ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಲು ಬಿಸಿಸಿಐ ಸಿದ್ಧವಿರಲಿಲ್ಲ: ಗಂಗೂಲಿ

Date:

ʻಭಾರತ ಕ್ರಿಕೆಟ್‌ ತಂಡದ ಟೆಸ್ಟ್ ನಾಯಕತ್ವ ಸ್ಥಾನ ತ್ಯಜಿಸಿದ ವಿರಾಟ್ ಕೊಹ್ಲಿಯ ನಿರ್ಧಾರ ಬಿಸಿಸಿಐಗೆ ಅಚ್ಚರಿ ಮೂಡಿಸಿತ್ತುʼ ಎಂದು ಸೌರವ್‌ ಗಂಗೂಲಿ ಹೇಳಿದ್ಧಾರೆ.

- Advertisement -

ʻಕೊಹ್ಲಿಯನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಆಲೋಚನೆಯನ್ನು ಬಿಸಿಸಿಐ ಹೊಂದಿರಲಿಲ್ಲ. ಆದರೆ 2022ರ ದಕ್ಷಿಣ ಆಫ್ರಿಕಾ ಸರಣಿಯ ಬಳಿಕ ಕೊಹ್ಲಿ, ತಾವಾಗಿಯೇ ನಾಯಕ ಪಟ್ಟವನ್ನು ಬಿಟ್ಟುಕೊಟ್ಟರು. ಇದು ಅವರ ಸ್ವಂತ ನಿರ್ಧಾರವಾಗಿತ್ತುʼ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಗಂಗೂಲಿ ಹೇಳಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಟೀಮ್‌ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಸಾಮರ್ಥ್ಯದ ಕುರಿತು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಇದೇ ವೇಳೆ ವಿರಾಟ್‌ ಕೊಹ್ಲಿಗೆ ಮತ್ತೆ ನಾಯಕತ್ವ ಜವಾಬ್ದಾರಿ ನೀಡುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗಂಗೂಲಿ ಹೇಳಿಕೆ ಮಹತ್ವ ಪಡೆದಿದೆ.

ಸೌರವ್​ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾಗ ನಾಯಕತ್ವ ತ್ಯಜಿಸಲು ವಿರಾಟ್​ ಕೊಹ್ಲಿ ಮೇಲೆ ಒತ್ತಡ ಹೇರಲಾಗಿತ್ತು ಎಂಬ ಆಪಾದನೆ ಕೇಳಿ ಬಂದಿತ್ತು. ಈ ಕುರಿತು ʻಆಜ್‌ ತಕ್‌ʼ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಗಂಗೂಲಿ, ʻವಿರಾಟ್​ರನ್ನು ನಾಯಕತ್ವದಿಂದ ಕೆಳಗಿಳಿಸಲು ಮಂಡಳಿ ಸಿದ್ಧವಿರಲಿಲ್ಲ. ಅದು ಅವರ ವೈಯಕ್ತಿಕ ನಿರ್ಧಾರವಾಗಿತ್ತು. ದಕ್ಷಿಣ ಆಫ್ರಿಕಾ ಪ್ರವಾಸದ ಸೋಲಿನ ನಂತರ ಅವರು ಹಠಾತ್​ ರಾಜೀನಾಮೆ ಘೋಷಿಸಿದರು. ನಮಗೂ ಇದು ಅನಿರೀಕ್ಷಿತವಾಗಿತ್ತು. ನಾಯಕತ್ವ ತೊರೆದ ನಿರ್ಧಾರದ ಹಿಂದಿನ ಉದ್ದೇಶ ಏನೆಂಬುದನ್ನು ಅವರೇ ಬಲ್ಲರು, ಅವರೇ ಅದನ್ನು ಬಹಿರಂಗಪಡಿಸಬೇಕುʼ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತೊರೆದ ಕಾರಣದ ಕುರಿತು ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ. ಕೊಹ್ಲಿ ನಿರ್ಗಮನದ ಬಳಿಕ ತಂಡಕ್ಕೆ ಹೊಸ ನಾಯಕನ ಅಗತ್ಯವಿತ್ತು. ಆ ಸಮಯದಲ್ಲಿ ರೋಹಿತ್ ಶರ್ಮಾ ಉತ್ತಮ ಆಯ್ಕೆಯಾಗಿದ್ದರು ಎಂದು ಸೌರವ್ ಸಂದರ್ಶನದಲ್ಲಿ ಹೇಳಿದ್ದಾರೆ.

ಸೌರವ್​- ವಿರಾಟ್​ ಕಿತ್ತಾಟ: 2021ರಲ್ಲಿ ವಿರಾಟ್ ಕೊಹ್ಲಿ ಟಿ20 ನಾಯಕತ್ವ ತೊರೆದ ಬಳಿಕ ಏಕದಿನದಿಂದಲೂ ಬಿಸಿಸಿಐ ರಾಜೀನಾಮೆ ಬಯಸಿತ್ತು. ಆದರೆ, ವಿರಾಟ್ ಇದಕ್ಕೆ ಸಿದ್ಧರಿರಲಿಲ್ಲ. ಹೀಗಾಗಿ ರೋಹಿತ್​ ಶರ್ಮಾರನ್ನು ನಾಯಕರನ್ನಾಗಿ ಘೋಷಿಸಿತು. ಅಂದಿನಿಂದ ವಿರಾಟ್​ ಮತ್ತು ಅಂದಿನ ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್​ ಗಂಗೂಲಿ ಮಧ್ಯೆ ಕಿತ್ತಾಟ ಶುರುವಾಗಿತ್ತು. ಯಾವುದೇ ಮಾಹಿತಿ ನೀಡದೇ ವಿರಾಟ್ ಅವ​ರನ್ನು ನಾಯಕತ್ವ ಸ್ಥಾನದಿಂದ ವಜಾ ಮಾಡಿದ್ದು, ಅಭಿಮಾನಿಗಳನ್ನು ಕೆರಳಿಸಿತ್ತು. ಇದಾದ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ವಿರಾಟ್​ ಟೆಸ್ಟ್ ನಾಯಕತ್ವಕ್ಕೂ ಹಠಾತ್​ ರಾಜೀನಾಮೆ ನೀಡಿದ್ದರು. ಈ ಅನಿರೀಕ್ಷಿತ ಬೆಳವಣಿಗೆಯಿಂದ ಬಿಸಿಸಿಐ ರೋಹಿತ್​ ಅವರನ್ನೇ ಟೆಸ್ಟ್​ಗೂ ಕ್ಯಾಪ್ಟನ್​ ಆಗಿ ಮುಂದುವರಿಸಿತು. ಮೂರೇ ತಿಂಗಳಲ್ಲಿ ಟೆಸ್ಟ್, ಏಕದಿನ, ಟಿ20 ನಾಯಕತ್ವವನ್ನು ತೊರೆದ ಕೊಹ್ಲಿಯ ಈ ನಿರ್ಧಾರ ಕ್ರಿಕೆಟ್​ ಜಗತ್ತಿನಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...