ವಿಶ್ವಕಪ್ ಸೆಮಿಫೈನಲ್ | ಮಿಲ್ಲರ್ ಏಕಾಂಗಿ ಹೋರಾಟ; ಆಸೀಸ್‌ಗೆ ಅಲ್ಪಮೊತ್ತದ ಗುರಿ ನೀಡಿದ ಹರಿಣಗಳು

Date:

ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 212 ರನ್‌ಗಳಿಗೆ ಆಲೌಟ್ ಆಗಿದೆ.

- Advertisement -

ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಉತ್ತಮ ಆರಂಭ ಒದಗಿಸುವಲ್ಲಿ ವೈಫಲ್ಯ ಕಂಡ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಸಮಯೋಚಿತ ಶತಕದ ನೆರವಿನಿಂದ 49.4 ಓವರ್‌ಗಳಲ್ಲಿ 212 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಪ್ಯಾಟ್ ಕಮಿನ್ಸ್​ ಎಸೆದ 48ನೇ ಓವರ್​ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್​ನತ್ತ ಸಿಕ್ಸ್​ ಸಿಡಿಸುವ ಮೂಲಕ ಶತಕ ಪೂರೈಸಿದರು. 115 ಎಸೆತಗಳಲ್ಲಿ ಶತಕ ಪೂರೈಸಿದ ಡೇವಿಡ್ ಮಿಲ್ಲರ್, 2ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ 101 ರನ್ ಗಳಿಸಿ ಔಟಾದರು.

HEAD

ಉಳಿದಂತೆ ಹರಿಣಗಳ ಪರ ಹೆನ್ರಿಚ್ ಕ್ಲಾಸೆನ್ 47, ಜೆರಾಲ್ಡ್ ಕೊಯೆಟ್ಝೆ 19 ರನ್ ಗಳಿಸಿದರು. ಆಸ್ಟ್ರೇಲಿಯಾದ ಕರಾರುವಾಕ್ಕಾದ ಬೌಲಿಂಗ್‌ಗೆ ಸೌತ್ ಆಫ್ರಿಕಾ ತಂಡದ ಬ್ಯಾಟ್ಸ್‌ಮನ್‌ಗಳು ತರಗೆಲೆಗಳಂತೆ ಉದುರಿದರು.

ಈ ನಡುವೆಯೂ ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಚ್ ಕ್ಲಾಸೆನ್ ನಡುವೆ 5ನೇ ವಿಕೆಟ್‌ಗೆ 95 ರನ್‌ಗಳ ಜೊತೆಯಾಟ ನಡೆಸಿದರು. ಹೆನ್ರಿಚ್ ಕ್ಲಾಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಆಸೀಸ್‌ನ ಪಾರ್ಟ್‌ ಟೈಮ್ ಬೌಲರ್ ಟ್ರಾವಿಸ್ ಹೆಡ್ ಈ ಜೋಡಿಯನ್ನು ಬೇರ್ಪಡಿಸಿದರು.

BOWLED

ಆಸೀಸ್‌ ಪರವಾಗಿ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್‌ ಹಾಗೂ ಪ್ಯಾಟ್ ಕಮ್ಮಿನ್ಸ್‌ ತಲಾ 3 ವಿಕೆಟ್ ಪಡೆದುಕೊಂಡರೆ, ಟ್ರಾವಿಸ್ ಹೆಡ್ ಹಾಗೂ ಜೋಶ್ ಹ್ಯಾಝಲ್‌ವುಡ್ ತಲಾ ಎರಡು ವಿಕೆಟ್ ಗಳಿಸುವಲ್ಲಿ ಸಫಲರಾದರು.

2ನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್‌ನಲ್ಲಿ ಈಗಾಗಲೇ ಐದು ಬಾರಿ ಚಾಂಪಿಯನ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...