ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಈಗ ಐಪಿಎಲ್‌ ಹೀರೋ!

Date:

ಗುರಿಯಡೆಗಿನ ಸ್ಪಷ್ಟತೆ ಜೊತೆಗೆ ನಿರಂತರ ಪ್ರಯತ್ನ ಜಾರಿಯಲ್ಲಿದ್ದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ಯುವ ಕ್ರಿಕೆಟಿಗ ಆಕಾಶ್‌ ಮಧ್ವಾಲ್‌ ಅತ್ಯುತ್ತಮ ಉದಾಹರಣೆ.

ಬುಧವಾರ ಚೆನ್ನೈನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಯುವ ಬೌಲರ್‌ ಆಕಾಶ್‌ ಮಧ್ವಾಲ್‌ ಹೀರೋ ಆಗಿ ಹೊರಹೊಮಿದ್ದಾರೆ.

ಐಪಿಎಲ್‌ 16ನೇ ಆವೃತ್ತಿಯ ಎಲಿಮಿನೇಟರ್‌ ಪಂದ್ಯದಲ್ಲಿ ಲಖನೌ ವಿರುದ್ಧ ಮುಂಬೈ ಇಂಡಿಯನ್ಸ್‌ 81 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, ಕ್ವಾಲಿಫೈಯರ್-2 ಹಂತ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಬಿಗು ಬೌಲಿಂಗ್‌ ದಾಳಿ ಸಂಘಟಿಸಿದ್ದ ಆಕಾಶ್‌ ಮಧ್ವಾಲ್‌, 3.3 ಓವರ್‌ನಲ್ಲಿ ಕೇವಲ 5 ರನ್‌ ನೀಡಿ 5 ಪ್ರಮುಖ ವಿಕೆಟ್‌ ಪಡೆದಿದ್ದರು. ಆ ಮೂಲಕ ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಮಧ್ವಾಲ್‌ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೊದಲು 2009ರ ಐಪಿಎಲ್‌ನಲ್ಲಿಆರ್‌ಸಿಬಿ ಪರ ಅನಿಲ್‌ ಕುಂಬ್ಳೆ ರಾಜಸ್ಥಾನ ರಾಯಲ್ಸ್ ಎದುರು ಕೇವಲ 5 ರನ್ ನೀಡಿ 5 ವಿಕೆಟ್ (3.1 ಓವರ್‌) ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ಜೊತೆಗೆ ಐಪಿಎಲ್ ಪ್ಲೇ ಆಫ್‌ನಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್, ಐಪಿಎಲ್‌ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅನ್‌ಕ್ಯಾಪ್ಡ್‌ ಪ್ಲೆಯರ್‌ ಎನ್ನುವ ಅಪರೂಪದ ದಾಖಲೆಗೂ ಮಧ್ವಾಲ್‌ ಭಾಜನರಾಗಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌!

2019ರವರೆಗೂ ಸ್ಥಳೀಯವಾಗಿ ಟೆನಿಸ್‌ ಬಾಲ್‌ನಲ್ಲಿ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಅವರ ವೃತ್ತಿ ಬದುಕಿಗೆ ತಿರುವು ನೀಡಿದವರು ಟೀಮ್‌ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವಾಸೀಂ ಜಾಫರ್‌. ಉತ್ತರಾಖಂಡ ರಾಜ್ಯ ತಂಡದ ಕೋಚ್‌ ಆಗಿದ್ದ ಜಾಫರ್‌, ಮಧ್ವಾಲ್‌ ಅವರ ಬೌಲಿಂಗ್‌ ಶೈಲಿಯನ್ನು ಗಮನಿಸಿ, ಲೆದರ್ ಬಾಲ್‌ ಕ್ರಿಕೆಟ್‌ ಆಡುವಂತೆ ಸಲಹೆ ನೀಡಿ, ಪ್ರೋತ್ಸಾಹಿಸಿದರು.

ಇದಾದ ಬಳಿಕ ಕೋಚ್‌ ಅವತಾರ್‌ ಸಿಂಗ್‌ ಬಳಿ ವೇಗದ ಬೌಲಿಂಗ್‌ನ ಪಟ್ಟುಗಳನ್ನು ಕರಗತ ಮಾಡಿಕೊಂಡ ಮಧ್ವಾಲ್‌, 2023ರ ದೇಶೀಯ ಟೂರ್ನಿಗಳಲ್ಲಿ ಉತ್ತರಾಖಂಡ ತಂಡದ ನಾಯಕನಾಗಿ ಆಯ್ಕೆಯಾದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

ಉತ್ತರಾಖಾಂಡದ ರೂರ್ಕಿಯ ಧಂದೇರಾ ಮೂಲದ ಮಧ್ವಾಲ್‌,  2013ರಲ್ಲಿ ಅಪಘಾತವೊಂದರಲ್ಲಿ  ತಂದೆಯನ್ನು ಕಳೆದುಕೊಂಡಿದ್ದರು. ಅವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಸಿವಿಲ್ ಎಂಜಿನಿಯರಿಂಗ್‌ ಪದವಿಧರರಾಗಿರುವ ಆಕಾಶ್‌, 2019ರಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು. 2022ರ ಐಪಿಎಲ್​ ವೇಳೆ ಗಾಯಾಳು ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಿಸಿಕೊಂಡಿತ್ತು. ಬಳಿಕ 2023ರ ಮೆಗಾ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಮಧ್ವಾಲ್‌ರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಈ ಬಾರಿ ವೇಗಿ ಜೋಫ್ರಾ ಆರ್ಚರ್‌ ಗಾಯದ ಕಾರಣ  ಕೆಲ ಪಂದ್ಯಗಳಿಂದ ಹೊರಗುಳಿದ ಕಾರಣ ಅವಕಾಶ ಪಡೆದ ಮಧ್ವಾಲ್, ನಿರ್ಣಾಯಕ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.‌

ಇದುವರೆಗೂ 10 ಪ್ರಥಮ ದರ್ಜೆ ಪಂದ್ಯಗಳಲ್ಲಿ 12 ವಿಕೆಟ್, 17 ಲಿಸ್ಟ್-ಎನಲ್ಲಿ 18 ವಿಕೆಟ್ ಹಾಗೂ 29 ಟಿ20 ಪಂದ್ಯಗಳಲ್ಲಿ ಒಟ್ಟು 29 ವಿಕೆಟ್ ಉರುಳಿಸಿದ್ದಾರೆ. ಪ್ರಸ್ತುತ ಐಪಿಎಲ್​ನಲ್ಲಿ 7 ಪಂದ್ಯಗಳನ್ನಾಡಿರುವ ಮಧ್ವಾಲ್ 13 ವಿಕೆಟ್​​ ಕಬಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...

ಐಪಿಎಲ್ | ‘ಪವರ್ ಪ್ಲೇ’ಯಲ್ಲಿ 125 ರನ್ ಚಚ್ಚಿದ ಹೈದರಾಬಾದ್: T20 ಇತಿಹಾಸದಲ್ಲೇ ಹೊಸ ದಾಖಲೆ

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌)ನ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ...