ವಿಂಬಲ್ಡನ್‌ ಪಂದ್ಯದ ವೇಳೆ ಕಾಣಿಸಿಕೊಂಡ ವಿರಾಟ್‌ ಕೊಹ್ಲಿ – ಅನುಷ್ಕಾ ಶರ್ಮಾ; ಟೆನಿಸ್ ಆಸಕ್ತಿ ಬಗ್ಗೆ ಭಾರೀ ಚರ್ಚೆ

Date:

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸದ್ಯ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿ ಅವರು ತಮ್ಮ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಇದೇ ವೇಳೆ ವಿರಾಟ್‌ ಹಾಗೂ ಅನುಷ್ಕಾ ಅವರ ಒಂದು ಫೋಟೋ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ವಿಂಬಲ್ಡನ್‌ ಪಂದ್ಯದ ವೇಳೆ ಸೆರೆ ಹಿಡಿಯಲಾಗಿದ್ದು, ವಿರಾಟ್‌ ದಂಪತಿ ವಿಶ್ವದ ಸ್ಟಾರ್ ಆಟಗಾರ ನೋವೊಕಾ ಜೊಕೊವಿಚ್ ಪಂದ್ಯವನ್ನು ನೋಡಿ ಖುಷಿಪಟ್ಟಿದ್ದಾರೆ.

- Advertisement -

ಸಾಮಾಜಿಕ ತಾಣದಲ್ಲಿ ವಿರಾಟ್‌ ಕೊಹ್ಲಿ ಸೂಟ್‌ ಹಾಕಿಕೊಂಡು ವಿಂಬ್ಡಲನ್‌ ನೋಡುತ್ತಾ ಇರುವ ಫೋಟೋ ಸಖತ್ ವೈರಲ್ ಆಗಿದೆ. ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕೆಲವು ವರ್ಷಗಳ ಹಿಂದೆ ವಿಂಬಲ್ಡನ್‌ನಲ್ಲಿ ಒಟ್ಟಿಗೆ ಭಾಗವಹಿಸಿದ್ದ ದಂಪತಿಗಳ ಹಳೆಯ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ತಮ್ಮ 10 ವಿಕೆಟ್ ಸಾಧನೆಯನ್ನು ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ ಆಕಾಶ್‌ ದೀಪ್

ಸಾಮಾಜಿಕ ಬಳಕೆದಾರರು ಈ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ. ಇವರಿಬ್ಬರಿಗೂ ಟೆನಿಸ್‌ನಲ್ಲಿ ಆಸಕ್ತಿ ಇದೆಯಾ ಎಂದು ಬಬ್ಬ ಬಳಕೆದಾರ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಇನ್ನೊಬ್ಬ ಬಳಕೆದಾರ, ಇದು ಪ್ರತಿಷ್ಠಿತ ಟೂರ್ನಿ. ಈ ಟೂರ್ನಿಯನ್ನು ನೋಡಲು ಶ್ರೀಮಂತ ವ್ಯಕ್ತಿಗಳು ಇರುತ್ತಾರೆ. ಹಾಗಾಗಿ ವಿರಾಟ್‌ ಕೊಹ್ಲಿ ಅನುಷ್ಕಾ ಬಂದಿರಬಹುದು ಎಂದು ತಿಳಿಸಿದ್ದಾರೆ. ವಿರಾಟ್‌ ದಂಪತಿ ನಿಜಕ್ಕೂ ವಿಂಬಲ್ಡನ್ ಪಂದ್ಯವನ್ನು ಆನಂದಿಸಿರಬಹುದು. ಆದರೆ ಇವರ ಫೋಟೋ ನೋಡಿದರೆ ಹಾಗೆ ಅನಿಸುತ್ತಿಲ್ಲ ಎಂದು ಇನ್ನೊಬ್ಬ ಬಳಕೆದಾರ ತಿಳಿಸಿದ್ದಾರೆ.

ವಿಶ್ವದ ಮಾಜಿ ನಂಬರ್ ಒನ್ ಆಟಗಾರ ಸರ್ಬಿಯಾದ ನೋವಾಕ್ ಜೋಕೊವಿಚ್ ಅವರು ಪ್ರಿ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದರು. ಇವರು ಆಸ್ಟ್ರೇಲಿಯಾದ ಅಲೆಕ್ಸ್ ಡಿ ಮಿನೌರ್ ಅವರನ್ನು ಮಣಿಸಿ ಮುನ್ನಡೆ ಸಾಧಿಸಿದರು. 24 ಗ್ರ್ಯಾನ್‌ ಸ್ಲ್ಯಾಮ್‌ಗಳನ್ನು ಗೆದ್ದ ದಾಖಲೆಯನ್ನು ಹೊಂದಿರುವ ನೋವಾಕ್‌ ಜೋಕೊವಿಚ್ ಮೊದಲ ಸೆಟ್‌ನಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ನಂತರದ ಮೂರು ಸೆಟ್‌ಗಳಲ್ಲಿ ತಮ್ಮ ಶಿಸ್ತು ಬದ್ಧ ಆಟವನ್ನು ಪ್ರದರ್ಶಿಸಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದರು. 16ನೇ ಸುತ್ತಿನ ಪಂದ್ಯದಲ್ಲಿ ನೋವಾಕ್‌ 1-6, 6-4, 6-4, 6-4 ರಿಂದ ಆಸ್ಟ್ರೇಲಿಯಾ ಆಟಗಾರನನ್ನು 3 ಗಂಟೆ 19 ನಿಮಿಷಗಳ ಆಟದಲ್ಲಿ ಮಣಿಸಿ ಮುನ್ನಡೆ ಸಾಧಿಸಿದರು. ಈ ಮೂಲಕ ಏಳನೆ ಬಾರಿಗೆ ಜೋಕೊ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...