ಏಕದಿನ ವೃತ್ತಿ ಜೀವನದಲ್ಲಿ ಸತತ 2 ಬಾರಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ಔಟ್; ನಿವೃತ್ತಿ ಮುನ್ಸೂಚನೆಯೇ?

Date:

ಭಾರತ ಕ್ರಿಕೆಟ್‌ನ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಸರಣಿ ನಿರಾಶೆಯ ನೆನಪನ್ನು ತಂದುಕೊಟ್ಟಿದೆ. ಪರ್ತ್‌ನಲ್ಲಿನ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆದ ಬಳಿಕ, ಅಡಿಲೇಡ್ ಓವಲ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಅವರು ಸೊನ್ನೆಗೆ ಪೆವಿಲಿಯನ್‌ಗೆ ಮರಳಿದರು. ಜೇವಿಯರ್ ಬಾರ್ಟ್ಲೆಟ್ ಅವರ ಎಸೆತಕ್ಕೆ ಎಲ್‌ಬಿ ಆಗಿ, ಕೇವಲ ನಾಲ್ಕು ಎಸೆತಗಳನ್ನು ಎದುರಿಸಿ ಔಟ್ ಆದರು. ಇದೇ ಮೊದಲು ಕೊಹ್ಲಿ ತಮ್ಮ ಏಕದಿನ ವೃತ್ತಿ ಜೀವನದಲ್ಲಿ ಸತತ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ.

- Advertisement -

ಆಸ್ಟ್ರೇಲಿಯಾದ ತಮ್ಮ ನೆಚ್ಚಿನ ಗ್ರೌಂಡ್ ನಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಕೊಹ್ಲಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಮಿಷೆಲ್ ಮಾರ್ಶ್ ನೇತೃತ್ವದ ಆಸ್ಟ್ರೇಲಿಯಾ ತಂಡ ಎದುರು ತಡವರಿಸುತ್ತಿರುವ ಟೀಂ ಇಂಡಿಯಾ ಬ್ಯಾಟರ್ ಗಳು ನಿರಾಸ ಪ್ರದರ್ಶನ ತೋರುತ್ತಿದ್ದಾರೆ. ಇನ್ನಿಂಗ್ಸ್ 20 ಎಸೆತಗಳಲ್ಲಿ ರೋಹಿತ್ ಶರ್​ಮಾ ಕೇವಲ 6 ರನ್ ಗಳಿಸಿದ್ದರು, ಇದು 2019ರ ಬಳಿಕ ಏಕದಿನ ಮಾದರಿಯಲ್ಲಿ ರೋಹಿತ್ ಗಳಿಸಿದ ಅತ್ಯಂತ ಕಳಪೆ ಆರಂಭ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದುವರೆಗೂ 314 ಏಕದಿನ ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಡಕ್ ಔಟ್ ಆಗುವ ಆಗಿದ್ದಾರೆ. ಈ ಹಿಂದೆ 2021ರಲ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಅಹಮ್ಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಸತತವಾಗಿ ಶೂನ್ಯಕ್ಕೆ ಔಟ್ ಆಗಿದ್ದರು.

ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ದಿನ ಮಾದರಿಯಲ್ಲಿ ಎರಡನೇ ಬಾರಿಗೆ ಕೊಹ್ಲಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಆಸೀಸ್ ವಿರುದ್ಧ ಕೊಹ್ಲಿ ಇದು 4ನೇ ಬಾರಿಗೆ ಶೂನ್ಯಕ್ಕೆ ಔಟ್ ಆಗಿದ್ದಾರೆ. ಇದುವರೆಗೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ 40ನೇ ಬಾರಿಗೆ ಶೂನ್ಯಕ್ಕೆ ಔಟ್ ಆಗಿದ್ದು, ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಪಾಕ್ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರು ಸಾವು

ಅಡಿಲೇಡ್ ಕೊಹ್ಲಿಗೆ ವಿಶೇಷ ನೆನಪುಗಳ ಮೈದಾನ. ಈ ಮೈದಾನದಲ್ಲಿ ಅವರು 976 ರನ್‌ಗಳ ದಾಖಲೆಯನ್ನಿಟ್ಟುಕೊಂಡಿದ್ದಾರೆ. ಆದರೂ ಈ ಬಾರಿ ಅಲ್ಲಿ ಕೇವಲ ಒಂದು ಚೆಂಡಿನ ಆಟದಿಂದಲೇ ಪೆವಿಲಿಯನ್‌ಗೆ ಹಿಂತಿರುಗಬೇಕಾಯಿತು. ಪ್ರೇಕ್ಷಕರು ನಿಂತು ಅಭಿನಂದನೆ ಸಲ್ಲಿಸಿದಾಗ, ಕೊಹ್ಲಿ ಕೈ ಬೀಸಿ ವಿದಾಯ ಸೂಚಿಸಿದಂತ ಹಾವಭಾವ ತೋರಿಸಿದರು. ಇದೇ ಅಡಿಲೇಡ್‌ನಲ್ಲಿ ಅವರ ಕೊನೆಯ ಪಂದ್ಯವೇ ಎಂಬ ಪ್ರಶ್ನೆ ಇದೀಗ ಅಭಿಮಾನಿಗಳ ನಡುವೆ ಕೇಳಿಬರುತ್ತಿದೆ.

ಪರ್ತ್‌ನಲ್ಲಿ ಮಿಚೆಲ್ ಸ್ಟಾರ್ಕ್ ಎಸೆತಕ್ಕೆ ಔಟಾದ ಬಳಿಕವೂ, ಕೊಹ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾ ಹೊರಟಿದ್ದರು. ಈಗ ಅಡಿಲೇಡ್‌ನಲ್ಲಿ ನಡೆದ ಘಟನೆಗಳ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ “ಕೊಹ್ಲಿ ನಿವೃತ್ತಿಗೆ ಸಿದ್ಧರಾಗುತ್ತಿದ್ದಾರಾ?” ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಟ್ವಿಟ್ಟರ್ ಮತ್ತು ಇನ್‌ಸ್ಟಾಗ್ರಾಂಗಳಲ್ಲಿ ಅಭಿಮಾನಿಗಳು ಭಾವುಕ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಐಪಿಎಲ್ 2025 ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಕೊಹ್ಲಿ ಮತ್ತೆ ಫಾರ್ಮ್‌ ಕಂಡುಕೊಳ್ಳುತ್ತಿಲ್ಲವೆಂಬುದು ಸ್ಪಷ್ಟವಾಗಿದೆ. ತಮ್ಮ ಫಿಟ್‌ನೆಸ್ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡಿದ್ದರೂ, ಮೈದಾನದಲ್ಲಿ ಆ ಫಾರ್ಮ್ ಕಾಣಿಸಲಿಲ್ಲ. “ನಾನು ಎಂದಿನಿಗಿಂತ ಹೆಚ್ಚು ಫಿಟ್ ಆಗಿದ್ದೇನೆ,” ಎಂದು ಸರಣಿಗೆ ಮುನ್ನ ಹೇಳಿದ್ದ ಕೊಹ್ಲಿ, ಈಗ ತನ್ನ ಆಟದ ಬಗ್ಗೆ ತೀವ್ರ ವಿಮರ್ಶೆ ಎದುರಿಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಏಕದಿನಗಳಲ್ಲಿ ಈಗಾಗಲೇ 314 ಪಂದ್ಯಗಳನ್ನು ಆಡಿರುವ ಕೊಹ್ಲಿ, 40 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಈ ಪಟ್ಟಿಯಲ್ಲಿ ಅವರು ಜಹೀರ್ ಖಾನ್ (43) ನಂತರ ಎರಡನೇ ಸ್ಥಾನದಲ್ಲಿದ್ದಾರೆ. 36 ವರ್ಷದ ಕೊಹ್ಲಿಯ ಭವಿಷ್ಯ ಕುರಿತು ಸ್ಪಷ್ಟನೆ ಬರಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...