ವೈಯಕ್ತಿಕ ಕಾರಣಕ್ಕಾಗಿ ಸ್ವದೇಶಕ್ಕೆ ಮರಳಿದ ವಿರಾಟ್ ಕೊಹ್ಲಿ

Date:

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದಾರೆ. ಆದರೆ ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.

- Advertisement -

ಪ್ರಿಟೋರಿಯಾದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಿಂದ ಹೊರಗುಳಿಯಲು ಟೀಮ್ ಮ್ಯಾನೇಜ್‌ಮೆಂಟ್ ಮತ್ತು ಬಿಸಿಸಿಐ ಎರಡರಿಂದಲೂ ಅನುಮತಿ ಪಡೆದ ನಂತರ ವಿರಾಟ್ ಕೊಹ್ಲಿ ಸರಿಸುಮಾರು ಮೂರು ದಿನಗಳ ಹಿಂದೆ ಮುಂಬೈಗೆ ತೆರಳಿದರು. ಅವರ ನಿರೀಕ್ಷಿತ ಪುನರಾಗಮನ ಶುಕ್ರವಾರ (ಡಿಸೆಂಬರ್ 22) ಕ್ಕೆ ನಿಗದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಟಿ20 ಹಾಗೂ ಏಕದಿನ ಸರಣಿಯನ್ನು ಆಡಿದ್ದು, ಎರಡು ಟೆಸ್ಟ್ ಪಂದ್ಯಗಳ ಸರಣಿ ಬಾಕಿಯುಳಿದಿದೆ. ಟಿ20 1-1 ಸರಣಿಯಲ್ಲಿ ಮುಕ್ತಾಯಗೊಂಡಿದ್ದರೆ, ಏಕದಿನ ಸರಣಿ 2-1ರಲ್ಲಿ ಕೆ ಎಲ್ ರಾಹುಲ್ ನೇತೃತ್ವದಲ್ಲಿ ಗೆಲುವು ಸಾಧಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

ಏತನ್ಮಧ್ಯೆ, ರುತುರಾಜ್ ಗಾಯಕ್ವಾಡ್ ಬೆರಳಿನ ಗಾಯದಿಂದಾಗಿ ಎರಡು ಟೆಸ್ಟ್‌ಗಳ ಸರಣಿಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾದ ಪ್ರವಾಸದಲ್ಲಿರುವ ಭಾರತ ಎ ತಂಡದ ಭಾಗವಾಗಿರುವ ಅಭಿಮನ್ಯು ಈಶ್ವರನ್, ಗಾಯಕ್ವಾಡ್ ಬದಲಿಗೆ ಮೀಸಲು ಆರಂಭಿಕ ಆಟಗಾರನಾಗಿ ತಂಡದಲ್ಲಿದ್ದಾರೆ. ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಅವರು ಜುಲೈ-ಆಗಸ್ಟ್‌ನಲ್ಲಿ ವೆಸ್ಟ್‌ ಇಂಡೀಸ್ ಸರಣಿಯಲ್ಲಿ ಮಾಡಿದಂತೆ ಮಧ್ಯಮ ಕ್ರಮಾಂಕದಲ್ಲಿ ಆಟವನ್ನು ಮುಂದುವರೆಸುವ ಸಾಧ್ಯತೆಯಿದೆ.

ದೀರ್ಘಾವಧಿಯ ವಿಶ್ರಾಂತಿಯ ನಂತರ ಶ್ರೇಯಸ್ ಅಯ್ಯರ್ ಮತ್ತು ಕೆ ಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ ಸರಣಿಗೆ ಮರಳಲಿದ್ದಾರೆ. ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಇಬ್ಬರೂ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.

ಡಿ.26 ರಂದು ಸಂಚೂರಿಯನ್‌ನಲ್ಲಿ ಮೊದಲ ಟೆಸ್ಟ್ ಹಾಗೂ ಜನವರಿ 3 ರಂದು ಕೇಪ್‌ಟೌನ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...