ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದಾರೆ. ಆದರೆ ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.
ಪ್ರಿಟೋರಿಯಾದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಿಂದ ಹೊರಗುಳಿಯಲು ಟೀಮ್ ಮ್ಯಾನೇಜ್‌ಮೆಂಟ್ ಮತ್ತು ಬಿಸಿಸಿಐ ಎರಡರಿಂದಲೂ ಅನುಮತಿ ಪಡೆದ ನಂತರ ವಿರಾಟ್ ಕೊಹ್ಲಿ ಸರಿಸುಮಾರು ಮೂರು ದಿನಗಳ ಹಿಂದೆ ಮುಂಬೈಗೆ ತೆರಳಿದರು. ಅವರ ನಿರೀಕ್ಷಿತ ಪುನರಾಗಮನ ಶುಕ್ರವಾರ (ಡಿಸೆಂಬರ್ 22) ಕ್ಕೆ ನಿಗದಿಯಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಟಿ20 ಹಾಗೂ ಏಕದಿನ ಸರಣಿಯನ್ನು ಆಡಿದ್ದು, ಎರಡು ಟೆಸ್ಟ್ ಪಂದ್ಯಗಳ ಸರಣಿ ಬಾಕಿಯುಳಿದಿದೆ. ಟಿ20 1-1 ಸರಣಿಯಲ್ಲಿ ಮುಕ್ತಾಯಗೊಂಡಿದ್ದರೆ, ಏಕದಿನ ಸರಣಿ 2-1ರಲ್ಲಿ ಕೆ ಎಲ್ ರಾಹುಲ್ ನೇತೃತ್ವದಲ್ಲಿ ಗೆಲುವು ಸಾಧಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!
ಏತನ್ಮಧ್ಯೆ, ರುತುರಾಜ್ ಗಾಯಕ್ವಾಡ್ ಬೆರಳಿನ ಗಾಯದಿಂದಾಗಿ ಎರಡು ಟೆಸ್ಟ್‌ಗಳ ಸರಣಿಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾದ ಪ್ರವಾಸದಲ್ಲಿರುವ ಭಾರತ ಎ ತಂಡದ ಭಾಗವಾಗಿರುವ ಅಭಿಮನ್ಯು ಈಶ್ವರನ್, ಗಾಯಕ್ವಾಡ್ ಬದಲಿಗೆ ಮೀಸಲು ಆರಂಭಿಕ ಆಟಗಾರನಾಗಿ ತಂಡದಲ್ಲಿದ್ದಾರೆ. ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಜುಲೈ-ಆಗಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ಸರಣಿಯಲ್ಲಿ ಮಾಡಿದಂತೆ ಮಧ್ಯಮ ಕ್ರಮಾಂಕದಲ್ಲಿ ಆಟವನ್ನು ಮುಂದುವರೆಸುವ ಸಾಧ್ಯತೆಯಿದೆ.
ದೀರ್ಘಾವಧಿಯ ವಿಶ್ರಾಂತಿಯ ನಂತರ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಟೆಸ್ಟ್ ಕ್ರಿಕೆಟ್ ಸರಣಿಗೆ ಮರಳಲಿದ್ದಾರೆ. ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಇಬ್ಬರೂ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.
ಡಿ.26 ರಂದು ಸಂಚೂರಿಯನ್‌ನಲ್ಲಿ ಮೊದಲ ಟೆಸ್ಟ್ ಹಾಗೂ ಜನವರಿ 3 ರಂದು ಕೇಪ್‌ಟೌನ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.