮುಂದಿನ ಕಾರ್ಯತಂತ್ರದ ಬಗ್ಗೆ ಯೋಜನೆ ರೂಪಿಸುತ್ತೇವೆ” ಎಂದು ತಿಳಿಸಿದ್ದಾರೆ.

ಸಾಕ್ಷಿ ಮಲಿಕ್ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂಬ ವರದಿಗಳಿವೆ. ಆದರೆ, ಇದನ್ನು ಸಾಕ್ಷಿ ಮಲಿಕ್ ನಿರಾಕರಿಸಿದ್ದಾರೆ. ನ್ಯಾಯಕ್ಕಾಗಿ ನಡೆಯುವ ಹೋರಾಟದಲ್ಲಿ ನಾವೇನೂ ಹಿಂದೆ ಸರಿದಿಲ್ಲ, ಸರಿಯುವುದಿಲ್ಲ ಎಂದರು. ನಮಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ಸಾಕ್ಷಿ ಮಲಿಕ್ ಅವರ ಪತಿ ಸತ್ಯವ್ರತ್ ಕಡಿಯಾನ್ ಕೂಡ ಚಳವಳಿಯಿಂದ ಹಿಂದೆ ಸರಿಯುವ ಸುದ್ದಿಯನ್ನು ನಿರಾಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತ್ರಿವಳಿ ರೈಲು ದುರಂತ| ಘಟನೆ ಸಿಬಿಐ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ರೈಲ್ವೆ ಸಚಿವ

ಸಾಕ್ಷಿ ಮಲಿಕ್‌ ಹಾಗೂ ಭಜರಂಗ್ ಪುನಿಯಾ ಟ್ವೀಟ್‌ ಮಾಡಿದ್ದು, ಪ್ರತಿಭಟನೆ ಕೈಬಿಟ್ಟಿದ್ದರೂ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಪ್ರತಿಭಟನೆಗೆ ನೈತಿಕ ಬೆಂಬಲ ಇದ್ದೇ ಇರುತ್ತದೆ, ಎಂದು ತಿಳಿಸಿದ್ದಾರೆ. ಇವರಿಬ್ಬರೂ ಭಾರತೀಯ ರೈಲ್ವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ನೇತೃತ್ವದಲ್ಲಿ ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪಿ ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

7 ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಬ್ರಿಜ್ ಭೂಷಣ್ ವಿರುದ್ಧ ದೂರು ದಾಖಲಿಸಿದ್ದರು. ಈ ದೂರುಗಳ ಆಧಾರದ ಮೇಲೆ, ಏಪ್ರಿಲ್ 28ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಪೋಕ್ಸೊ ಕಾಯ್ದೆ ಒಳಗೊಂಡು ಎರಡು ಲೈಂಗಿಕ ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಶನಿವಾರ(ಜೂ.4) ರಾತ್ರಿ  ಸಾಕ್ಷಿ ಮಲಿಕ್‌ ಒಳಗೊಂಡ ಪ್ರಮುಖ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಪ್ರಾಪ್ತ ವಯಸ್ಕ ಸೇರಿದಂತೆ 7 ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆಗೆ ಮನವಿ ಮಾಡಿದರು. ಆದರೆ ಗೃಹ ಸಚಿವರಿಂದ ಸಮರ್ಪಕವಾದ ಪ್ರತಿಕ್ರಿಯೆ ಸಿಗದ ಕಾರಣ ಸಭೆಯಿಂದ ಹೊರ ಬಂದೆವು ಎಂದು ಕುಸ್ತಿಪಟುಗಳು ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ಮತ್ತೆ ಚುನಾವಣಾ ಬಾಂಡ್: ‘ಬಿಜೆಪಿಗೆ ಚಿನ್ನದ ಫಸಲು’ ಎಂದ ಪಿ ಚಿದಂಬರಂ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ವಿತರಣೆ...

ಸಾರ್ವಜನಿಕ ಕಾರ್ಯಕ್ರಮದಲ್ಲಿ ಶಾಸಕಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ ಸತೀಶ್ ಗೌತಮ್

ಉತ್ತರ ಪ್ರದೇಶದ ಬಿಜೆಪಿ ಸಂಸದ ಸತೀಶ್ ಗೌತಮ್ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆಯಲ್ಲೇ...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...