ಮೈದಾನದಲ್ಲಿ ಲಂಕಾ ಆಟಗಾರರೊಂದಿಗೆ ಕೈಕೈ ಮಿಲಾಯಿಸಿದ ವೈಭವ್ ಸೂರ್ಯವಂಶಿ

Date:

ಭಾರತ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳ ನಡುವೆ ದಂಬುಲ್ಲಾದಲ್ಲಿ ನಡೆದ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯ ಪಂದ್ಯವು ಆಟಗಾರರ ನಡುವಿನ ತಳ್ಳಾಟ ಹಾಗೂ ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಸೂಪರ್ ಓವರ್‌ನಲ್ಲಿ ಪಂದ್ಯ ಮುಕ್ತಾಯಗೊಂಡ ಬೆನ್ನಲ್ಲೇ, ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮಾತಿನ ಚಕಮಕಿ ನಡೆದು, ಕೈಕೈ ಮಿಲಾಯಿಸಿದ್ದಾರೆ.

- Advertisement -

ಪಂದ್ಯ ಮುಗಿದ ತಕ್ಷಣವೇ ಲಂಕಾ ಆಟಗಾರರೊಂದಿಗೆ ವಾಗ್ವಾದಕ್ಕಿಳಿದ ವೈಭವ್, ಎದುರಾಳಿ ಆಟಗಾರನೊಬ್ಬನನ್ನು ತಳ್ಳಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಲಂಕಾ ತಂಡದ ಇತರ ಆಟಗಾರರು ಹಾಗೂ ಮೈದಾನದಲ್ಲಿದ್ದ ಅಂಪೈರ್‌ಗಳು ತಕ್ಷಣವೇ ಮಧ್ಯಪ್ರವೇಶಿಸಿ ಇಬ್ಬರನ್ನೂ ದೂರ ಸರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಟೈ ಆದ ಪಂದ್ಯ – ಸೂಪರ್ ಓವರ್ ರೋಚಕತೆ
ಈ ಅಹಿತಕರ ಘಟನೆಗೂ ಮುನ್ನ ಪಂದ್ಯವು ತೀವ್ರ ರೋಚಕತೆಯಿಂದ ಕೂಡಿತ್ತು. ನಿಗದಿತ 50 ಓವರ್‌ಗಳಲ್ಲಿ ಎರಡೂ ತಂಡಗಳು ತಲಾ 265 ರನ್ ಗಳಿಸಿದ ಕಾರಣ ಪಂದ್ಯ ‘ಟೈ’ ಆಗಿತ್ತು. ಹೀಗಾಗಿ ವಿಜೇತರನ್ನು ನಿರ್ಧರಿಸಲು ‘ಸೂಪರ್ ಓವರ್’ ಮೊರೆಹೋಗಲಾಯಿತು. ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ‘ಎ’ ತಂಡ 1 ಓವರ್‌ನಲ್ಲಿ ವಿಕೆಟ್ ನಷ್ಟವಿಲ್ಲದೆ 16 ರನ್ ಕಲೆಹಾಕಿತು. ಈ ವೇಳೆ ಅಂಪೈರ್ ನೀಡಿದ ‘ನೋ-ಬಾಲ್’ ತೀರ್ಪು ತೀವ್ರ ಗೊಂದಲಕ್ಕೆ ಕಾರಣವಾಯಿತು ಹಾಗೂ ಭಾರತದ ನಾಯಕ ತಿಲಕ್ ವರ್ಮಾ ಅಂಪೈರ್‌ಗಳೊಂದಿಗೆ ಸುದೀರ್ಘ ವಾಗ್ವಾದ ನಡೆಸಿದರು. ಬಳಿಕ 17 ರನ್‌ಗಳ ಗುರಿ ಬೆನ್ನತ್ತಿದ ಭಾರತ, ಕೇವಲ 9 ರನ್ ಗಳಿಸಲಷ್ಟೇ ಶಕ್ತವಾಗಿ 7 ರನ್‌ಗಳಿಂದ ಶರಣಾಯಿತು.

Advertisements

ಇದನ್ನು ಓದಿದ್ದೀರಾ? ಫಿಫಾ ಜಗತ್ತಿನಲ್ಲಿ ಭಾರತದ ಹೆಜ್ಜೆಗುರುತು – ಕನ್ನಡಿಗ ಕೆಂಪಯ್ಯನವರ ಮರೆಯಲಾಗದ ಸಾಧನೆ

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ‘ಎ’ ತಂಡವು 49.2 ಓವರ್‌ಗಳಲ್ಲಿ 265 ರನ್‌ಗಳಿಗೆ ಆಲೌಟ್ ಆಯಿತು. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಾಂಶ್ ಶೆಡ್ಗೆ 72 ರನ್ (66 ಎಸೆತ) ಹಾಗೂ ವಿಪ್ರಾಜ್ ನಿಗಮ್ 51 ರನ್ (49 ಎಸೆತ) ಗಳಿಸಿ ತಂಡಕ್ಕೆ ಆಸರೆಯಾದರು. ಶ್ರೀಲಂಕಾ ಪರ ಬೌಲಿಂಗ್‌ನಲ್ಲಿ ಮೊಹಮ್ಮದ್ ಶಿರಾಜ್ ಮತ್ತು ವಿಜಯಕಾಂತ್ ವಿಯಸ್ಕಾಂತ್ ತಲಾ 3 ವಿಕೆಟ್ ಕಬಳಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಶ್ರೀಲಂಕಾ ‘ಎ’ ತಂಡವು 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಸರಿಯಾಗಿ 265 ರನ್ ಗಳಿಸಿತು. ಲಂಕಾ ಪರ ಸದೀರ ಸಮರವಿಕ್ರಮ ಅತ್ಯಮೂಲ್ಯ 93 ರನ್ (113 ಎಸೆತ) ಸಿಡಿಸಿ ಮಿಂಚಿದರು. ಗಮನಾರ್ಹ ಅಂಶವೆಂದರೆ, ಬ್ಯಾಟಿಂಗ್ ವೇಳೆ ಭಾರತದ ಆಟಗಾರ ವಿಪ್ರಾಜ್ ನಿಗಮ್ ಪಿಚ್‌ನ ಅಪಾಯಕಾರಿ ಜಾಗದಲ್ಲಿ ಎರಡು ಬಾರಿ ಓಡಿದ ಕಾರಣ, ಅಂಪೈರ್‌ಗಳು ನಿಯಮಾನುಸಾರ ಶ್ರೀಲಂಕಾ ತಂಡಕ್ಕೆ 10 ಪೆನಾಲ್ಟಿ ರನ್ ನೀಡಿದ್ದರು. ಇದು ಪಂದ್ಯದ ಗತಿಯನ್ನು ಬದಲಿಸುವಲ್ಲಿ ಹಾಗೂ ಪಂದ್ಯ ಟೈ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿತು. ಈ ಸೋಲಿನೊಂದಿಗೆ ಭಾರತ ‘ಎ’ ತಂಡವು ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಎರಡನೇ ಸೋಲು ಅನುಭವಿಸಿದಂತಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...