ವಿಶ್ವಕಪ್‌ನಲ್ಲಿ ಮೊದಲ ವಿಕೆಟ್ ಪಡೆದ ‘ಪಾರ್ಟ್ ಟೈಂ ಬೌಲರ್’ ವಿರಾಟ್ ಕೊಹ್ಲಿ

Date:

ನೆದರ್‌ಲ್ಯಾಂಡ್ಸ್‌ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ಸ್ಕಾಟ್ ಎಡ್ವರ್ಡ್ಸ್​ ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾದ ‘ಪಾರ್ಟ್ ಟೈಂ ಬೌಲರ್’ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಮೊದಲ ವಿಕೆಟ್ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

- Advertisement -

ವಿರಾಟ್ ಕೊಹ್ಲಿ ಎಸೆದ 25ನೇ ಓವರ್​ನ 3ನೇ ಎಸೆತದಲ್ಲಿ ವಿಕೆಟ್​ ಕೀಪರ್​ ಕೆಎಲ್ ರಾಹುಲ್ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ನೆದರ್‌ಲ್ಯಾಂಡ್ಸ್‌ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್​ ಬಲಿಯಾಗುವ ಮೂಲಕ ನೆದರ್‌ಲ್ಯಾಂಡ್ಸ್‌ ನಾಲ್ಕನೇ ವಿಕೆಟ್ ಕಳೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

30 ಎಸೆತಗಳಲ್ಲಿ 17 ರನ್ ಬಾರಿಸಿದ್ದ ಸ್ಕಾಟ್ ಎಡ್ವರ್ಡ್ಸ್​ ವಿರಾಟ್ ಕೊಹ್ಲಿಯವರಿಗೆ ಬಲಿಯಾದರು. ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊಹ್ಲಿಗೆ ಐದನೇ ವಿಕೆಟ್ ಆಗಿತ್ತು. ಈ ಹಿಂದೆ ಅಲೈಸ್ಟರ್ ಕುಕ್, ಕ್ರೇಗ್ ಕೀಸ್ವೆಟರ್, ಬ್ರೆಂಡನ್ ಮೆಕಲಮ್ ಮತ್ತು ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಪಡೆದಿದ್ದರು. ಇಂದು ಸ್ಕಾಟ್ ಎಡ್ವರ್ಡ್ಸ್ ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಕೆಟ್ ಪಡೆದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಬೌಲ್‌ ಮಾಡುವ ವೇಳೆ ಟೀಮ್‌ ಇಂಡಿಯಾ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಪಾದದ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯದಲ್ಲಿ ಅವರು ಒಂದೇ ಒಂದು ಓವರ್‌ ಅನ್ನು ಪೂರ್ಣಗೊಳಿಸದೆ ಮೈದಾನ ತೊರೆದಿದ್ದರು. ಮತ್ತೆ ಅವರು ಮೈದಾನಕ್ಕೆ ಮರಳಿರಲಿಲ್ಲ. ಹಾರ್ದಿಕ್‌ ಪಾಂಡ್ಯ ಅವರ ಓವರ್‌ ಅನ್ನು ವಿರಾಟ್‌ ಕೊಹ್ಲಿ ಮುಗಿಸಿದ್ದರು.

ನಗು ತಡೆದುಕೊಳ್ಳದ ಪತ್ನಿ ಅನುಷ್ಕಾ ಶರ್ಮಾ!

ವಿರಾಟ್ ಕೊಹ್ಲಿ ವಿಕೆಟ್ ಪಡೆಯುತ್ತಿದ್ದಂತೆಯೇ ಪೆವಿಲಿಯನ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರಿಗೆ ನಗು ತಡೆಯಲಾಗಲಿಲ್ಲ. ಬಳಿಕ ಚಪ್ಪಾಳೆ ತಟ್ಟಿ ತನ್ನದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ವಿರಾಟ್ ಕೂಡ ಅವರಿಗೆ ಮೈದಾನದಿಂದಲೇ ಸಾಥ್ ನೀಡುವ ಮೂಲಕ ಸಂಭ್ರಮ ಹಂಚಿಕೊಂಡರು. ಅವರ ವಿಡಿಯೋ ವೈರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...