ತಮ್ಮ 10 ವಿಕೆಟ್ ಸಾಧನೆಯನ್ನು ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ ಆಕಾಶ್‌ ದೀಪ್

Date:

“ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು”. ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಬಳಿಸಿ ಮೆರೆದ ಭಾರತದ ವೇಗಿ ಆಕಾಶ್‌ ದೀಪ್‌ ಅವರ ಭಾವುಕ ನುಡಿಗಳು.

- Advertisement -

ಆಕಾಶ್‌ ದೀಪ್‌ ಅವರು ತಮ್ಮ 10 ವಿಕೆಟ್‌ನ ಅಮೋಘ ಸಾಧನೆಯನ್ನು, ತಮ್ಮ ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ, ಆಕಾಶ್‌ ದೀಪ್‌ ಅವರು ಎರಡು ಇನ್ನಿಂಗ್ಸ್‌ನಿಂದ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಆಕಾಶ್‌ ದೀಪ್‌, ತಮ್ಮ ಅದ್ಭುತ ಪ್ರದರ್ಶನವನ್ನು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತಮ್ಮ ಸಹೋದರಿಗೆ ಅರ್ಪಿಸುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತದ 336 ರನ್‌ಗಳ ಸರಣಿ ಸಮಬಲದ ಗೆಲುವಿನಲ್ಲಿ, ಪಶ್ಚಿಮ ಬಂಗಾಳದ ವೇಗಿ 10 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದರು. ಇದು ಆಕಾಶ್‌ ದೀಪ್‌ ಅವರ ಇದುವರೆಗಿನ ಅತ್ಯುತ್ತಮ ಟೆಸ್ಟ್‌ ಪ್ರದರ್ಶನವಾಗಿದೆ.

ಇದನ್ನು ಓದಿದ್ದೀರಾ? IND vs ENG 2ND Test: ಜಯದ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾಗೆ ಬೇಕು 7 ವಿಕೆಟ್‌

“ನಾನು ಇದರ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ ಆದರೆ ಎರಡು ತಿಂಗಳ ಹಿಂದೆ, ನನ್ನ ತಂಗಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಅವಳು ನನ್ನ ಪ್ರದರ್ಶನದಿಂದ ತುಂಬಾ ಸಂತೋಷಪಡುತ್ತಾಳೆ ಮತ್ತು ಭಾರತ ತಂಡದ ಗೆಲುವು ಆಕೆಯ ನಗುವನ್ನು ಮರಳಿ ತರುತ್ತದೆ. ನಾನು ಚೆಂಡನ್ನು ಕೈಗೆತ್ತಿಕೊಂಡಾಗಲೆಲ್ಲ ಅವಳ ಆಲೋಚನೆಗಳು ಮತ್ತು ಆಕೆಯ ಮುಖ ನನ್ನ ಮನಸ್ಸಿನಲ್ಲಿ ಹಾದು ಹೋಗುತ್ತಿತ್ತು. ನನ್ನ ಈ ಪ್ರದರ್ಶನ ಅವಳಿಗೆ ಸಮರ್ಪಿತವಾಗಿದೆ. ನಾವೆಲ್ಲರೂ ನಿನ್ನೊಂದಿಗಿದ್ದೇವೆ ಎಂದು ನಾನು ಅವಳಿಗೆ ಹೇಳಲು ಬಯಸುತ್ತೇನೆ” ಎಂದು ಆಕಾಶ್ ದೀಪ್‌ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಪಂದ್ಯದ ಬಗ್ಗೆ ಮಾತನಾಡಿದ ಅವರು “ನಾವು ಒಂದು ತಂಡವಾಗಿ ಜಾರಿಗೆ ತಂದ ಯೋಜನೆಗಳು ಮತ್ತು ಪ್ರಕ್ರಿಯೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಹಾರ್ಡ್ ಲೆಂತ್‌ಗಳಲ್ಲಿ ಸೀಮ್‌ನ್ನು ಚುರುಕುಗೊಳಿಸುವುದು ನನ್ನ ಮುಖ್ಯ ಗುರಿಯಾಗಿ. ತಂತ್ರಗಾರಿಕೆಯ ಕ್ರಮಬದ್ಧ ಯೋಜನೆಯಿಂದ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ವಿಕೆಟ್‌ ಕಬಳಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...