ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್‌ಗೆ ಅನುಮತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕುಸ್ತಿ ಫೆಡರೇಶನ್

Date:

2026ರ ಏಷ್ಯನ್ ಗೇಮ್ಸ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಭಾರತೀಯ ಕುಸ್ತಿ ಫೆಡರೇಶನ್ (WFI) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
​
ನ್ಯಾಯಮೂರ್ತಿಗಳು ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನೊಳಗೊಂಡ ಪೀಠವು ನಾಳೆ ಈ ಅರ್ಜಿ ವಿಚಾರಣೆ ನಡೆಸಲಿದೆ. ಮೇ 22ರಂದು ದೆಹಲಿ ಹೈಕೋರ್ಟ್ ಫೋಗಟ್ ಅವರಿಗೆ ಮೇ 30 ಮತ್ತು 31ರಂದು ನಿಗದಿಯಾಗಿರುವ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕೆಂದು ಆದೇಶಿಸಿತ್ತು. ಭಾರತೀಯ ಕುಸ್ತಿ ಒಕ್ಕೂಟ (WFI) ವಿನೇಶ್ ಅವರನ್ನು ‘ಅನರ್ಹ’ ಎಂದು ಘೋಷಿಸಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶವನ್ನು ನೀಡಿತ್ತು.

- Advertisement -

ಇದನ್ನು ಓದಿದ್ದೀರಾ? ಬಿಜೆಪಿ ನಾಯಕ ಬ್ರಿಜ್ ಭೂಷಣ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದವರಲ್ಲಿ ನಾನೂ ಒಬ್ಬಳು: ವಿನೇಶ್ ಫೋಗಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ವಿಚಾರಣೆ ವೇಳೆ ಭಾರತೀಯ ಕುಸ್ತಿ ಫೆಡರೇಶನ್ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿತ್ತು. ಹಳೆಯ ಆಯ್ಕೆ ಮಾನದಂಡಗಳನ್ನು ದಿಢೀರ್ ಬದಲಾಯಿಸಿರುವುದರ ಹಿಂದೆ ‘ದ್ವೇಷದ ರಾಜಕಾರಣ’ ಇರುವಂತೆ ಕಾಣುತ್ತಿದೆ ಎಂದು ಹೇಳಿತ್ತು.

ಕಳೆದ ವರ್ಷ ಮಗುವಿಗೆ ಜನ್ಮ ನೀಡಿದ್ದ ವಿನೇಶ್ 2025ರ ಡಿಸೆಂಬರ್‌ನಲ್ಲಿ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿದ್ದರು. ಈ ಬೆನ್ನಲ್ಲೆ ಕುಸ್ತಿ ಫೆಡರೇಶನ್ ನಿಯಮಗಳನ್ನು ಬದಲಾಯಿಸಿ ವಿನೇಶ್ ಅವರನ್ನು ಹೊರಗಿಟ್ಟಿತ್ತು. ಶಿಸ್ತು ಉಲ್ಲಂಘನೆ ಮತ್ತು ನಿವೃತ್ತಿ ಬಳಿಕ ಮತ್ತೆ ಸ್ಪರ್ಧೆಗೆ ಬರುವ ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಆರೋಪದಲ್ಲಿ ಡಬ್ಲ್ಯೂಎಫ್ಐ ವಿನೇಶ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. 2026ರ ಜೂನ್‌ವರೆಗೆ ಸ್ಪರ್ಧಿಸದಂತೆ ತಡೆ ಹೇರಿತ್ತು.

ಈ ವಿಚಾರದಲ್ಲಿ ಹೈಕೋರ್ಟ್ “ದೇಶದಲ್ಲಿ ತಾಯ್ತನವನ್ನು ಸಂಭ್ರಮಿಸಲಾಗುತ್ತದೆ, ಗೌರವಿಸಲಾಗುತ್ತದೆ. ಅದೇ ಒಬ್ಬ ಕ್ರೀಡಾಪಟುವಿನ ವೃತ್ತಿಜೀವನಕ್ಕೆ ಮಾರಕವಾಗುವಂತೆ ಬಳಸಿಕೊಳ್ಳಬಾರದು” ಎಂದು ಹೇಳಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...