ಮೈದಾನಕ್ಕೆ ನುಗ್ಗಿದ್ದ ವಿರಾಟ್ ಕೊಹ್ಲಿ ಅಭಿಮಾನಿಗೆ ಹಲ್ಲೆ : ಮಾನವ ಹಕ್ಕುಗಳ ಆಯೋಗಕ್ಕೆ ದೂರು

Date:

ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನಕ್ಕೆ ಪ್ರವೇಶಿಸಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದಿದ್ದ ಯುವಕನಿಗೆ ಭದ್ರತಾ ಅಧಿಕಾರಿಗಳು ಮನಸೋ ಇಚ್ಛೆ ಥಳಿಸಿದ್ದನ್ನು ಪ್ರಶ್ನಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ.

- Advertisement -

ಸಾಮಾಜಿಕ ಹೋರಾಟಗಾರ ಮರಿಲಿಂಗಗೌಡಮಾಲಿ ಪಾಟೀಲ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದು, ಸಾವಿರಾರು ಜನರ ಮುಂದೆಯೇ ಅಪ್ರಾಪ್ತ ಯುವಕನಿಗೆ ಹಲ್ಲೆ ನಡೆಸಿರುವ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

“ಮಾನವೀಯತೆ ಮರೆತು ಲಕ್ಷಾಂತರ ಜನರ ಮುಂದೆ ಯುವಕನಿಗೆ ಥಳಿಸಿದ್ದಾರೆ‌‌. ಹಲ್ಲೆ ಮಾಡಲು ಇವರಿಗೆ ಏನು ಹಕ್ಕಿದೆ? ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮಾನವ ಹಕ್ಕುಗಳ ಆಯೋಗಕ್ಕೆ ಮರಿಲಿಂಗಗೌಡಮಾಲಿ ದೂರು ನೀಡಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಹಿನ್ನೆಲೆಯಲ್ಲಿ ಈ ದೂರು ಸಲ್ಲಿಸಿದ್ದಾರೆ.

ಏನಿದು ಘಟನೆ?

ಕಳೆದ ಮಾರ್ಚ್‌ 25ರಂದು ಪಂಜಾಬ್ ಕಿಂಗ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಧ್ಯೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿತ್ತು. ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಭದ್ರತಾ ಅಧಿಕಾರಿಗಳ ಕಣ್ತಪ್ಪಿಸಿ, ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದಿದ್ದ.

ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ನಿಯಮಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದ. ಕೂಡಲೇ ಒಳನುಗ್ಗಿದ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ನಂತರ ಮೈದಾನದಿಂದ ಹೊರಗೆ ಕರೆತಂದು ಸಿಬ್ಬಂದಿ ಥಳಿಸಿದ್ದರು. ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ 4 ವಿಕೆಟ್​ಗಳಿಂದ ರೋಚಕವಾಗಿ ಗೆದ್ದುಕೊಂಡಿತ್ತು.

ವಶಕ್ಕೆ ಪಡೆಯಲಾಗಿದ್ದ ಅಭಿಮಾನಿಯನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದರು. ಮೈದಾನದೊಳಗೆ ನುಗ್ಗಿದವ 17 ವರ್ಷದ ಯುವಕನಾಗಿದ್ದು ಆರ್​​ಸಿಬಿ ಪಂದ್ಯ ನೋಡಲು ರಾಯಚೂರಿನಿಂದ ರೈಲಿನಲ್ಲಿ ಆಗಮಿಸಿದ್ದ ಎಂದು ತಿಳಿಸಿದ್ದಾರೆ. ವಿರಾಟ್ ಕೊಹ್ಲಿ ಅಭಿಮಾನಿಯಾಗಿರುವ ಈತ, ಈ ಪಂದ್ಯ ನೋಡಲು 3 ಸಾವಿರ ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿಸಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿತ್ತು. ಯುವಕ ಅಪ್ರಾಪ್ತನಾಗಿದ್ದ ಹಿನ್ನೆಲೆಯಲ್ಲಿ ಬಾಲ ನ್ಯಾಯ ಮಂಡಳಿಯ ಅಧಿಕಾರಿಗಳ ಕೈಗೆ ಒಪ್ಪಿಸಿದ್ದರು. ಆ ಬಳಿಕ ಯುವಕನಿಗೆ ಬುದ್ಧಿವಾದ ಹೇಳಿ, ಅಧಿಕಾರಿಗಳು ಊರಿಗೆ ಕಳುಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...