ಇನ್‍ಸ್ಟಾಗ್ರಾಮ್‍ನಲ್ಲಿ 250 ಮಿಲಿಯನ್‌ ಫಾಲೋವರ್ಸ್‌! ದಾಖಲೆ ಬರೆದ ‌ಕಿಂಗ್ ವಿರಾಟ್ ಕೊಹ್ಲಿ

Date:

  • ‌ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ
  • 25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್

ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ ಪ್ರದರ್ಶಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದ ಟೀಮ್‌ ಇಂಡಿಯಾದ ಮಾಜಿ ನಾಯಕ, ಇದೀಗ ತನ್ನ ಇನ್‍ಸ್ಟಾಗ್ರಾಮ್‍ ಫಾಲೋವರ್ಸ್‍ಗಳ ಸಂಖ್ಯೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ವಿರಾಟ್‌ ಕೊಹ್ಲಿ ಇನ್‍ಸ್ಟಾಗ್ರಾಮ್‍ ಖಾತೆಯನ್ನು ಫಾಲೋ ಮಾಡುತ್ತಿರುವವರ ಸಂಖ್ಯೆ ಇದೀಗ 250 ಮಿಲಿಯನ್‌ ದಾಟಿದೆ. ಆ ಮೂಲಕ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ನಲ್ಲಿ 25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಮತ್ತು ಜಗತ್ತಿನ ಮೂರನೇ ಕ್ರೀಡಾಪಟು ಎಂಬ ಗರಿಮೆಯನ್ನು ಕೊಹ್ಲಿ ತನ್ನದಾಗಿಸಿಕೊಂಡಿದ್ದಾರೆ.

ಈ ಹಾದಿಯಲ್ಲಿ ಕೊಹ್ಲಿ, ಟೀಮ್‌ ಇಂಡಿಯಾದ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌ (40.4  ಮಿಲಿಯನ್) ಮತ್ತು ಮಹೇಂದ್ರ ಸಿಂಗ್‌ ಧೋನಿ (42.4 ಮಿಲಿಯನ್) ಅವರನ್ನು ಬಹುದೂರ ಹಿಂದಿಕ್ಕಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅತಿಹೆಚ್ಚು ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೊ ಹಾಗೂ ಲಿಯೋನೆಲ್ ಮೆಸ್ಸಿ ಮೊದಲೆರಡು ಸ್ಥಾನಗಳಲ್ಲಿದ್ದಾರೆ.

kohli

ಪೋರ್ಚುಗಲ್‍ನ ಕ್ರಿಸ್ಟಿಯಾನೋ ರೊನಾಲ್ಡೊ 585 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನ ಮತ್ತು 464 ಮಿಲಿಯನ್  ಫಾಲೋವರ್ಸ್ ಹೊಂದಿರುವ ಲಿಯೋನೆಲ್ ಮೆಸ್ಸಿ; ಅತಿಹೆಚ್ಚು ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಒಂದೇ ದಿನ ಗ್ರೀನ್, ಗಿಲ್, ಕೊಹ್ಲಿಯಿಂದ ಶತಕ; ಮೂವರೂ ನಾಟ್ ಔಟ್!

ಇದುವರೆಗೂ ಕೊಹ್ಲಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ 1,601 ಪೋಸ್ಟ್‌ಗಳನ್ನು ಮಾಡಿದ್ದಾರೆ. ಸಚಿನ್ ತೆಂಡೂಲ್ಕರ್, ಎಬಿ ಡಿವಿಲಿಯರ್ಸ್ ಹಾಗೂ ರೊನಾಲ್ಡೊ ಸೇರಿದಂತೆ 278 ಜನರನ್ನು ಕೊಹ್ಲಿ ಫಾಲೋ ಮಾಡುತ್ತಿದ್ದಾರೆ. ತಮ್ಮ ಪ್ರತಿ ಜಾಹೀರಾತಿನ ಪೋಸ್ಟ್‌ಗೆ ಕೊಹ್ಲಿ, ಬರೋಬ್ಬರಿ 8 ಕೋಟಿ ರುಪಾಯಿ ಸಂಭಾವನೆ ಪಡೆಯುತ್ತಾರೆ ಎಂದು ಹಾಪ್ಪರ್‌ ಎಚ್‌ಕ್ಯೂ ಸೋಷಿಯಲ್‌ ಎನ್ನುವ ಸಂಸ್ಥೆಯೊಂದು ಈ ಹಿಂದೆ ವರದಿ ಮಾಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...