ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈದಾನಕ್ಕೆ ಪ್ರವೇಶಿಸಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದಿದ್ದ ಯುವಕನಿಗೆ ಭದ್ರತಾ ಅಧಿಕಾರಿಗಳು ಮನಸೋ ಇಚ್ಛೆ ಥಳಿಸಿದ್ದನ್ನು ಪ್ರಶ್ನಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಮರಿಲಿಂಗಗೌಡಮಾಲಿ ಪಾಟೀಲ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದು, ಸಾವಿರಾರು ಜನರ ಮುಂದೆಯೇ ಅಪ್ರಾಪ್ತ ಯುವಕನಿಗೆ ಹಲ್ಲೆ ನಡೆಸಿರುವ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆ ಹಾಕಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
A fan breached the field and touched Virat Kohli’s feet.
– King Kohli, an icon! ❤️pic.twitter.com/s82xq8sKhW
— Mufaddal Vohra (@mufaddal_vohra) March 25, 2024
“ಮಾನವೀಯತೆ ಮರೆತು ಲಕ್ಷಾಂತರ ಜನರ ಮುಂದೆ ಯುವಕನಿಗೆ ಥಳಿಸಿದ್ದಾರೆ. ಹಲ್ಲೆ ಮಾಡಲು ಇವರಿಗೆ ಏನು ಹಕ್ಕಿದೆ? ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೇ ಹೊರತು ಹಲ್ಲೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮಾನವ ಹಕ್ಕುಗಳ ಆಯೋಗಕ್ಕೆ ಮರಿಲಿಂಗಗೌಡಮಾಲಿ ದೂರು ನೀಡಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾದ ಹಿನ್ನೆಲೆಯಲ್ಲಿ ಈ ದೂರು ಸಲ್ಲಿಸಿದ್ದಾರೆ.
ಏನಿದು ಘಟನೆ?
ಕಳೆದ ಮಾರ್ಚ್ 25ರಂದು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿತ್ತು. ವಿರಾಟ್ ಕೊಹ್ಲಿ ಬ್ಯಾಟಿಂಗ್ಗೆ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಭದ್ರತಾ ಅಧಿಕಾರಿಗಳ ಕಣ್ತಪ್ಪಿಸಿ, ಕ್ರೀಸ್ ಒಳಗಡೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದಿದ್ದ.
A fan hugged Virat Kohli and touched his feet. ❤️ pic.twitter.com/QsNyNS1JKo
— Mufaddal Vohra (@mufaddal_vohra) March 25, 2024
ಕೊಹ್ಲಿ ಬರುವುದನ್ನೇ ಕಾಯುತ್ತಿದ್ದ ಅಭಿಮಾನಿ ಎಲ್ಲಾ ನಿಯಮಗಳನ್ನು ಮುರಿದು ಕ್ರೀಸ್ ಒಳಗಡೆ ನುಗ್ಗಿ ಏಕಾಏಕಿ ಕೊಹ್ಲಿ ಕಾಲಿಗೆ ಬಿದ್ದು ಬಳಿಕ ಅಪ್ಪಿಕೊಳ್ಳಲು ಪ್ರಯತ್ನಿಸಿದ್ದ. ಕೂಡಲೇ ಒಳನುಗ್ಗಿದ ಅಭಿಮಾನಿಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ನಂತರ ಮೈದಾನದಿಂದ ಹೊರಗೆ ಕರೆತಂದು ಸಿಬ್ಬಂದಿ ಥಳಿಸಿದ್ದರು. ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪಂಜಾಬ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ ತಂಡ 4 ವಿಕೆಟ್ಗಳಿಂದ ರೋಚಕವಾಗಿ ಗೆದ್ದುಕೊಂಡಿತ್ತು.
WTH!!!!!
What kind of behavior is this chapri @RCBTweets 🤬You don’t have the right to touch anyone. Then what’s the use of Law?
You can keep him in Jail/ Fine but you’re attacking him in the stadium 🏟️ itself
Remember once VK leaves, even🐷 don’t care about you @RCBTweets pic.twitter.com/vcb7tUngGQ
— Praneeth (@fantasy_d11) March 27, 2024
ವಶಕ್ಕೆ ಪಡೆಯಲಾಗಿದ್ದ ಅಭಿಮಾನಿಯನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದರು. ಮೈದಾನದೊಳಗೆ ನುಗ್ಗಿದವ 17 ವರ್ಷದ ಯುವಕನಾಗಿದ್ದು ಆರ್ಸಿಬಿ ಪಂದ್ಯ ನೋಡಲು ರಾಯಚೂರಿನಿಂದ ರೈಲಿನಲ್ಲಿ ಆಗಮಿಸಿದ್ದ ಎಂದು ತಿಳಿಸಿದ್ದಾರೆ. ವಿರಾಟ್ ಕೊಹ್ಲಿ ಅಭಿಮಾನಿಯಾಗಿರುವ ಈತ, ಈ ಪಂದ್ಯ ನೋಡಲು 3 ಸಾವಿರ ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿಸಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿತ್ತು. ಯುವಕ ಅಪ್ರಾಪ್ತನಾಗಿದ್ದ ಹಿನ್ನೆಲೆಯಲ್ಲಿ ಬಾಲ ನ್ಯಾಯ ಮಂಡಳಿಯ ಅಧಿಕಾರಿಗಳ ಕೈಗೆ ಒಪ್ಪಿಸಿದ್ದರು. ಆ ಬಳಿಕ ಯುವಕನಿಗೆ ಬುದ್ಧಿವಾದ ಹೇಳಿ, ಅಧಿಕಾರಿಗಳು ಊರಿಗೆ ಕಳುಹಿಸಿದ್ದರು.
