‘ಆರ್‌ಸಿಬಿ’ಗೆ ಮತ್ತೆ ಕೊಹ್ಲಿ ಕ್ಯಾಪ್ಟನ್‌?; ಆರ್‌ಸಿಬಿ ಟ್ವೀಟ್ ಹೇಳುತ್ತಿರುವ ಗುಟ್ಟೇನು?

Date:

2025ರಲ್ಲಿ ನಡೆಯಲಿರುವ ಎಪಿಎಲ್‌ಗೆ ಕೆಲವೇ ದಿನಗಳಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಎಪಿಎಲ್‌ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ಪ್ರಾಂಚೈಸಿಗಳು ತನ್ನ ಆಟಗಾರರನ್ನು ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿವೆ. ಹಲವು ಆಟಗಾರರ ಸಂಭಾವನೆಯನ್ನು ಹೆಚ್ಚಿಸಲು ಪ್ರಾಂಚೈಸಿಗಳು ಮುಂದಾಗಿವೆ. ಎಲ್‌ಎಸ್‌ಜಿ ತಂಡದ ನಾಯಕರಾಗಿದ್ದ ಕೆ.ಎಲ್‌ ರಾಹುಲ್ ಇದೀಗ ತಂಡ ತೊರೆದಿದ್ದಾರೆ. ಅವರು ಆರ್‌ಸಿಬಿ ಸೇರಬಹುದು ಎಂಬ ಮಾತುಗಳು ಕೇಳಿಬರುತ್ತಿದೆ. ಇದೇ ವೇಳೆ, ಮುಂದಿನ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅವರೇ ಆರ್‌ಸಿಬಿಗೆ ಮತ್ತೆ ಕ್ಯಾಪ್ಟನ್‌ ಆಗಲಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಚರ್ಚೆ ಹೆಚ್ಚಾಗಿದೆ.

- Advertisement -

ಪ್ರಾಂಚೈಸಿಗಳು ಮತ್ತು ತಂಡಗಳ ಸಾಮಾಜಿಕ ಜಾಲತಾಣ ಖಾತೆಗಳು ಈಗ ಹೆಚ್ಚು ಸಕ್ರಿಯವಾಗಿವೆ. ಹಲವಾರು ಮಾಹಿತಿಗಳನ್ನು ಬಿಚ್ಚಿಡುತ್ತಿವೆ. ಕೆಲವೊಂದು ಕುತೂಹಲ ಮೂಡಿಸುವ ವಿಷಯಗಳನ್ನು ‘ಸರ್ಪ್ರೈಸಿಂಗ್ ಎಲಿಮೆಂಟ್’ ರೀತಿಯಲ್ಲಿ ನೀಡುತ್ತಿವೆ. ಆರ್‌ಬಿಸಿ ತಂಡದ ಫ್ರಾಂಚೈಸಿ ಕೂಡ ವಿರಾಟ್ ಕೊಹ್ಲಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಜ್ಜಾಗಿದೆ. ಅವರನ್ನು ನಾಯಕನ್ನನಾಗಿಯೂ ನೇಮಿಸುವ ಸಾಧ್ಯತೆಯ ಬಗ್ಗೆ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬುಧವಾರ ಆರ್‌ಸಿಬಿ ಟ್ವೀಟ್‌ ಮಾಡಿದ್ದು, ಅದರಲ್ಲಿ ಅಕ್ಷರಗಳ ಚಾಟ್‌ ಹಾಕಿದೆ. ಅದರಲ್ಲಿರುವ ಆಟಗಾರರ ಹೆಸರುಗಳನ್ನು ಮಾರ್ಕ್‌ ಮಾಡುವಂತೆ ಅಭಿಮಾನಿಗಳಿಗೆ ಟಾಸ್ಕ್‌ ನೀಡಿದೆ. ಆ ಒಗಟಿನ ಚಾಟ್‌ನಲ್ಲಿ ಕೊಹ್ಲಿ, ಮೊಹಮ್ಮದ್ ಸಿರಾಜ್, ರಜತ್ ಪಾಟಿದಾರ್, ಫಾಫ್ ಡು ಪ್ಲೆಸಿಸ್, ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಯಶ್ ದಯಾಲ್ ಮತ್ತು ವಿಲ್ ಜಾಕ್ಸ್ ಅವರ ಹೆಸರುಗಳಿವೆ.

ಇದಕ್ಕೂ ಮುನ್ನ ಆರ್‌ಸಿಬಿ ವಿರಾಟ್ ಕೊಹ್ಲಿ ಅವರ ಚಿತ್ರಗಳ ಕೊಲಾಜ್‌ ಜೊತೆಗೆ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿತ್ತು. “ದೀಪಾವಳಿ, ಕಿಂಗ್ ಕೊಹ್ಲಿಯಿಂದ ಮರೆಯಲಾಗದ ಉಡುಗೊರೆ! ಹಬ್ಬದ ಕಾಲವು ನಮ್ಮ ವಿಶೇಷ ವ್ಯಕ್ತಿಯಿಂದ ಹೆಚ್ಚು ವಿಶೇಷಗೊಂಡಿದೆ! ಈ ವರ್ಷ ಅಂಗಡಿಯಲ್ಲಿ ಏನಿದೆ?” ಎಂದು ಪೋಸ್ಟ್‌ ಮಾಡಿತ್ತು.

ಈ ವಿಶೇಷ ಏನು ಎಂಬ ವಿಚಾರದಲ್ಲಿ ಕೊಹ್ಲಿ ಮತ್ತೆ ಆರ್‌ಸಿಬಿ ನಾಯಕನಾಗಿ ಪುನರಾಗಮಿಸುತ್ತಾರೆ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://twitter.com/RCBTweets/status/1851481657846493423

“ಐಪಿಎಲ್ 2025ರ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ. ಇದು ದೊಡ್ಡ ದೀಪಾವಳಿ” ಎಂದು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...