ಐಪಿಎಲ್ 2023 | ಕೊಹ್ಲಿ– ಗಂಭೀರ್‌ ನಡುವೆ ವಾಗ್ವಾದ; ಬಿಸಿಸಿಐನಿಂದ ಇಬ್ಬರಿಗೂ ಶೇ. 100 ದಂಡ

Date:

  • ಏಪ್ರಿಲ್ 10ರಂದು ಬೆಂಗಳೂರು ವಿರುದ್ಧ ಲಖನೌ ಗೆದ್ದಾಗ ಪ್ರೇಕ್ಷಕರನ್ನು ಪ್ರಚೋದಿಸಿದ್ದ ಗಂಭೀರ್‌
  • ನಿನ್ನೆಯ ಪಂದ್ಯದಲ್ಲಿ ಗಂಭೀರ್‌ ರೀತಿಯಲ್ಲಿಯೇ ಆರ್‌ಸಿಬಿ ಅಭಿಮಾನಿಗಳನ್ನು ಹುರಿದುಂಬಿಸಿದ್ದ ಕೊಹ್ಲಿ

ಸೋಮವಾರ ಲಖನೌನಲ್ಲಿ ನಡೆದ ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ನಡುವೆ ನಡೆದ ಐಪಿಎಲ್ ಪಂದ್ಯದ ನಂತರ ಮಾತಿನ ಚಕಮಕಿ ನಡೆಸಿದ್ದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್‌ ಅವರಿಗೆ ಬಿಸಿಸಿಐ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಿದೆ. ಇವರೊಂದಿಗೆ ಲಖನೌ ವೇಗಿ ನವೀನ್ ಉಲ್ ಹಕ್ ಅವರಿಗೂ ಪಂದ್ಯದ ಸಂಭಾವನೆಯ ಶೇ 50ರಷ್ಟು ದಂಡ ವಿಧಿಸಲಾಗಿದೆ.

- Advertisement -

ಐಪಿಎಲ್ ನೀತಿ ಸಂಹಿತೆಯ ಕಲಂ 2.21ರ ಅಡಿಯಲ್ಲಿ ಎರಡನೇ ಹಂತದ ಅಪರಾಧವನ್ನು ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಹಾಗೂ ಆರ್‌ಸಿಬಿ ಆಟಗಾರ ವಿರಾಟ್‌ ಕೊಹ್ಲಿ ಇಬ್ಬರು ಒಪ್ಪಿಕೊಂಡಿದ್ದು, ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಪಂದ್ಯ ಶುಲ್ಕದ ಶೇ 100ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆದೇಶದ ಪ್ರಕಾರ ಕೊಹ್ಲಿ ₹1.07 ಕೋಟಿ ದಂಡವನ್ನು ಪಾವತಿಸಬೇಕಿದ್ದರೆ, ಗೌತಮ್ ಗಂಭೀರ್ ಅವರು ₹25 ಲಕ್ಷ ಪಾವತಿಸಬೇಕಿದೆ. ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್‌ ಅವರಿಗೆ ₹1.79 ಕೋಟಿ ದಂಡ ವಿಧಿಸಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ, ಲಖನೌ ವಿರುದ್ಧ 18 ರನ್‌ಗಳ ಅಂತರದಲ್ಲಿ ಜಯಗಳಿಸಿತ್ತು. ಪಂದ್ಯ ಗೆಲುವು ಸಾಧಿಸಿದ ನಂತರ ಹಸ್ತಲಾಘವ ಮಾಡುವ ಸಂದರ್ಭದಲ್ಲಿ  ಕೊಹ್ಲಿ ಹಾಗೂ ಗಂಭೀರ್‌ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭದಲ್ಲಿ ಇಬ್ಬರೂ ಆಟಗಾರರು ಬೈದಾಡಿಕೊಂಡಿದ್ದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ  ಉಭಯ ತಂಡದ ಆಟಗಾರರು ಮಧ್ಯ ಪ್ರವೇಶಿಸಿ  ಇಬ್ಬರನ್ನು ಸಮಾಧಾನಗೊಳಿಸಿದ್ದರು. ಅಲ್ಲದೆ ಇವರಿಬ್ಬರ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಚೆನ್ನೈ vs ಪಂಜಾಬ್;‌ ವಿಶಿಷ್ಠ ದಾಖಲೆ ಬರೆದ ಎಂಎಸ್‌ ಧೋನಿ

ಮೊದಲು ಶುರು ಮಾಡಿದ್ದು ಗಂಭೀರ್!

ಏಪ್ರಿಲ್ 10ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಖನೌ ಮತ್ತು ಬೆಂಗಳೂರು ನಡುವೆ ನಡೆದ ಪಂದ್ಯದಲ್ಲಿ ಲಖನೌ ಒಂದು ವಿಕೆಟ್ ಅಂತರದಲ್ಲಿ ಜಯ ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ಗಂಭೀರ್ ನೆರೆದಿದ್ದ ಆರ್‌ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಲಖನೌದ ಕೃನಾಲ್ ಪಾಂಡ್ಯ ಔಟಾದ ಬಳಿಕ ವಿರಾಟ್ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳತ್ತ ತಿರುಗಿ, ಗೌತಮ್ ಗಂಭೀರ್ ಆರ್‌ಸಿಬಿ ಅಭಿಮಾನಿಗಳಿಗೆ ಹೇಗೆ ಸೂಚನೆ ನೀಡಿದ್ದಾರೋ ಅದೇ ಮಾದರಿಯಲ್ಲಿ ಕೊಹ್ಲಿ, ಬಾಯಿ ಮುಚ್ಕೊಂಡಿರಬೇಡಿ ಎನ್ನುವ ಹಾಗೆ ಅಭಿಮಾನಿಗಳನ್ನು ಪ್ರಚೋದಿಸಿದರು.

ಮ್ಯಾಕ್ಸ್‌ವೆಲ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಬೌಂಡರಿ ಲೈನ್‌ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖಮಾಡಿ, ಆರ್‌ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಡಿ ಎಂಬಂತೆ ಸನ್ನೆ ಮಾಡಿದ್ದರು.

ಇದೇ ವಿಷಯವಾಗಿ ಇಬ್ಬರು ಆಟಗಾರರಿಗೆ ಮಾತಿನ ಚಕಮಕಿ ನಡೆದಿರುವ ಸಾಧ್ಯತೆಯಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಗ್ವಾದ ನಡೆದಾಗ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಅವರನ್ನು ಸಮಾಧಾನಪಡಿಸಲು ಎರಡೂ ತಂಡಗಳ ಆಟಗಾರರು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ನಾಯಕ ಕೆಎಲ್ ರಾಹುಲ್ ಮಧ್ಯಪ್ರವೇಶಿಸಿ ಗಂಭೀರ್ ಅವರನ್ನು ತಡೆದಿದ್ದಾರೆ.

ಬಳಿಕ ಆಕ್ಷರ್ ಪಟೇಲ್ ಕೂಡ ಗಂಭೀರ್‌ನನ್ನು ಸಮಾಧಾನಪಡಿಸಿದ್ದಾರೆ. ಕೊಹ್ಲಿ ಅವರನ್ನು ಆರ್‌ಸಿಬಿ ಆಟಗಾರರು ಸಮಾಧಾನಪಡಿಸಿ ಕರೆದುಕೊಂಡು ಹೋದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...