ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಜ್ಜಾದ ವಿಜಯಪುರ

Date:

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ವಿಜಯಪುರ ನಗರ ಸಜ್ಜುಗೊಂಡಿದ್ದು, ಮೇ 17ರಿಂದ 23ರವರೆಗೆ ನಗರದ ಬಿಎಲ್‌ಡಿಇ (BLDE) ಒಳಾಂಗಣ ಕ್ರೀಡಾಂಗಣ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯ ನಡೆಯಲಿದೆ.

- Advertisement -

ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 15ರಿಂದ 17 ವರ್ಷದೊಳಗಿನ ಪ್ರತಿಭಾವಂತ ಕ್ರೀಡಾಪಟುಗಳು ಭಾಗವಹಿಸಲಿದ್ದು, ಯುವ ಆಟಗಾರರಿಗೆ ತಮ್ಮ ಕೌಶಲ್ಯ ಪ್ರದರ್ಶಿಸಲು ಇದು ಮಹತ್ವದ ವೇದಿಕೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪಂದ್ಯಾವಳಿಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ, ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು BLDE ಆವರಣದಲ್ಲಿನ ಬ್ಯಾಡ್ಮಿಂಟನ್ ಕ್ರೀಡಾಂಗಣ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಅಂತಿಮ ಹಂತದ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.

ಈ ವೇಳೆ ಅಗತ್ಯ ಸೌಲಭ್ಯಗಳು, ಕ್ರೀಡಾಪಟುಗಳಿಗೆ ಅನುಕೂಲಕರ ವ್ಯವಸ್ಥೆಗಳು ಹಾಗೂ ಪಂದ್ಯಾವಳಿಯ ಯಶಸ್ವಿ ಆಯೋಜನೆ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ʼರಾಜ್ಯ ಮಟ್ಟದ ಈ ಪಂದ್ಯಾವಳಿಯೂ ವಿಜಯಪುರ ಜಿಲ್ಲೆಯ ಕ್ರೀಡಾ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವುದರ ಜೊತೆಗೆ, ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ಅವಕಾಶ ಕಲ್ಪಿಸಲಿದೆʼ ಎಂಬ ಆಶಾಭಾವ ವ್ಯಕ್ತಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...