ವೈಭವ್ ಅಬ್ಬರ: ಲಖನೌ ಎದುರು ರಾಜಸ್ಥಾನ್‌ಗೆ ಭರ್ಜರಿ ಜಯ, ಪ್ಲೇ-ಆಫ್‌ ಹಾದಿ ಜೀವಂತ

Date:

ಐಪಿಎಲ್ 2026 ಟೂರ್ನಿಯ 64ನೇ ಪಂದ್ಯದಲ್ಲಿ 15 ವರ್ಷದ ಪೋರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಅಬ್ಬರದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

- Advertisement -

ಬೃಹತ್ ಗುರಿ ಬೆನ್ನತ್ತಿದ ವೈಭವ್‌ಗೆ ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ ಹಾಗೂ ಡೊನೊವನ್ ಫೆರೇರಾ ಅತ್ಯುತ್ತಮ ಜೊತೆ ನೀಡಿದರು. ಈ ನಿರ್ಣಾಯಕ ಗೆಲುವಿನೊಂದಿಗೆ ರಾಜಸ್ಥಾನ್ ತಂಡವು 14 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಪ್ಲೇ-ಆಫ್‌ಗೆ ಅಧಿಕೃತವಾಗಿ ಲಗ್ಗೆಯಿಡಲು ತಂಡಕ್ಕೆ ಮುಂಬೈ ವಿರುದ್ಧದ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗೆದ್ದು ಇನ್ನೂ 2 ಅಂಕಗಳನ್ನು ಪಡೆಯುವ ಅಗತ್ಯವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

221 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ರಾಜಸ್ಥಾನ್ ಪರ ವೈಭವ್ ಸೂರ್ಯವಂಶಿ ಭರ್ಜರಿ ಆಟವಾಡಿದರು. ಕೇವಲ 38 ಎಸೆತಗಳನ್ನು ಎದುರಿಸಿದ ಅವರು 10 ಭರ್ಜರಿ ಸಿಕ್ಸರ್ ಹಾಗೂ 7 ಬೌಂಡರಿಗಳ ನೆರವಿನಿಂದ 93 ರನ್ ಸಿಡಿಸಿ ಪಂದ್ಯದ ಗತಿಯನ್ನೇ ಬದಲಿಸಿದರು. ಅವರಿಗೆ ಉತ್ತಮ ಜೊತೆ ನೀಡಿದ ನಾಯಕ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 43 ರನ್ (8 ಬೌಂಡರಿ, 1 ಸಿಕ್ಸರ್) ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. ನಂತರ ಬಂದ ಧ್ರುವ್ ಜುರೆಲ್ ಜವಾಬ್ದಾರಿಯುತ ಆಟ ಪ್ರದರ್ಶಿಸಿ 38 ಎಸೆತಗಳಲ್ಲಿ 53 ರನ್ (3 ಬೌಂಡರಿ, 3 ಸಿಕ್ಸರ್) ಚಚ್ಚುವ ಮೂಲಕ ಕೇವಲ 19.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 225 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದನ್ನು ಓದಿದ್ದೀರಾ? ‘ಓಯ್ ಕರಿಯನೇ.. ಸನ್‌ಸ್ಕ್ರೀನ್ ಹಚ್ಚಿದ್ದೀಯಾ’: ತಿಲಕ್‌ ವರ್ಮಾಗೆ ಅರ್ಷದೀಪ್ ವರ್ಣಭೇದ ನಿಂದನೆ

ಇದಕ್ಕೂ ಮುನ್ನ ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಲಖನೌ ಪರ ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ಅಮೋಘ ಪ್ರದರ್ಶನ ನೀಡಿ ಕೇವಲ 57 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್‌ಗಳೊಂದಿಗೆ 96 ರನ್ ಗಳಿಸಿದರು. ಇವರಲ್ಲದೆ, ಜೋಶ್ ಇಂಗ್ಲಿಸ್ ಕೇವಲ 29 ಎಸೆತಗಳಲ್ಲಿ 60 ರನ್ (7 ಬೌಂಡರಿ, 3 ಸಿಕ್ಸರ್) ಸಿಡಿಸಿ ಮಿಂಚಿದರೆ, ನಾಯಕ ರಿಷಭ್ ಪಂತ್ 23 ಎಸೆತಗಳಲ್ಲಿ 35 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ನೆರವಾದರು. ಆದರೆ ಎಲ್‌ಎಸ್‌ಜಿ ಬೌಲರ್‌ಗಳು ಈ ಗುರಿಯನ್ನು ರಕ್ಷಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾದರು.

ಟೂರ್ನಿಯ ಲೀಗ್ ಹಂತವು ಕೊನೆಯ ಘಟ್ಟಕ್ಕೆ ತಲುಪಿದ್ದು, ಮೊದಲ ಮೂರು ಸ್ಥಾನಗಳು ಈಗಾಗಲೇ ಭದ್ರವಾಗಿವೆ. ನಾಲ್ಕನೇ ಹಾಗೂ ಅಂತಿಮ ಪ್ಲೇ-ಆಫ್‌ ಸ್ಥಾನಕ್ಕಾಗಿ ಈಗ ತೀವ್ರ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ 14 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತನ್ನ ಮುಂದಿನ ಪಂದ್ಯವನ್ನು ಗೆದ್ದರೆ ನೇರವಾಗಿ ಪ್ರವೇಶ ಪಡೆಯಲಿದೆ. ಒಂದು ವೇಳೆ ಮುಗ್ಗರಿಸಿದರೆ, ಪ್ಲೇ-ಆಫ್ ಆಸೆ ಜೀವಂತವಾಗಿರಿಸಿಕೊಂಡಿರುವ ಉಳಿದ ತಂಡಗಳಾದ ಪಂಜಾಬ್, ಕೆಕೆಆರ್ ಲೀಗ್ ಪಂದ್ಯಗಳ ಫಲಿತಾಂಶಗಳು ನಿರ್ಣಾಯಕವಾಗಲಿದ್ದು, 4ನೇ ಸ್ಥಾನದ ಲೆಕ್ಕಾಚಾರ ಮತ್ತಷ್ಟು ರೋಚಕವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಸಮಯಪ್ರಜ್ಞೆ ಮೆರೆದ ಚಾಲಕ

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...