ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಪ್ರಶಸ್ತಿ

Date:

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ.

- Advertisement -

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವೈಭವ್ ಸೂರ್ಯವಂಶಿ ತಮ್ಮ ವೃತ್ತಿಜೀವನದ ಆರಂಭದ ಹಂತದಲ್ಲೇ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಕಿರಿಯನೆಂಬ ದಾಖಲೆಯಿಂದ ಹಿಡಿದು, ಇಂಗ್ಲೆಂಡ್‌, ಆಸ್ಟ್ರೇಲಿಯಾದಲ್ಲೂ ವೈಭವ್ ಆರ್ಭಟ ಜೋರಿತ್ತು. ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್​ಗೆ ಇದೀಗ ಭಾರತ ಸರ್ಕಾರದಿಂದಲೂ ಮನ್ನಣೆ ಸಿಕ್ಕಿದೆ.

ಇದನ್ನು ಓದಿದ್ದೀರಾ? ಸೋಲಿನ ಆಘಾತದಿಂದ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದ ರೋಹಿತ್‌ ಶರ್ಮಾ

ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿದಿರುವ ವೈಭವ್ ಮೊದಲ ಪಂದ್ಯದಲ್ಲೇ 190 ರನ್​ಗಳ ಸ್ಫೋಟಕ ಇನಿಂಗ್ಸ್ ಆಡಿದ್ದರು. ಹೀಗಾಗಿ ಇಂದು ನಡೆದ ಎರಡನೇ ಪಂದ್ಯದಲ್ಲೂ ವೈಭವ್ ಆರ್ಭಟ ನೋಡಲು ಎಲ್ಲರೂ ಕಾದಿದ್ದರು. ಆದರೆ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಪ್ರಯುಕ್ತ ಈ ಪಂದ್ಯದಲ್ಲಿ ವೈಭವ್ ಆಡಿರಲಿಲ್ಲ.

ಪ್ರತಿ ವರ್ಷವೂ ದೇಶಾದ್ಯಂತ ಅನೇಕ ಯುವಕರು ಮತ್ತು ಮಕ್ಕಳಿಗೆ ಅವರು ಮಾಡಿದ ಸಾಧನೆಗಳಿಗಾಗಿ, ಕ್ರೀಡೆ, ಸಂಗೀತ ಅಥವಾ ವಿಜ್ಞಾನಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವಿಸಲಾಗುತ್ತದೆ.

ಅದರಂತೆ ಬಿಹಾರದ ಸಮಷ್ಟಿಪುರದ ವೈಭವ್ ಅವರಿಗೆ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...