ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 212 ರನ್‌ಗಳಿಗೆ ಆಲೌಟ್ ಆಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಉತ್ತಮ ಆರಂಭ ಒದಗಿಸುವಲ್ಲಿ ವೈಫಲ್ಯ ಕಂಡ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಸಮಯೋಚಿತ ಶತಕದ ನೆರವಿನಿಂದ 49.4 ಓವರ್‌ಗಳಲ್ಲಿ 212 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.
David Miller’s INVALUABLE effort under pressure takes South Africa to a fighting total 🙌
Can they make a match out of it?#CWC23 #SAvAUS LIVE ▶️ https://t.co/NKJxPQslQa pic.twitter.com/nxJ3RYEgV6
— ESPNcricinfo (@ESPNcricinfo) November 16, 2023
ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಪ್ಯಾಟ್ ಕಮಿನ್ಸ್ ಎಸೆದ 48ನೇ ಓವರ್ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸುವ ಮೂಲಕ ಶತಕ ಪೂರೈಸಿದರು. 115 ಎಸೆತಗಳಲ್ಲಿ ಶತಕ ಪೂರೈಸಿದ ಡೇವಿಡ್ ಮಿಲ್ಲರ್, 2ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ 101 ರನ್ ಗಳಿಸಿ ಔಟಾದರು.
ಉಳಿದಂತೆ ಹರಿಣಗಳ ಪರ ಹೆನ್ರಿಚ್ ಕ್ಲಾಸೆನ್ 47, ಜೆರಾಲ್ಡ್ ಕೊಯೆಟ್ಝೆ 19 ರನ್ ಗಳಿಸಿದರು. ಆಸ್ಟ್ರೇಲಿಯಾದ ಕರಾರುವಾಕ್ಕಾದ ಬೌಲಿಂಗ್‌ಗೆ ಸೌತ್ ಆಫ್ರಿಕಾ ತಂಡದ ಬ್ಯಾಟ್ಸ್‌ಮನ್‌ಗಳು ತರಗೆಲೆಗಳಂತೆ ಉದುರಿದರು.
➡️ From 24/4 in the 12th over
➡️ To 212 all outDavid Miller’s 💯 has given the South Africa bowlers something to defend.
Read the live match report📝⬇️#CWC23 #SAvAUS https://t.co/qayvEZNW7J
— ICC (@ICC) November 16, 2023
ಈ ನಡುವೆಯೂ ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಚ್ ಕ್ಲಾಸೆನ್ ನಡುವೆ 5ನೇ ವಿಕೆಟ್‌ಗೆ 95 ರನ್‌ಗಳ ಜೊತೆಯಾಟ ನಡೆಸಿದರು. ಹೆನ್ರಿಚ್ ಕ್ಲಾಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಆಸೀಸ್‌ನ ಪಾರ್ಟ್ ಟೈಮ್ ಬೌಲರ್ ಟ್ರಾವಿಸ್ ಹೆಡ್ ಈ ಜೋಡಿಯನ್ನು ಬೇರ್ಪಡಿಸಿದರು.
ಆಸೀಸ್ ಪರವಾಗಿ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ 3 ವಿಕೆಟ್ ಪಡೆದುಕೊಂಡರೆ, ಟ್ರಾವಿಸ್ ಹೆಡ್ ಹಾಗೂ ಜೋಶ್ ಹ್ಯಾಝಲ್‌ವುಡ್ ತಲಾ ಎರಡು ವಿಕೆಟ್ ಗಳಿಸುವಲ್ಲಿ ಸಫಲರಾದರು.
Australia scored 213 Vs South Africa in the 1999 World Cup Semis.
South Africa scored 212 Vs Australia in the 2023 World Cup Semis. pic.twitter.com/KFRwiZ1cxr
— Mufaddal Vohra (@mufaddal_vohra) November 16, 2023
2ನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್‌ನಲ್ಲಿ ಈಗಾಗಲೇ ಐದು ಬಾರಿ ಚಾಂಪಿಯನ್ ಆಗಿದೆ.