ಟಿ20 ವಿಶ್ವಕಪ್‌ ಆತಿಥ್ಯಕ್ಕೂ ಮುನ್ನ ಐತಿಹಾಸಿಕ ಸಾಧನೆಗೈದ ಅಮೆರಿಕ: ಬಾಂಗ್ಲಾ ಸೋಲಿಸಿ ಸರಣಿ ಕೈವಶ

Date:

ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ ಕ್ರೀಡಾಕೂಟ ಆರಂಭವಾಗಲಿದೆ. ಈ ಟೂರ್ನಿಗೂ ಮುನ್ನ ಬಾಂಗ್ಲಾದೇಶದ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಐತಿಹಾಸಿಕ ಗೆಲುವು ಪಡೆಯುವ ಮೂಲಕ ಅಮೆರಿಕ ತಂಡ ಸಾಧನೆಗೈದಿದೆ.

ಹೂಸ್ಟನ್‌ನ ಪ್ರೈರೀ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಎರಡನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 6 ರನ್‌ಗಳ ರೋಚಕ ಗೆಲುವಿನೊಂದಿಗೆ ತಮ್ಮ ಚೊಚ್ಚಲ ಟಿ20 ಸರಣಿಯನ್ನು ಯುಎಸ್‌ಎ ಗೆದ್ದುಕೊಂಡಿದ್ದು, ವಿಜಯದ ಸಂಭ್ರಮವು ಮುಗಿಲು ಮುಟ್ಟಿತು.

ಎರಡನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಅಮೆರಿಕ, ನಾಯಕ ಮೊನಾಂಕ್ ಪಟೇಲ್ ಮತ್ತು ಸ್ಟೀವನ್ ಟೇಲರ್ ಜೋಡಿಯು 39 ಎಸೆತಗಳಲ್ಲಿ 44 ರನ್ ಜೊತೆಯಾಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 144 ರನ್ ದಾಖಲಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಗುರಿಯನ್ನು ಬೆನ್ನತ್ತಿದ ನಜ್ಮುಲ್ ಹಸನ್ ಶಾಂಟೋ ನೇತೃತ್ವದ ಬಾಂಗ್ಲಾದೇಶ ತಂಡ, 19.3 ಓವರ್‌ಗಳಲ್ಲಿ 138 ರನ್‌ಗಳಿಗೆ ಆಲೌಟ್ ಆಯಿತು. ಆ ಮೂಲಕ ಕ್ರಿಕೆಟ್ ಶಿಶು ಅಮೆರಿಕ ತಂಡವು 6 ರನ್‌ಗಳ ರೋಚಕ ಜಯ ದಾಖಲಿಸಿಕೊಂಡಿತು. ಅಲ್ಲದೇ, ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯನ್ನು ಕೂಡ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಯುಎಸ್ಎ ಸತತ ಎರಡನೇ ಪಂದ್ಯದಲ್ಲಿ ಪೂರ್ಣ ಸಾಮರ್ಥ್ಯದ ಬಾಂಗ್ಲಾದೇಶ ತಂಡಕ್ಕೆ ಆಘಾತ ನೀಡಿ, ಐತಿಹಾಸಿಕ ಸರಣಿ ಗೆಲುವು ಸಾಧಿಸಿತು. ಆ ಮೂಲಕ ಬಾಂಗ್ಲಾದೇಶ ತಂಡವು ಟಿ20 ವಿಶ್ವಕಪ್‌ಗೂ ಮುನ್ನ, ಯುಎಸ್‌ಎ ಕಡೆಯಿಂದ ದೊಡ್ಡ ಎಚ್ಚರಿಕೆಯ ಸಂದೇಶ ಸ್ವೀಕರಿಸಿದೆ.

ಕೆಕೆಆರ್ ತಂಡದ ಮಾಜಿ ವೇಗದ ಬೌಲರ್ ಆಗಿರುವ ಭಾರತೀಯ ಮೂಲದ ಅಲಿ ಖಾನ್ ಅವರು, ಶಕೀಬ್ ಅಲ್ ಹಸನ್ ಸೇರಿದಂತೆ 3 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಂದ್ಯದ ಸ್ಟಾರ್ ಆಗಿ, ಗುರುತಿಸಿಕೊಂಡರು. ಟೆಸ್ಟ್ ಕ್ರಿಕೆಟ್ ಆಡುವ ರಾಷ್ಟ್ರದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಸರಣಿ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಸರಣಿ ಗೆಲುವು ಪಡೆಯುತ್ತಿದ್ದಂತೆಯೇ ಅರ್ಧಕ್ಕರ್ಧ ಭಾರತೀಯ ಮೂಲದವರೇ ತುಂಬಿಕೊಂಡಿರುವ ಅಮೆರಿಕ ಆಟಗಾರರು, ಮೈದಾನದ ಸುತ್ತಲೂ ಓಡುತ್ತಾ ಸಂಭ್ರಮಿಸಿದರು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಅತ್ಯಾಚಾರ ಆರೋಪ ಹೊತ್ತಿದ್ದ ನೇಪಾಳ ಕ್ರಿಕೆಟಿಗ ಸಂದೀಪ್‌ಗೆ ವೀಸಾ ನಿರಾಕರಿಸಿದ ಅಮೇರಿಕ 

ಜೂನ್ ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಯುಎಸ್ಎ ತಂಡಕ್ಕೆ ಈ ಗೆಲುವು ಒಂದು ದೊಡ್ಡ ಸ್ಫೂರ್ತಿಯಾಗಿದೆ. ಮಂಗಳವಾರ, ಮೇ 21ರಂದು ನಡೆದ ಮೊದಲ ಟಿ20 ಪಂದ್ಯದಲ್ಲಿ ಸುಲಭವಾಗಿ 154 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನಂತರ, ಯುಎಸ್ಎ ತಂಡವು ಎರಡನೇ ಟಿ20 ಪಂದ್ಯವನ್ನು ಬಹಳ ಆತ್ಮವಿಶ್ವಾಸದಿಂದ ಆಡಿ ಬಾಂಗ್ಲಾವನ್ನು ಮಣಿಸಿತು.

ಜೂನ್ 2ರಿಂದ ಟಿ20 ವಿಶ್ವಕಪ್ ಆರಂಭ

ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಜಗತ್ತಿನ ಕ್ರಿಕೆಟ್ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಈ ಬಾರಿ 20 ತಂಡಗಳು ಭಾಗವಹಿಸುತ್ತಿದ್ದು, ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಈಗಾಗಲೇ ಪ್ರಕಟಿಸಿದೆ.

ಟಿ20 ವಿಶ್ವಕಪ್‌ನ ಉದ್ಘಾಟನಾ ಪಂದ್ಯವು ಜೂನ್ 1(ಭಾರತೀಯ ಕಾಲಮಾನ ಜೂನ್ 2)ರಂದು ನಡೆಯಲಿದ್ದು, ಸಹ-ಆತಿಥೇಯ ಅಮೆರಿಕ ತಂಡವು ಕೆನಡಾ ತಂಡವನ್ನು ಎದುರಿಸುವುದರೊಂದಿಗೆ ಚಾಲನೆ ಸಿಗಲಿದೆ.

2007ರ ಟಿ20 ವಿಶ್ವಕಪ್ ಚಾಂಪಿಯನ್ ಟೀಮ್ ಇಂಡಿಯಾವು, ಪಾಕಿಸ್ತಾನ, ಯುಎಸ್ಎ, ಕೆನಡಾ ಮತ್ತು ಐರ್ಲೆಂಡ್ ತಂಡಗಳ ಜೊತೆಗೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಜೂ.9ರಂದು ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯವು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಗ್ರೂಪ್ ‘ಬಿ’ ಗುಂಪಿನಲ್ಲಿ 2022ರ ಚಾಂಪಿಯನ್ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಜೊತೆಗೆ ನಮೀಬಿಯಾ, ಸ್ಕಾಟ್‌ಲ್ಯಾಂಡ್ ಮತ್ತು ಓಮನ್‌ ತಂಡಗಳನ್ನು ಇರಿಸಲಾಗಿದೆ.

ವೆಸ್ಟ್ ಇಂಡೀಸ್ ತಂಡವನ್ನು ನ್ಯೂಜಿಲೆಂಡ್, ಅಫ್ಘಾನಿಸ್ತಾನ, ಉಗಾಂಡಾ ಮತ್ತು ಪಪುವಾ ನ್ಯೂ ಗಿನಿಯಾ ತಂಡಗಳನ್ನು ‘ಸಿ’ ಗುಂಪಿನಲ್ಲಿ ಇರಿಸಲಾಗಿದೆ.

‘ಡಿ’ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್ ಮತ್ತು ನೇಪಾಳ ತಂಡಗಳು ಸೆಣಸಾಡಲಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ...

ಟಿ20 ವಿಶ್ವಕಪ್‌ | ಭಾರತಕ್ಕೆ ಗೆಲ್ಲಲು 111 ರನ್‌ಗಳ ಗುರಿ ನೀಡಿದ ಆತಿಥೇಯ ಅಮೆರಿಕ: ಮಿಂಚಿದ ಅರ್ಷ್‌ದೀಪ್ ಸಿಂಗ್

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಐಸಿಸಿ...

ಟಿ20 ವಿಶ್ವಕಪ್ | ಟೀಮ್ ಇಂಡಿಯಾ-ಅಮೆರಿಕ ಮೊದಲ ಮುಖಾಮುಖಿ: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ರೋಹಿತ್ ಶರ್ಮಾ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಐಸಿಸಿ...

2026ರ ಫಿಫಾ ವಿಶ್ವಕಪ್​ ಅರ್ಹತಾ ಟೂರ್ನಿ | ಕತಾರ್​ ಮೋಸದಾಟಕ್ಕೆ ಭಾರತ ಫುಟ್ಬಾಲ್​ ತಂಡ ‘ಔಟ್’; ವ್ಯಾಪಕ ಆಕ್ರೋಶ

ಕ್ರಿಕೆಟ್​​ನಂತೆ ಫುಟ್ಬಾಲ್​ನಲ್ಲಿ ಮಹತ್ತರ ಬದಲಾವಣೆ ತರಬೇಕಿದೆ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ...