ಪಾದಚಾರಿ ರಸ್ತೆಯಲ್ಲಿ ಅರ್ಜುನ, ಖೇಲ್ ರತ್ನ ಪ್ರಶಸ್ತಿ ಇಟ್ಟು ಮರಳಿದ ವಿನೇಶ್ ಪೋಗಟ್

Date:

ಏಷ್ಯಾನ್ ಕ್ರೀಡಾಕೂಟ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಅರ್ಜುನ ಹಾಗೂ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗಳನ್ನು ನವದೆಹಲಿಯ ಕರ್ತವ್ಯ ಪಥ ಮಾರ್ಗದ ಪಾದಚಾರಿ ರಸ್ತೆಯಲ್ಲಿ ಇರಿಸಿ ಮರಳಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿ ಲೈಂಗಿಕ ಹಗರಣದ ಆರೋಪಿ ಬ್ರಿಜ್‌ಭೂಷಣ್‌ ಸಿಂಗ್ ಬೆಂಬಲಿಗ ಸಂಜಯ್‌ ಸಿಂಗ್‌ ನೇಮಕವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಇತ್ತೀಚಿಗಷ್ಟೆ ಪ್ರಧಾನ ಮಂತ್ರಿಗೆ ತಮಗೆ ನೀಡಿರುವ ಪ್ರಶಸ್ತಿಗಳನ್ನು ಮರಳಿಸುವುದಾಗಿ ಪತ್ರ ಬರೆದಿದ್ದರು.

ವಿನೇಶ್ ಫೋಗಟ್ ಅವರು ಪ್ರಧಾನಮಂತ್ರಿ ಕಚೇರಿಯ ರಸ್ತೆಯಲ್ಲಿ ಪ್ರಶಸ್ತಿಗಳನ್ನು ಇರಿಸಲು ಮುಂದಾಗಿದ್ದರು. ಆದರೆ ಪೊಲೀಸರು ಆಕೆಯನ್ನು ತಡೆದ ಕಾರಣ ಕರ್ತವ್ಯ ಪಥ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಪ್ರಶಸ್ತಿ ಇಟ್ಟು ಮರಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಇತ್ತೀಚಿಗಷ್ಟೆ ಒಲಿಂಪಿಕ್‌ ವಿಜೇತ ಕುಸ್ತಿಪಟುಗಳಾದ ಬಜರಂಗ್‌ ಪುನಿಯಾ, ವೀರೇಂದ್ರ ಸಿಂಗ್ ಕೂಡ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಮಂತ್ರಿ ಕಚೇರಿಯ ರಸ್ತೆಯಲ್ಲಿ ಇರಿಸಿದ್ದರು. ಮತ್ತೊಬ್ಬ ಒಲಿಂಪಿಕ್‌ ಪ್ರಶಸ್ತಿ ಮಹಿಳಾ ಕ್ರೀಡಾಪಟು ಸಾಕ್ಷಿ ಸಿಂಗ್ ಕುಸ್ತಿಯನ್ನು ತ್ಯಜಿಸಿದ್ದರು.

“ಈ ದಿನ ಯಾವುದೇ ಆಟಗಾರನಿಗೆ ಬಾರದಿರಲಿ,ದೇಶದ ಮಹಿಳಾ ಕ್ರೀಡಾಪಟುಗಳು ಅತ್ಯಂತ ನಿಕೃಷ್ಟ ಪರಿಸ್ಥಿತಿ ಅನುಭವಿಸುತ್ತಿದ್ದಾರೆ” ಎಂದು ಬಜರಂಗ್ ಪುನಿಯಾ ಪ್ರಧಾನಿಗೆ ಟ್ವಿಟರ್‌ ಮೂಲಕ ಪತ್ರ ಬರೆದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ 17ರ ಹರೆಯದ ಭಾರತೀಯ ಡಿ ಗುಕೇಶ್

ಭಾರತದ 17 ವರ್ಷದ ಗ್ರ್ಯಾಂಡ್‌ ಮಾಸ್ಟರ್ ಡಿ ಗುಕೇಶ್ ಟೊರೊಂಟೊದಲ್ಲಿ ನಡೆದ...

ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌...

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...