ವಿಮಾನ ಅಪಘಾತದ ಮೃತರಿಗೆ ದಕ್ಷಿಣ ಆಫ್ರಿಕಾ – ಆಸ್ಟ್ರೇಲಿಯಾ ಆಟಗಾರರಿಂದ ಗೌರವ ಸಲ್ಲಿಕೆ

Date:

ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯೂಟಿಸಿ) ಫೈನಲ್‌ ಪಂದ್ಯ ಆಡುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಆಟಗಾರರು ಮೌನಾಚರಣೆ ಹಾಗೂ ಕಪ್ಪು ಪಟ್ಟಿ ಧರಿಸುವ ಮೂಲಕ ಗೌರವ ಸಲ್ಲಿಸಿದರು.

- Advertisement -

ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಡಬ್ಲ್ಯೂಟಿಸಿ ಫೈನಲ್‌ನ ಮೂರನೇ ದಿನದಾಟಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಆಟಗಾರರು ಒಂದು ನಿಮಿಷ ಮೌನ ಆಚರಿಸಿದರು. ಅಲ್ಲದೆ ತೋಳಿಗೆ ಕಪ್ಪು ಪಟ್ಟಿ ಮೈದಾನಕ್ಕಿಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗುರುವಾರ ಮಧ್ಯಾಹ್ನ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು.

ಈ ದುರಂತದಲ್ಲಿ ವಿಮಾನದಲ್ಲಿದ್ದ ವಿಮಾನದಲ್ಲಿದ್ದ 241 ಜನರು ಸಾವನ್ನಪ್ಪಿ, ಒಬ್ಬರು ಮಾತ್ರ ಬದುಕುಳಿದರು. ವಿಮಾನವು ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿದ ಕಾರಣ ಸಾವಿನ ಸಂಖ್ಯೆ 265 ಕ್ಕೆ ಏರಿದೆ.

ಇದನ್ನು ಓದಿದ್ದೀರಾ? ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ವಿಮಾನಯಾನ ಸಂಸ್ಥೆಯ ಪ್ರಕಾರ, 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸರು ಮತ್ತು ಒಬ್ಬ ಕೆನಡಾದವರು ಹಾಗೂ 12 ವಿಮಾನಯಾನ ಸಿಬ್ಬಂದಿ ವಿಮಾನದಲ್ಲಿದ್ದರು.

144/8 ರನ್‌ನೊಂದಿಗೆ ಮೂರನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡ ಪಾನೀಯ ವಿರಾಮದ ವೇಳೆಗೆ 65 ಓವರ್‌ಗಳಲ್ಲಿ 207 ರನ್‌ ಗಳಿಸಿ ಆಲೌಟ್‌ ಆಗುವುದರೊಂದಿಗೆ 281 ರನ್‌ ಮುನ್ನಡೆ ಗಳಿಸಿದೆ. ಕೊನೆಯವರೆಗೂ ಉತ್ತಮ ಆಟವಾಡಿದ ಮಿಷಲ್‌ ಸ್ಟಾರ್ಕ್‌ 5 ಬೌಂಡರಿಗಳೊಂದಿಗೆ ಅಜೇಯ 58 ರನ್‌ ಗಳಿಸಿದರು.

2023 ರಲ್ಲಿ ಭಾರತವನ್ನು ಫೈನಲ್‌ನಲ್ಲಿ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಆಗಿದ್ದ ಆಸ್ಟ್ರೇಲಿಯಾ ತನ್ನ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಉಳಿಸಿಕೊಳ್ಳಬೇಕಾದರೆ 281 ರನ್‌ಗಳೊಳಗೆ ಹರಿಣಗಳ ತಂಡವನ್ನು ಕಟ್ಟಿಹಾಕಬೇಕು. ದಕ್ಷಿಣ ಆಫ್ರಿಕಾ ಮೊದಲ ಐಸಿಸಿ ಗೆಲ್ಲಬೇಕಾದರೆ ಆಸೀಸ್‌ ನೀಡಿರುವ 281 ರನ್‌ ಗುರಿಯನ್ನು ದಾಟಬೇಕಿದೆ. ಪಿಚ್‌ ಬೌಲರ್‌ಗಳಿಗೆ ಸೂಕ್ತವಾಗಿರುವುದರಿಂದ ಪಂದ್ಯ ಬೇಗನೆ ಮುಗಿಯುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...

ನೂರಾರು ವಿವಾದ, ಅದಕ್ಕೂ ಮೀರಿದ ಮನುಷ್ಯತ್ವ: ಮೆಸ್ಸಿಯ 21 ವರ್ಷದ ಪಯಣದತ್ತ ಒಂದು ಹಿನ್ನೋಟ

ಲಿಯೋನೆಲ್ ಮೆಸ್ಸಿ ಎಂಬ ದಂತಕಥೆಯನ್ನು ನಾವು ಅತ್ಯಂತ ಸಮತೋಲಿತ ದೃಷ್ಟಿಕೋನದಿಂದ ನೋಡಬೇಕಾಗಿದೆ....