ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ಶೇ.50 ರಷ್ಟು ದಂಡ

Date:

ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್‌ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್‌ ವಿರುದ್ಧ ವಾಗ್ವಾದ ನಡೆಸಿದ್ದಕ್ಕಾಗಿ ಸ್ಟಾರ್‌ ಬ್ಯಾಟರ್‌ ವಿರಾಟ್ ಕೊಹ್ಲಿ ಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ.

- Advertisement -

ಕೊಲ್ಕತ್ತದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೆಕೆಆರ್ ಬೌಲರ್‌ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ವಿರಾಟ್‌ ಕೊಹ್ಲಿ ಔಟಾಗಿದ್ದರು. ಬಾಲ್‌ ಸೊಂಟಕ್ಕಿಂತ ಮೇಲೆ ಬಂದ ಕಾರಣ ನೋಬಾಲ್‌ ಕೊಡಬೇಕಿತ್ತು ಎಂದು ಅಂಪೈರ್‌ ಜೊತೆ ಕೊಹ್ಲಿ ಮೈದಾನದಲ್ಲೇ ವಾಗ್ವಾದ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಹಾವ್ಕ್‌ ಐ ಪದ್ಧತಿಯ ಮೂಲಕ ಟಿವಿ ಅಂಪೈರ್ ಮೈಖಲ್‌ ಗಫ್ ಚೆಂಡು ಸೊಂಟದ ಮೇಲಿನಿಂದ ಹೆಚ್ಚು ದಾಟಿರಲಿಲ್ಲ,ಎಸೆತವು ಸಮಾಧಾನಕರವಾದ ಕಾರಣ ಕೊಹ್ಲಿ ಔಟ್‌ ಎಂದು ತೀರ್ಪು ಪ್ರಕಟಿಸಿದರು. ಇದಲ್ಲದೆ ಕೊಹ್ಲಿ ಮೈದಾನದಿಂದ ತೆರಳಿದ ನಂತರವೂ ಅಂಪೈರ್‌ ಜೊತೆ ಮಾತನಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಇದ್ದಾರೆ, ಆದರೆ ಮೋದಿ ಅಲೆ ಇಲ್ಲ

ವಿರಾಟ್‌ ಕೊಹ್ಲಿ ಅವರು ಕೊಲ್ಕತ್ತ ವಿರುದ್ಧದ ಐಪಿಎಲ್‌ ಪಂದ್ಯದ ವೇಳೆ ಐಪಿಎಲ್‌ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣ ಅವರ ಪಂದ್ಯದ ಶುಲ್ಕದ ಶೇ.50 ರಷ್ಟು ಭಾಗವನ್ನು ದಂಡವಾಗಿ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಐಪಿಎಲ್ ನೀತಿ ಸಂಹಿತೆಯ ಸಂವಿಧಾನ 2.8ರಡಿಯ ಹಂತ 1ರ ಅಪರಾಧಕ್ಕೆ ಕೊಹ್ಲಿ ಬದ್ಧರಾಗಿರುತ್ತಾರೆ. ಇವರು ತಾವು ಮಾಡಿದ ತಪ್ಪನ್ನು ಮ್ಯಾಚ್‌ ರೆಫ್ರಿ ಅವರೊಂದಿಗೆ ಒಪ್ಪಿಕೊಂಡಿರುತ್ತಾರೆ.ನೀತಿ ಸಂಹಿತೆ ಉಲ್ಲಂಘನೆಯ ಹಂತ 1ರ ಪ್ರಕಾರ ಮ್ಯಾಚ್‌ ರೆಫ್ರಿ ನಿರ್ಧಾರವು ಅಂತಿಮವಾಗಿರುತ್ತದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಸಂವಿಧಾನ 2.8ರಡಿಯ ಹಂತ 1 ಅಂಪೈರ್‌ ನಿರ್ಧಾರದೊಂದಿಗಿನ ನಡವಳಿಕೆಯನ್ನು ತೋರಿಸುತ್ತದೆ.

ಈ ಪಂದ್ಯದಲ್ಲಿ ಆರ್‌ಸಿಬಿ ಕೆಕೆಆರ್ ವಿರುದ್ಧ 1 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...