ಭಾರತ–ಪಾಕ್ ಟಿ20 ವಿಶ್ವಕಪ್ ಪಂದ್ಯ: ಹಸ್ತಲಾಘವದ ಗುಟ್ಟು ಬಿಟ್ಟುಕೊಡದ ಟೀಂ ಇಂಡಿಯಾ ನಾಯಕ

Date:

ಭಾನುವಾರ ಫೆ.15 ರಂದು ನಡೆಯಲಿರುವ ಟಿ20 ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನದ ಆಟಗಾರರೊಂದಿಗೆ ಹಸ್ತಲಾಘವ (ಹ್ಯಾಂಡ್‌ಶೇಕ್) ಮಾಡುವರೇ ಇಲ್ಲವೇ ಎಂಬ ಪ್ರಶ್ನೆಗೆ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದು, ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

- Advertisement -

ಕೊಲಂಬೊದಲ್ಲಿ ನಡೆಯಲಿರುವ ಈ ಪಂದ್ಯದ ಟಾಸ್ ವೇಳೆ ಅಥವಾ ಪಂದ್ಯದ ನಂತರ ಉಭಯ ತಂಡಗಳ ನಾಯಕರು ಕೈ ಕುಲುಕುವರೇ ಎಂಬ ಪ್ರಶ್ನೆಗೆ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ ಸೂರ್ಯಕುಮಾರ್, “ಹಸ್ತಲಾಘವದ ವಿಚಾರವನ್ನು ನಾಳೆಗೆ ಬಿಡಿ. ಇಂದು ರಾತ್ರಿ ಚೆನ್ನಾಗಿ ನಿದ್ದೆ ಮಾಡಿ, ಏನಾಗುತ್ತದೆ ಎಂದು ಕಾದು ನೋಡಿ,” ಎಂದು ಉತ್ತರಿಸುವ ಮೂಲಕ 24 ಗಂಟೆಗಳ ಗಡುವಿನ ಗುಟ್ಟನ್ನು ಕಾಯ್ದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಕಳೆದ ವರ್ಷ ದುಬೈನಲ್ಲಿ ನಡೆದ ಏಷ್ಯಾ ಕಪ್‌ಗೂ ಮುನ್ನ ನಡೆದ ಪಹಲ್ಗಾಮ್ ಘಟನೆ ಮತ್ತು ಅದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ನಂತರ, ಭಾರತ ಮತ್ತು ಪಾಕಿಸ್ತಾನ ಆಟಗಾರರು ಮೈದಾನದಲ್ಲಿ ಹಸ್ತಲಾಘವ ಮಾಡುವುದನ್ನು ನಿಲ್ಲಿಸಿದ್ದಾರೆ. ಏಷ್ಯಾ ಕಪ್‌ನ ಲೀಗ್ ಹಂತದ ಮೊದಲ ಪಂದ್ಯದ ಟಾಸ್ ವೇಳೆ ಭಾರತ ಈ ನಡೆ ಅನುಸರಿಸಿದ ನಂತರ, ಇದು ಅಲಿಖಿತ ನಿಯಮದಂತೆ ಮುಂದುವರಿದುಕೊಂಡು ಬಂದಿದೆ. ಹೀಗಾಗಿ ಭಾನುವಾರದ ಪಂದ್ಯದಲ್ಲೂ ಈ ಸಂಪ್ರದಾಯ ಮುಂದುವರಿಯಲಿದೆಯೇ ಎಂಬ ಚರ್ಚೆ ಜೋರಾಗಿದೆ.

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಇತ್ತ ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಆಘಾ ಕೂಡ ಹಸ್ತಲಾಘವದ ಬಗ್ಗೆ ನೇರ ಉತ್ತರ ನೀಡಲು ನಿರಾಕರಿಸಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಳೆ ಏನಾಗುತ್ತದೆ ನೋಡೋಣ. ಆದರೆ ನನ್ನ ವೈಯಕ್ತಿಕ ಅಭಿಪ್ರಾಯ ಏನೇ ಇರಲಿ, ಕ್ರಿಕೆಟ್ ಅನ್ನು ಕ್ರೀಡಾ ಸ್ಫೂರ್ತಿಯಿಂದ ಆಡಬೇಕು ಎನ್ನುವುದು ಮುಖ್ಯ. ಅಂತಿಮ ನಿರ್ಧಾರ ಅವರಿಗೆ ಬಿಟ್ಟಿದ್ದು” ಎಂದು ಹೇಳಿದ್ದಾರೆ. ಅಲ್ಲದೆ, ವಿಶ್ವಕಪ್‌ಗಳಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಉತ್ತಮ ದಾಖಲೆ ಹೊಂದಿಲ್ಲದಿರುವುದನ್ನು ಒಪ್ಪಿಕೊಂಡಿದ್ದಾರೆ.

ಇದೇ ವೇಳೆ ಭಾರತದ ಆಡುವ ಹನ್ನೊಂದರ ಬಳಗದ ಬಗ್ಗೆ ಮಹತ್ವದ ಸುಳಿವು ನೀಡಿರುವ ಸೂರ್ಯಕುಮಾರ್ ಯಾದವ್, ಸ್ಟಾರ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಚೇತರಿಸಿಕೊಂಡಿದ್ದು, ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ತಾನದ ‘ಬಹಿಷ್ಕಾರದ ನಾಟಕ’ದ ನಂತರ ನಡೆಯುತ್ತಿರುವ ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ವರದಿಯಂತೆ ಶೇ. 60ರಷ್ಟು ಮಳೆಯಾಗುವ ಸಾಧ್ಯತೆಯಿದ್ದು, ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಒಟ್ಟಿನಲ್ಲಿ ಮೈದಾನದ ಹೊರಗಿನ ವಿವಾದಗಳು ಮತ್ತು ಹಸ್ತಲಾಘವದ ಕುತೂಹಲದ ನಡುವೆ ಭಾನುವಾರದ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...