ಮತ್ತೊಂದು ಇತಿಹಾಸ ನಿರ್ಮಿಸಿದ 13 ವರ್ಷದ ವೈಭವ್ ಸೂರ್ಯವಂಶಿ

Date:

ಐಪಿಎಲ್‌ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಈಗ ಲಿಸ್ಟ್-ಎ ಕ್ರಿಕೆಟ್‌ನಲ್ಲೂ ನೂತನ ಇತಿಹಾಸ ಸೃಷ್ಟಿಸಿದ್ದಾನೆ.

- Advertisement -

ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ಪರ ಆಡುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಲಿಸ್ಟ್-ಎ ಆಟಗಾರನೆನಿಸಿಕೊಂಡಿದ್ದಾರೆ. ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್​ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ಲಿಸ್ಟ್ ಎ ಕ್ರಿಕೆಟ್​ನಲ್ಲೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೈದರಾಬಾದ್‌ನ ನೆಕ್ಸ್‌ಟ್ ಜೆನ್‌ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುವ ಮೂಲಕ ವೈಭವ್ ಲಿಸ್ಟ್-ಎ ಪಂದ್ಯ ಆಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾನೆ.

ವೈಭವ್ ಸೂರ್ಯವಂಶಿ ತನ್ನ 13 ವರ್ಷ 269 ದಿನದ ವಯಸ್ಸಿನಲ್ಲಿ ಬಿಹಾರದ ಪರ ತಮ್ಮ ಮೊದಲ ಪಂದ್ಯವನ್ನು ಆಡಿದ್ದ. ಈ ಮೂಲಕ 1999/2000 ದೇಶೀಯ ಆವೃತ್ತಿಯಲ್ಲಿ 14 ವರ್ಷ ಮತ್ತು 51 ದಿನದಲ್ಲಿ ತಮ್ಮ ಲಿಸ್ಟ್-3 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಅಲಿ ಅಕ್ಬರ್‌ನನ್ನು ಹಿಂದಿಕ್ಕಿದ್ದಾನೆ.

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ವಿಜಯ್ ಹಜಾರೆ ಟ್ರೋಫಿಯಲ್ಲಿ ವೈಭವ್ ಸೂರ್ಯವಂಶಿ ಅವರ ಚೊಚ್ಚಲ ಪಂದ್ಯದ ಬಗ್ಗೆ ಹೇಳುವುದಾದರೆ, ವೈಭವ್‌ ಆಡಿದ 2 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ಔಟಾದ. ಇದರ ಜೊತೆಗೆ ಬಿಹಾರ ತಂಡ ತನ್ನ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲನ್ನು ಕಾಣಬೇಕಾಯಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿಹಾರ ತಂಡ ಕೇವಲ 196 ರನ್ ಗಳಿಸಲಷ್ಟೇ ಶಕ್ತವಾಯಿತು. ಗೆಲ್ಲಲು 197 ರನ್‌ಗಳ ಗುರಿ ಪಡೆದ ಮಧ್ಯಪ್ರದೇಶ 24.5 ಓವರ್‌ಗಳು ಬಾಕಿ ಇರುವಂತೆಯೇ ಸುಲಭವಾಗಿ ಗೆಲುವು ಗಳಿಸಿತು. ಮಧ್ಯಪ್ರದೇಶ ಪರ ನಾಯಕ ರಜತ್ ಪಾಟಿದಾರ್ 33 ಎಸೆತಗಳಲ್ಲಿ 55 ರನ್ ಗಳಿಸಿದರೆ, ವಿಕೆಟ್ ಕೀಪರ್ ಹರ್ಷ್ ಗಾವ್ಲಿ 83 ರನ್‌ಗಳನ್ನು ಬಾರಿಸಿ ಗೆಲುವಿನ ಇನಿಂಗ್ಸ್ ಆಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...